ಅಮೆರಿಕ ಅಧಿಕಾರಿಗಳ ಪಶ್ಚಾತ್ತಾಪ : ಅನ್‌ಲಾಕ್ ಮಾಡಿದ್ದೇ ತಪ್ಪಾಯ್ತು!
Team Udayavani, Jun 29, 2020, 3:38 PM IST
ವಾಷಿಂಗ್ಟನ್: ಕೋವಿಡ್ ಸೋಂಕಿತರ ಪ್ರಮಾಣ ಅಮೆರಿದಲ್ಲಿ ಇನ್ನಿಲ್ಲದಂತೆ ಏರಿಕೆ ಕಾಣುತ್ತಿದ್ದು ಪರಿಸ್ಥಿತಿ ತೀವ್ರವಾಗಿ ಬಿಗಡಾಯಿಸುತ್ತಿದೆ. ಶನಿವಾರ ಒಂದೇ ದಿನದಲ್ಲಿ ಅಮೆರಿಕದಲ್ಲಿ ಹೊಸದಾಗಿ 43,581 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ. ಟೆಕ್ಸಾಸ್‌ವೊಂದರಲ್ಲಿಯೇ 5,000ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. ಎಗ್ಗಿಲ್ಲದಂತೆ ಏರಿಕೆಯಾಗುತ್ತಿರುವ ಸೋಂಕಿತರ ಸಂಖ್ಯೆ ಕಂಡು ಅಧಿಕಾರಿಗಳು ಆತಂಕಕ್ಕೀಡಾಗಿದ್ದು, ಲಾಕ್‌ಡೌನ್ ನಿಯಮಗಳನ್ನು ತೆರವುಗೊಳಿಸಿದ್ದಕ್ಕಾಗಿ ಈಗ ಇನ್ನಿಲ್ಲದಂತೆ ಪರಿತಪಿಸುತ್ತಿದ್ದಾರೆ.
ಆನ್‌ಲಾಕ್ ಮಾಡಿದೇ ತಪ್ಪಾಯ್ತು
ಹೆಚ್ಚುತ್ತಿರುವ ಪ್ರಕರಣಗಳಿಂದಾಗಿ ಪಾರದಾಡುತ್ತಿರುವ ಆರೋಗ್ಯಧಿಕಾರಿಗಳು ಲಾಕ್‌ಡೌನ್ ಹಿಂಪಡೆಯುವ ನಿರ್ಧಾರದ ಕುರಿತು ಅಸಮಾಧನ ವ್ಯಕ್ತಪಡಿಸಿದ್ದು, ಆನ್‌ಲಾಕ್ ಮಾಡಲು ಅವಕಾಶ ಮಾಡಿಕೊಟ್ಟಿದ್ದೇ ತಪ್ಪಾಯಿತು. ಇದಕ್ಕಾಗಿ ಈಗ ಭಾರೀ ಪ್ರಮಾಣದ ಬೆಲೆ ತೆರೆಯುವಂತಾಗಿದೆ ಎಂದು ಅಧಿಕಾರಿಗಳು ಹಣೆ ಚಚ್ಚಿಕೊಳ್ಳುತ್ತಿದ್ದಾರೆ.
ಮುನ್ನೆಚ್ಚರಿಕೆ ತೆಗೆದುಕೊಳ್ಳದ ಜನರರು
ಯಥಾ ಪ್ರಜಾ ತಥಾ ರಾಜಾ ಅನ್ನುವಂತೆ ಸೋಂಕು ಪ್ರಾರಂಭದ ಘಟ್ಟದಿಂದ ನಾವು ಸುರಕ್ಷಿತವಾಗಿದ್ದೇವೆ ಹೆದರುವ ಆವಶ್ಯಕತೆಯೇ ಇಲ್ಲ ಎಂಬ ಮೊಂಡುವಾದ ಮಂಡಿಸುತ್ತಾ ಬಂದಿದ್ದ ಅಧ್ಯಕ್ಷ ಟ್ರಂಪ್ ಹಾದಿಯನ್ನೇ ಅಲ್ಲಿನ ಸಾರ್ವಜನಿಕರು ಅನುಸರಿಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳುತ್ತಿಲ್ಲ. ಬೇಕಾಬಿಟ್ಟಿಯಾಗಿ ವರ್ತಿಸುತ್ತ ತಿರುಗಾಡುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಕಿಡಿಕಾರುತ್ತಿದ್ದಾರೆ.
