ಅರ್ಧಕ್ಕೆ ನಿಂತ ಅಂಬಾಗಿಲು-ಪೆರಂಪಳ್ಳಿ ರಸ್ತೆ ಕಾಮಗಾರಿ! ಧೂಳುಮಯ ರಸ್ತೆಯಲ್ಲಿ ಸಂಚಾರ ಸವಾಲು

Team Udayavani, Feb 14, 2022, 1:34 PM IST

ಅರ್ಧಕ್ಕೆ ನಿಂತ ಅಂಬಾಗಿಲು-ಪೆರಂಪಳ್ಳಿ ರಸ್ತೆ ಕಾಮಗಾರಿ! ಧೂಳುಮಯ ರಸ್ತೆಯಲ್ಲಿ ಸಂಚಾರ ಸವಾಲು

ಉಡುಪಿ : ಅಂಬಾಗಿಲು- ಪೆರಂಪಳ್ಳಿ ಮೂಲಕ ಮಣಿಪಾಲ ಸಂಪರ್ಕಿಸುವ ಚತುಷ್ಪಥ ರಸ್ತೆ ಕಾಮಗಾರಿ ಕೆಲವು ದಿನಗಳಿಂದ ಅರ್ಧಕ್ಕೆ ನಿಂತಿದೆ. ಹಳೆಯ ಇಕ್ಕಟ್ಟಾದ ರಸ್ತೆ ವಿಸ್ತರಣೆಗೊಳಿಸಿ ಭೂಸ್ವಾಧೀನ ಪ್ರಕ್ರಿಯೆ ಮೂಲಕ ವ್ಯವಸ್ಥಿತ ರಸ್ತೆ ರೂಪಿಸುವ ಯೋಜನೆ ಇದಾಗಿದೆ. ಪೆರಂಪಳ್ಳಿ ಮೇಲ್ಸೇತುವೆಯಿಂದ ಮೂಡು ಪೆರಂಪಳ್ಳಿ ಚರ್ಚ್‌ವರೆಗೆ ಉತ್ತಮ ರಸ್ತೆ ನಿರ್ಮಾಣ ಗೊಂಡಿದೆ.

ಆದರೆ ಅಂಬಾಗಿಲಿನಿಂದ ರೈಲ್ವೇ ಮೇಲ್ಸೇತುವೆ ವರೆಗಿನ ರಸ್ತೆ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಆರಂಭದಲ್ಲಿ ವೇಗವಾಗಿ ಸಾಗಿದ್ದ ಕಾಮಗಾರಿ ಹಲವು ದಿನಗಳಿಂದ ಕೆಲಸ ನಡೆಯದೆ ಪ್ರಸ್ತುತ ಜಲ್ಲಿ, ಮಣ್ಣಿನ ರಸ್ತೆಯಾಗಿ ರೂಪುಗೊಂಡಿದೆ.

ಜನರ ಪರದಾಟ
ವಿಪರೀತ ಧೂಳು, ಕೆಸರು, ಕಲ್ಲುಗಳ ಕಣದಿಂದ ದ್ವಿಚಕ್ರ ವಾಹನ ಸವಾರರು ಪ್ರತಿನಿತ್ಯ ಸಂಕಷ್ಟಪಡುತ್ತಿದ್ದಾರೆ. ಧೂಳು ಏಳದಂತೆ ನೀರು ಸಿಂಪಡಿಸಲಾಗುತ್ತಿದೆ. ಅದು ಕೆಲವೆಡೆ
ಕೆಸರಾಗುತ್ತದೆ. ಇದರಿಂದ ಕೆಲವು ಮಹಿಳೆ ಯರು ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದಾರೆ. ರಸ್ತೆ ಬದಿ ಅಂಗಡಿ, ಮುಂಗಟ್ಟು, ಹೊಟೇಲ್‌ ವ್ಯಾಪಾರಿಗಳು, ಸ್ಥಳೀಯರು ಇದರಿಂದ ತತ್ತರಿಸಿ ಹೋಗಿದ್ದಾರೆ. ಶೀಘ್ರ ರಸ್ತೆ ನಿರ್ಮಿಸುವಂತೆ ಸಂಬಂಧಪಟ್ಟ ಇಲಾಖೆ, ಅಧಿಕಾರಿ ಗಳನ್ನು ನಾಗರಿಕರು ಆಗ್ರಹಿಸಿದ್ದಾರೆ.

