ಅಮೂಲ್ಯ ನಡೆಗೆ ಬಹುಮಾನ್ಯರ ಖಂಡನೆ
Team Udayavani, Feb 22, 2020, 3:09 AM IST
ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ನಡೆಗೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಯುವತಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯದ ಹಲವೆಡೆ ಹಿಂದೂಪರ, ಕನ್ನಡಪರ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿದವು. ಇದೇ ವೇಳೆ, ರಾಜಕೀಯ ಪಕ್ಷಗಳ ನಾಯಕರು, ವಿವಿಧ ಕ್ಷೇತ್ರಗಳ ಗಣ್ಯರು ಸೇರಿ ಬಹುಮಾನ್ಯ ಮುಖಂಡರೆಲ್ಲಾ ಆಕೆಯ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೂಲ್ಯಳ ದೇಶದ್ರೋಹಿ ಹೇಳಿಕೆ ವಿರುದ್ಧ ವ್ಯಕ್ತವಾಗಿರುವ ಆಕ್ರೋಶದ ಕಿಡಿಗಳಿವು.
ಅಮೂಲ್ಯ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ
ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ಹಿಂದೂಪರ, ಕನ್ನಡಪರ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿದವು. ಮಡಿಕೇರಿಯಲ್ಲಿ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು, ಅಮೂಲ್ಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅರಸಿಕೆರೆ, ಬೇಲೂರು, ಹಾಸನ ಸೇರಿ ಹಾಸನ ಜಿಲ್ಲೆಯ ವಿವಿಧೆಡೆ, ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ), ಎಐಡಿಎಸ್‌ಒ (ಅಖೀಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ)ಯ ಕಾರ್ಯಕರ್ತರು, ಪಾಕಿಸ್ತಾನ ಪರ ಘೋಷಣೆ ಕೂಗಿ ದೇಶದ್ರೋಹಿ ಧೋರಣೆ ತೋರಿರುವ ಅಮೂಲ್ಯರನ್ನು ಕೂಡಲೇ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಕೋಲಾರದಲ್ಲಿ ನಗರಠಾಣೆ ಎದುರು ಪ್ರತಿಭಟನೆ ನಡೆಸಿದ ಭಜರಂಗದಳದ ಕಾರ್ಯಕರ್ತರು, ಆರಕ್ಷಕ ಉಪನಿರೀಕ್ಷಕರಿಗೆ ದೂರು ಸಲ್ಲಿಸಿ, ಅಮೂಲ್ಯ ಹಾಗೂ ಅವರಿಗೆ ಪ್ರೇರಣೆ ನೀಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿದರು. ಇದೇ ವೇಳೆ, ಬೆಂಗಳೂರು, ಚಿಕ್ಕಬಳ್ಳಾಪುರ, ಕಲಬುರಗಿ, ರಾಮನಗರ, ಹುಬ್ಬಳ್ಳಿ, ಶಿವಮೊಗ್ಗ, ಉಡುಪಿ, ಮಂಡ್ಯ ಸೇರಿ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು. ಈ ಮಧ್ಯೆ, ಅಮೂಲ್ಯ ಲಿಯೋನಾ ಮತ್ತು ಆರಿದ್ರಾ ಹಾಗೂ ಕಾರ್ಯಕ್ರಮ ಸಂಘಟಕರ ಗಡಿಪಾರಿಗೆ ಒತ್ತಾಯಿಸಿ ಹೂವಿನಹಡಗಲಿಯಲ್ಲಿ ಶನಿವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪಾಕಿಸ್ತಾನ ಪರ ಘೋಷಣೆ ಕೂಗುವುದು ದೇಶದ್ರೋಹದ ಕೆಲಸ. ಕಾನೂನಿನ ದೃಷ್ಟಿಯಿಂದ ಈ ರೀತಿಯ ಹೇಳಿಕೆ ಕೊಡುವುದು ತಪ್ಪು. ಕೆಲವರು ಯುವ ಜನರಿಗೆ ಈ ರೀತಿ ಪ್ರಚೋದನೆ ನೀಡುತ್ತಿದ್ದಾರೆ. ಈ ರೀತಿ ಪ್ರಚೋದನೆ ನೀಡುವುದೂ ಕೂಡ ದೇಶದ್ರೋಹದ ಕೆಲಸ. ಕಾರ್ಯಕ್ರಮ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳುವುದು ಪೊಲೀಸರಿಗೆ ಬಿಟ್ಟ ವಿಚಾರ. ಕಾಶ್ಮೀರದಲ್ಲಿ ಕೂಡ ಯುವಕರನ್ನು ಇದೇ ರೀತಿಯಲ್ಲಿ ಪ್ರಚೋದನೆ ಮಾಡುತ್ತಿದ್ದರು. 370ನೇ ವಿಧಿ ರದ್ದುಪಡಿಸುವ ಮೂಲಕ ಕೇಂದ್ರ ಸರ್ಕಾರ ಅದಕ್ಕೆಲ್ಲ ಬ್ರೇಕ್ ಹಾಕುವ ಕೆಲಸ ಮಾಡಿದೆ.
-ಬಿ.ಸಿ.ಪಾಟೀಲ್, ಕೃಷಿ ಸಚಿವ
ಪಾಕಿಸ್ತಾನದ ಬಗ್ಗೆ ಪ್ರೀತಿಯಿದ್ದರೆ ಅಲ್ಲಿಗೆ ಹೋಗಲಿ. ಪೌರತ್ವ ತಿದ್ದುಪಡಿ ವಿರುದ್ಧ ಎಂದು ಹೇಳಿಕೊಂಡು ಸಮಾಜವನ್ನು ದಿಕ್ಕು ತಪ್ಪಿಸುವ ಕೃತ್ಯಗಳಿಗೆ ಕೊನೆಯಾಡಲು ಪಾಕ್ ಪರ ಘೋಷಣೆ ಕೂಗುವವರನ್ನು ಗಡಿಪಾರು ಮಾಡಬೇಕು. ಇನ್ನು ಮುಂದೆ ಇಂತಹ ದೇಶದ್ರೋಹಿ ಚಟುವಟಿಕೆಗಳನ್ನು ನಡೆಸುವುದಕ್ಕೆ ಸರ್ಕಾರ ಅನುಮತಿ ನೀಡಬಾರದು.
-ಎಸ್.ಮುನಿಸ್ವಾಮಿ, ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.