ಈ ಮೊದಲು ಜನಜೀವನ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ, ಸುಧಾರಿಸಿಕೊಳ್ಳುತ್ತಿದ್ದಾರೆ ಎಂದುಕೊಳ್ಳುವಾಗಲೇ ಸೋಂಕು ತೀವ್ರವಾಗಿ ಹೆಚ್ಚಳವಾಗುತ್ತಿದ್ದು, ಜನರ ವರ್ತನೆಯಿಂದ ಬೇಸೆತ್ತಿರುವ ಅಧಿಕಾರಿಗಳು ಪಬ್ ಹಾಗೂ ಬಾರ್‌ಗಳನ್ನು ತೆರೆಯಲು ನೀಡಲಾಗಿದ್ದ ಅನುಮತಿಯನ್ನು ಹಿಂಪಡೆದುಕೊಳ್ಳುತ್ತಿದ್ದಾರೆ.
ಪಾರ್ಟಿ ಬದಲಾಯಿಸಿದ ಸೋಂಕು
ಈ ಮೊದಲು ಹಿರಿಯರನ್ನು ಗುರಿಯಾಗಿಸಿಕೊಳ್ಳುತ್ತಿದ್ದ ಸೋಂಕು ಸದ್ಯ ತನ್ನ ಬಣ ಬದಲಾಯಿಸಿದ್ದು, ಯುವ ಸಮುದಾಯದತ್ತ ತನ್ನ ದೃಷ್ಟಿ ಕೇಂದ್ರೀಕರಿಸಿಕೊಂಡಿದೆ! ಇನ್ನು ಕಳೆದ ಕೆಲ ದಿನಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಯುವಕರು ಸೋಂಕಿಗೆ ತುತ್ತಾಗುತ್ತಿದ್ದು, ಆ ಪೈಕಿ ಗುಣ ಲಕ್ಷಣ ಹೊಂದಿಲ್ಲದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಈ ಮೂಲಕ ಸೋಂಕು ಸಮುದಾಯ ಮಟ್ಟದಲ್ಲಿ ಪಸರಿಸಿದ್ದು, ಅದರ ಮೂಲ ಪತ್ತೆಯಾಗದ ಕಾರಣ ಯಾರನ್ನು ಎಲ್ಲಿ ಕ್ವಾರಂಟೈನ್ ಮಾಡಬೇಕು, ಯಾರನ್ನು ನಿಗಾದಲ್ಲಿ ಇಡಬೇಕು ಎಂಬುದೇ ತಿಳಿಯುತ್ತಿಲ್ಲ ಎಂದು ಎಂದು ತಜ್ಞರು ಕಳವಳ ವ್ಯಕ್ತಪಡಿಸಿ¨ªಾರೆ. ಇದಕ್ಕೆ ಧ್ವನಿಗೂಡಿಸಿರುವ ಸಾಂಕ್ರಾಮಿಕ ರೋಗಗಳ ತಜ್ಞ ಅಂಥೋನಿ ಫೌಸಿ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ ಎಂದು ಹೇಳಿದ್ದಾರೆ.
ಲಾಕ್‌ಡೌನ್ ವಿನಾಯಿತಿ ನೀಡಿದ ರಾಜ್ಯಗಳು
ಪರಿಸ್ಥಿತಿ ಕೈ ಮೀರಿ ಹೋಗುತ್ತಿದ್ದರು ನ್ಯೂಯಾರ್ಕ್, ನ್ಯೂಜೆರ್ಸಿ, ಕನೆಕ್ಟಿಕಟ್‌ಗಳು ಲಾಕ್‌ಡೌನ್ ನಿಬಂಧನೆಗಳನ್ನು ಸಡಿಲಿಕೆ ಮಾಡುತ್ತಿದ್ದು, ಸಂಚಾರ ಸೇರಿದಂತೆ ವಿವಿಧ ಚಟುವಟಿಕೆಗಳಿಗೆ ವಿನಾಯಿತಿ ನೀಡುತ್ತಿದೆ.
ಇನ್ನು ಕನೆಕ್ಟಿಕಟ್ ರಾಜ್ಯ ಶಾಲಾ- ಕಾಲೇಜುಗಳನ್ನು ಪ್ರಾರಂಭಿಸಲು ಮುಂದಾಗಿದ್ದು, ಶೈಕ್ಷಣಿಕ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೂತನ ಮಾರ್ಗಸೂಚಿಗಳನ್ನು ಘೋಷಿಸಿದೆ. ಆದರೆ ಪ್ಲೋರಿಡಾದಲ್ಲಿ ಮಾತ್ರ ಲಾಕ್‌ಡೌನ್ ನಿರ್ಬಂಧಗಳನ್ನು ಮತ್ತೆ ವಿಧಿಸಲಾಗುತ್ತಿದ್ದು, ಈ ರಾಜ್ಯದಲ್ಲಿ 9 ಸಾವಿರ ಹೊಸ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.