ಅಂಬಾಗಿಲು-ಪೆರಂಪಳ್ಳಿ ರಸ್ತೆ ಕಾಮಗಾರಿ ಪುನಃ ಆರಂಭ
Team Udayavani, Feb 22, 2022, 12:22 PM IST
ಉಡುಪಿ : ಕೆಲವು ದಿನಗಳಿಂದ ಸ್ಥಗಿತಗೊಂಡಿದ್ದ ಅಂಬಾಗಿಲು-ಪೆರಂಪಳ್ಳಿ ಮೂಲಕ ಮಣಿಪಾಲ ಸಂಪರ್ಕಿಸುವ ಚತುಷ್ಪಥ ರಸ್ತೆ ಕಾಮಗಾರಿ ಪುನಃ ಆರಂಭಗೊಂಡಿದೆ.
ಕಾಮಗಾರಿ ಸ್ಥಗಿತವಾಗಿದ್ದ ಬಗ್ಗೆ ಉದಯವಾಣಿ ಫೆ. 14ರಂದು “ಅರ್ಧಕ್ಕೆ ನಿಂತ ಅಂಬಾಗಿಲು- ಪೆರಂಪಳ್ಳಿ ರಸ್ತೆ ಕಾಮಗಾರಿ!’ ಶೀರ್ಷಿಕೆ ಅಡಿಯಲ್ಲಿ ವಿಸ್ತೃತ ವರದಿ ಪ್ರಕಟಿಸಿತ್ತು.
ಇದಕ್ಕೆ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರರ ಮೂಲಕ ಕಾಮಗಾರಿ ಪುನಃ ಆರಂಭಿಸಿದೆ. ಇದೀಗ ರಸ್ತೆಗೆ ಅಂಬಾಗಿಲಿನಿಂದ ಬಲಬದಿಯಲ್ಲಿ ಯಂತ್ರಗಳ ಮೂಲಕ ಜಲ್ಲಿಕಲ್ಲನ್ನು ಹೊದೆಸಿ, ಸಮತಟ್ಟು ಮಾಡುವ ಕೆಲಸ ನಡೆಯುತ್ತಿದೆ. 23 ಕೋ. ರೂ. ವೆಚ್ಚದಲ್ಲಿ ಚತುಷ್ಪಥ ಕಾಮಗಾರಿ ರಸ್ತೆ ನಿರ್ಮಾಣ ಯೋಜನೆ ರೂಪಿಸಲಾಗಿದ್ದು, ಒಟ್ಟು
3.9 ಕಿ.ಮೀ. ರಸ್ತೆಯಲ್ಲಿ 1.5 ಕಿ.ಮೀ. ರಸ್ತೆ ಕಾಮಗಾರಿ ಬಾಕಿ ಉಳಿದಿತ್ತು. ಕಾಮಗಾರಿ ಬೇಗ ನಿರ್ವಹಿಸುವಂತೆ. ಇಲಾಖೆ ಹಿರಿಯ ಎಂಜಿನಿಯರ್, ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡಿದ್ದರು.
ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದರಿಂದ ಅಂಬಾಗಿಲಿನಿಂದ ರೈಲ್ವೇ ಮೇಲ್ಸೇತುವೆವರೆಗಿನ ರಸ್ತೆ ತೀರ ಹದಗೆಟ್ಟಿತ್ತು. ವಿಪರೀತ ಧೂಳು, ಕೆಸರು, ಕಲ್ಲುಗಳ ಕಣದಿಂದ ದ್ವಿಚಕ್ರ ವಾಹನ ಸವಾರರು, ಅರ್ಧಂಬರ್ಧ ಕಾಮಗಾರಿಯಿಂದ ರಸ್ತೆ ಬದಿಯ ಅಂಗಡಿ, ಮುಂಗಟ್ಟು, ಹೊಟೇಲ್ ವ್ಯಾಪಾರಿಗಳು, ಸ್ಥಳೀಯರು ಧೂಳಿನಿಂದ ಹೈರಾಣಾಗಿದ್ದರು.
ಮುಂದಿನ 10 ದಿನಗಳಲ್ಲಿ ಪೂರ್ಣ
ಅರ್ಧಕ್ಕೆ ನಿಂತಿದ್ದ ಅಂಬಾಗಿಲಿನಿಂದ ರೈಲ್ವೇ ಮೇಲ್ಸೇತುವೆವರೆಗಿನ 1.5 ಕಿ.ಮೀ. ರಸ್ತೆ ಕಾಮಗಾರಿ ಪುನಃ ಆರಂಭಗೊಂಡಿದೆ. ಮೊದಲ ಹಂತದಲ್ಲಿ ಒಂದು ಬದಿಯ ಕಾಮಗಾರಿ ಮುಂದಿನ 10 ದಿನದಲ್ಲಿ ಪೂರ್ಣಗೊಳಿಸಲಿದ್ದೇವೆ. ಮುಂದೆ ಕೆಲಸ ನಿರಂತರ ನಡೆಯಲಿದ್ದು, ಶೀಘ್ರ ಇನ್ನೊಂದು ಬದಿ ಕಾಮಗಾರಿ ಪ್ರಾರಂಭಿಸಲಿದ್ದೇವೆ.
-ಜಗದೀಶ್ ಭಟ್, ಎಇಇ, ಲೋಕೋಪಯೋಗಿ ಇಲಾಖೆ, ಉಡುಪಿ.
ಇದನ್ನೂ ಓದಿ : ಸ್ಮಾರ್ಟ್ ನಗರದಲ್ಲಿ ಸ್ಮಾರ್ಟ್ “ಸೈಕಲ್ ಟ್ರ್ಯಾಕ್ ‘! ಸೈಕಲ್ ಸ್ನೇಹಿ ಮಂಗಳೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.