ಪಾಕ್ ಪರ ಘೋಷಣೆ ಪ್ರಕರಣ: ಸದ್ಯದಲ್ಲೇ ಅಮೂಲ್ಯಾ ಎಸ್‌ಐಟಿ ವಶಕ್ಕೆ
Team Udayavani, Feb 25, 2020, 8:04 PM IST
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಪಾಕಿಸ್ಥಾನ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಅಮೂಲ್ಯಾ ಲಿಯೋನಾಳನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ವಶಕ್ಕೆ ಪಡೆಯಲು ಸಿದ್ದತೆ ನಡೆಸಿದೆ.
ಈ ಸಂಬಂಧ ಐದನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, 10 ದಿನಗಳ ಕಾಲ ಅಮೂಲ್ಯಾಳನ್ನು ತನ್ನ ವಶಕ್ಕೆ ನೀಡುವಂತೆ ಎಸ್‌ಐಟಿ ಮನವಿ ಮಾಡಿತ್ತು. ಇದೇ ವೇಳೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಕಷ್ಟವಾಗುತ್ತದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆಯಿದೆ. ಹೀಗಾಗಿ ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಅವಕಾಶ ಕೋರಿತ್ತು. ಅದಕ್ಕೆ ಪ್ರತಿಕ್ರಿಯಿಸಿರುವ ಕೋರ್ಟ್, ಆರೋಪಿಯನ್ನು ಖುದ್ದು ನ್ಯಾಯಾಲಯಕ್ಕೆ ಹಾಜರುಪಡಿಸದ ಹೊರತು ಯಾವುದೇ ಕಸ್ಟಡಿ ನೀಡುವುದಿಲ್ಲ. ಕೋರ್ಟ್‌ಗೆ ಹಾಜರುಪಡಿಸಲೇಬೇಕೆಂದು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಆರೋಪಿಯನ್ನು ಹೆಚ್ಚಿನ ಭದ್ರತೆಯಲ್ಲಿ ಕೋರ್ಟ್‌ಗೆ ಹಾಜರುಪಡಿಸಿ ವಶಕ್ಕೆ ಪಡೆಯಲಾಗುವುದು ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ಪಾಕಿಸ್ಥಾನ ಪರ ಘೋಷಣೆ ಕೂಗಿ ಬಂಧನಕ್ಕೊಳಗಾಗಿದ್ದರು. ಬಳಿಕ ಅವರನ್ನು ಕೋರ್ಟ್‌ಗೆ ಹಾಜರುಪಡಿಸುವಾಗ ಆಕ್ರೋಶಗೊಂಡ ಕೆಲವು ಸಾರ್ವಜನಿಕರು ಅವರ ಮೇಲೆ ಹಲ್ಲೆ ನಡೆಸಿ ಕೋರ್ಟ್ ಆವರಣದಲ್ಲಿ ಗದ್ದಲ ಸೃಷ್ಟಿಸಿದ್ದರು. ಹೀಗಾಗಿ ಅಮೂಲ್ಯಾಳ ಮೇಲೂ ಅದೇ ರೀತಿಯ ದಾಳಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಹಾಜರುಪಡಿಸುವುದು ಬೇಡ ಎಂದು ನಿರ್ಧರಿಸಲಾಗಿತ್ತು. ಇದೀಗ ಕೋರ್ಟ್ ಸೂಚನೆ ಮೇರೆಗೆ ಆರೋಪಿಯನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಕರೆತಂದು ನ್ಯಾಯಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆಯಲಾಗುವುದು ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
Congress: ಶಾಸಕರಿಗೆ 100 ಕೋ.ರೂ. ಆಮಿಷಕ್ಕೆ ದಾಖಲೆ ಕೊಡಿ: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
IPL-2025: ಓಂಕಾರ್ ಸಾಳ್ವಿ ಆರ್‌ಸಿಬಿ ಬೌಲಿಂಗ್ ಕೋಚ್
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.