ವಿಶೇಷಚೇತನರು-ವಯೋದ್ಧರಿಗೆ ಅಂಚೆ ಮತದಾನಕ್ಕೆ ಅವಕಾಶ
Team Udayavani, Oct 18, 2021, 7:16 PM IST
ಹಾವೇರಿ: ಹಾನಗಲ್ಲ ವಿಧಾನಸಭಾ ಉಪಚುನಾವಣೆ ನಿಮಿತ್ತ ಅ.18 ರಂದು ಬೆಳಗ್ಗೆ 8 ರಿಂದ ಸಂಜೆ 6 ಗಂಟೆಯವರೆಗೆ ವಿಶೇಷಚೇತನರಿಗೆ ಹಾಗೂ ಎಂಬತ್ತು ವರ್ಷ ಮೇಲ್ಪಟ್ಟ ಹಿರಿಯ ನಾಗರಿಕ ಮತದಾರರಿಗೆ ಅಂಚೆ ಮತಪತ್ರದಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅಥವಾ ಅ.30 ರಂದು ನಡೆಯವ ಮತದಾನದ ದಿನ ನೇರವಾಗಿ ಮತಗಟ್ಟೆಗೆ ತೆರಳಿ ಮತದಾನ ಮಾಡುವ ಆಯ್ಕೆ ನೀಡಲಾಗಿತ್ತು. ಹಾನಗಲ್ಲ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 80 ವರ್ಷ ಮೇಲ್ಪಟ 6905 ಮತದಾರರು ಹಾಗೂ 3778 ವಿಕಲಚೇತನ ಮತದಾರರಿದ್ದಾರೆ.
ಈ ಪೈಕಿ ಕ್ಷೇತ್ರದ 450 ಹಿರಿಯ ನಾಗರಿಕರು ಮತ್ತು 28 ಜನ ವಿಕಲಚೇತನರು ಅಂಚೆ ಮತಪತ್ರಗಳ ಮೂಲಕ ಮತದಾನ ಮಾಡಲು ಒಪ್ಪಿಗೆ ನೀಡಿದ್ದಾರೆ ಈ ಹಿನ್ನೆಲೆಯಲ್ಲಿ ಅಂಚೆ ಮತಪತ್ರ ಮೂಲಕ ಮತದಾನ ಮಾಡುವ ಪ್ರಕ್ರಿಯೆಗಾಗಿ ನೇಮಕ ಮಾಡಲಾದ ಮತಗಟ್ಟೆ ಅಧಿ ಕಾರಿಗಳು ಹಾಗೂ ಸೂಕ್ಷ್ಮ ವೀಕ್ಷಕರ ತಂಡ ಹಿರಿಯ ಹಾಗೂ ವಿಕಲ ಚೇತನರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ಕೈಗೊಳ್ಳಲಿದ್ದಾರೆ. ಅಂಚೆ ಮತಪತ್ರ ಮೂಲಕ ಮತದಾನ ಮಾಡಲು ಒಪ್ಪಿಗೆ ನೀಡಿರುವವರಿಗೆ ಈಗಾಗಲೇ ವೇಳಾ ಪಟ್ಟಿ ಕುರಿತು ಮಾಹಿತಿ ನೀಡಲಾಗಿದೆ.
ಅನಿವಾರ್ಯ ಕಾರಣಗಳಿಂದಾಗಿ ಅ.18ರಂದು ಮತದಾನ ಮಾಡಲು ಸಾಧ್ಯವಾಗದಿದ್ದರೆ ಅ.19 ರಂದು ಸಹ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಪ್ರಕ್ರಿಯೆಗಾಗಿ ತಾಲೂಕಿನಾದ್ಯಂತ 7 ತಂಡ ರಚಿಸಲಾಗಿದೆ ಎಂದು ಹಾನಗಲ್ಲ ಚುನಾವಣಾ ಅ ಧಿಕಾರಿ ಅಶೋಕ ತೇಲಿ ಹಾಗೂ ಸಹಾಯಕ ಚುನಾವಣಾ ಧಿಕಾರಿ ತಹಶೀಲ್ದಾರ್ ಎರಿಸ್ವಾಮಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.