ಗುತ್ತಿಗೆದಾರರಿಂದ ವಿಳಂಬ
23 ಕೋ. ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ.,ಟಿಡಿಆರ್‌ ಪ್ರಕ್ರಿಯೆ ಮೂಲಕ ಭೂಸ್ವಾಧೀನ, ಒಟ್ಟು 3.9 ಕಿ.ಮೀ. ರಸ್ತೆಯಲ್ಲಿ ಉಳಿದ 1.5 ಕಿ.ಮೀ. ರಸ್ತೆ ಕಾಮಗಾರಿ ಬಾಕಿ ಇದೆ. 2020ರಲ್ಲಿ ಶಾಸಕ ಕೆ. ರಘುಪತಿ ಭಟ್‌ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ದ್ದರು. ಮೂವರು ಗುತ್ತಿಗೆದಾರರಿಗೆ ಕಾಮಗಾರಿ ನೀಡಲಾಗಿತ್ತು. ರೈಲ್ವೇ ಮೇಲ್ಸೇತುವೆಯಿಂದ ಮಣಿಪಾಲ ಕಡೆಗೆ ಸಾಗುವ ರಸ್ತೆ ನಿರ್ಮಾಣ ಇಬ್ಬರು ಗುತ್ತಿಗೆದಾರರಿಗೆ ವಹಿಸಲಾಗಿದ್ದು, ಈ ಭಾಗ ಸಂಪೂರ್ಣ ಮುಗಿಯುತ್ತ ಬಂದಿದೆ. ಆದರೆ ಅಂಬಾಗಿಲಿನಿಂದ ರೈಲ್ವೇ ಮೇಲ್ಸೇತುವೆ ವರೆಗೆ ಮಾತ್ರ ಕೆಲಸವನ್ನು ಹಲವು ದಿನ ಗಳಿಂದ ಅರ್ಧಕ್ಕೆ ನಿಲ್ಲಿಸಲಾಗಿದೆ. ಗುತ್ತಿಗೆದಾರರು ಬೇರೊಂದು ಕಡೆ ಕಾಮಗಾರಿ ವಹಿಸಿ ಕೊಂಡಿದ್ದು, ವಿಳಂಬಕ್ಕೆ ಕಾರಣ ಎಂದು ಸಾರ್ವಜನಿಕರು, ಸ್ಥಳಿಯ ಜನಪ್ರತಿನಿಧಿಗಳು ತಿಳಿಸಿದ್ದಾರೆ.

ಜನರಿಗೆ ಸಮಸ್ಯೆ
ಅಂಬಾಗಿಲು- ಪೆರಂಪಳ್ಳಿ ರಸ್ತೆ ಕಾಮಗಾರಿ ಸಂಬಂಧಿಸಿ ಗುತ್ತಿಗೆದಾರರು ವಿಳಂಬ ಮಾಡುತ್ತಿರು ವುದರಿಂದ ಜನರಿಗೆ ಕಿರಿಕಿರಿಯಾಗುತ್ತಿದೆ. ಧೂಳಿನಿಂದ ವಾಹನ ಸವಾರರು, ಸ್ಥಳೀಯರು ಹೈರಾಣಾಗಿದ್ದಾರೆ. ಶೀಘ್ರ ಕಾಮಗಾರಿ ಮುಗಿಸುವಂತೆ ಶಾಸಕರ ಮೂಲಕ ಸೂಚನೆ ನೀಡಿದ್ದೇವೆ.
-ಗಿರಿಧರ ಆಚಾರ್ಯ, ಕರಂಬಳ್ಳಿ ವಾರ್ಡ್‌ , ನಗರಸಭಾ ಸದಸ್ಯ.

ಗುತ್ತಿಗೆದಾರನಿಗೆ ನೋಟಿಸ್‌
ಅಂಬಾಗಿಲಿನಿಂದ ರೈಲ್ವೇ ಮೇಲ್ಸೇತುವೆ ವರೆಗೆ 1.5 ಕಿ.ಮೀ ರಸ್ತೆ ಕಾಮಗಾರಿ ಬಾಕಿ ಇದ್ದು, ಗುತ್ತಿಗೆದಾರರಿಗೆ ಕೆಲಸ ಪೂರ್ಣಗೊಳಿ ಸಲು ನೋಟಿಸ್‌ ಜಾರಿ ಮಾಡಿದ್ದೇವೆ. ಶೇ.80ರಷ್ಟು ಕೆಲಸವಾಗಿದೆ. ಹಂತಿಮ ಹಂತದ ಡಾಮರು ಕೆಲಸ ಮಾತ್ರ ಬಾಕಿ ಇದ್ದು, ಶೀಘ್ರ ಕಾಮಗಾರಿ ಮುಗಿಸಲು ಕ್ರಮ ಕೈಗೊಳ್ಳಲಾಗುವುದು.

-ಜಗದೀಶ್‌ ಭಟ್‌, ಎಇಇ, ಲೋಕೊಪಯೋಗಿ ಇಲಾಖೆ, ಉಡುಪಿ.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.