ಕರಾವಳಿಯಲ್ಲಿ ಚುರುಕುಗೊಂಡ ಮುಂಗಾರು
ಚಂಡಮಾರುತ ಪರಿಣಾಮ ದುರ್ಬಲಗೊಂಡಿದ್ದ ಮಾರುತ
Team Udayavani, Jun 11, 2020, 5:59 AM IST
ಮಹಾನಗರ: ರಾಜ್ಯ ಕರಾವಳಿ ಭಾಗಕ್ಕೆ ವಾರದ ಹಿಂದೆ ಕಾಲಿಟ್ಟ ಮುಂಗಾರು ಚಂಡಮಾರುತದ ಪರಿಣಾಮ ಒಂದೇ ದಿನದಲ್ಲಿ ದುರ್ಬಲಗೊಂಡಿದ್ದು, ಇದೀಗ ಮತ್ತೆ ಚುರುಕುಗೊಂಡಿದೆ.
ಹವಾಮಾನ ಇಲಾಖೆಯ ಮುನ್ಸೂಚ ನೆಯಂತೆ ಜೂ. 11ರಿಂದ ಕರಾವಳಿ ಭಾಗದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದ್ದು, ಉತ್ತಮ ಮಳೆಯಾಗಲಿದೆ. ಕಳೆದ ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡದಲ್ಲಿ ಬಹುತೇಕ ಕಡೆ ಬಿಸಿಲು, ಮೋಡ ಮುಸುಕಿದ ವಾತಾವರಣವಿತ್ತು. ಕಳೆದ ವರ್ಷ ಮುಂಗಾರು ಅಪ್ಪಳಿಸಿದ ಬಳಿಕ ಕೆಲವು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಿತ್ತು. ಆದರೆ ಈ ಬಾರಿ ಜೂ. 4ರಂದು ಕರಾವಳಿ ಭಾಗಕ್ಕೆ ಮುಂಗಾರು ಪ್ರವೇಶ ಪಡೆದಿದ್ದು, ಆ ದಿನ ಮಧ್ಯಾಹ್ನ ವೇಳೆ ಮಳೆಯಾಗಿತ್ತೇ ವಿನಾ ಬಳಿಕ ಮಳೆ ಪ್ರಮಾಣದಲ್ಲಿ ಇಳಿಕೆ ಕಂಡಿತ್ತು.
ಕಳೆದ ಕೆಲವು ದಿನಗಳ ಹಿಂದೆ ಅರಬಿ ಸಮುದ್ರದಲ್ಲಿ ಸೃಷ್ಟಿಯಾದ “ನಿಸರ್ಗ’ ಚಂಡಮಾರುತ ಮುಂಗಾರಿನ ಮೇಲೆ ಪರಿಣಾಮ ಬೀರಿತ್ತು. ಇದೇ ಕಾರಣಕ್ಕೆ ಜೂ. 1ರಂದು ಕೇರಳ ಪ್ರವೇಶಿಸಿದ ಮುಂಗಾರು ರಾಜ್ಯಕ್ಕೆ ಅಪ್ಪಳಿಸಲು ವಿಳಂಬವಾಗಿತ್ತು. ಮಹಾರಾಷ್ಟ್ರದ ಮೇಲೆ ಪರಿಣಾಮ ಬೀರಿದ “ನಿಸರ್ಗ’ ಚಂಡಮಾರುತ ಕರಾವಳಿ ಭಾಗದ ಮಳೆ ತರುವ ಮೋಡಗಳನ್ನು ಸೆಳೆದಿತ್ತು. ಪರಿಣಾಮ ಕರಾವಳಿ ಭಾಗದಲ್ಲಿ ಮಳೆ ವಿಳಂಬವಾಗಿತ್ತು. ಇದೀಗ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಉಷ್ಣಾಂಶ ಮತ್ತೆ ಏರಿಕೆ
ಕಳೆದ ಕೆಲವು ದಿನಗಳ ಹಿಂದೆ ದ.ಕ. ಜಿಲ್ಲೆಯಲ್ಲಿ ಮಳೆಯಾಗಿತ್ತು. ಇದೇ ಕಾರಣಕ್ಕೆ ಸುಮಾರು 2 ಡಿ.ಸೆ.ನಷ್ಟು ಇಳಿಕೆಗೊಂಡ ಗರಿಷ್ಠ ಉಷ್ಣಾಂಶ ಮತ್ತೆ ಏರಿಕೆಯಾಗಿದೆ. ಈ ಹಿಂದೆ 29.2 ಡಿ.ಸೆ.ನಷ್ಟು ದಾಖಲಾಗಿದ್ದ ಗರಿಷ್ಠ ಉಷ್ಣಾಂಶ ಇದೀಗ 31 ಡಿ.ಸೆ.ಗೆ ಏರಿಕೆಗೊಂಡಿದೆ. ಮುಂದಿನ ದಿನಗಳಲ್ಲಿ ಮಳೆಯಾದ ಬಳಿಕ ಮತ್ತೆ ಉಷ್ಣಾಂಶದಲ್ಲಿ ಇಳಿಕೆ ಕಾಣುವ ಸಾಧ್ಯತೆ ಇದೆ.
ಸದ್ಯಕ್ಕಿಲ್ಲ ಚಂಡಮಾರುತ ಭೀತಿ
ಅರಬಿ ಸಮುದ್ರದಲ್ಲಿ ಸದ್ಯಕ್ಕೆ ಯಾವುದೇ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇಲ್ಲ. ಇತ್ತೀಚೆಗೆಯಷ್ಟೇ “ನಿಸರ್ಗ’ ಚಂಡಮಾರುತ ಕರಾವಳಿ ಭಾಗಕ್ಕೆ ಪರಿಣಾಮ ಬೀರಿದ್ದು, ಸದ್ಯದ ಮಾಹಿತಿಯ ಪ್ರಕಾರ ಆ ಭಾಗದಲ್ಲಿ ಯಾವುದೇ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇಲ್ಲ. ಕಳೆದ ಎರಡು ವರ್ಷಗಳಲ್ಲಿ ಕರಾವಳಿ ಭಾಗಕ್ಕೆ ಓಖೀ, ಸಾಗರ್, ಮೆಕುನು, ಕ್ಯಾರ್, ವಾಯು, ಮಹಾ ಮತ್ತು ಇತ್ತೀಚೆಗೆ “ನಿಸರ್ಗ’ ಎಂಬ ಹೆಸರಿನ ಚಂಡಮಾರುತ ಕರಾವಳಿ ಮೇಲೆ ಪರಿಣಾಮ ಬೀರಿತ್ತು.
ಮಳೆ ಸಾಧ್ಯತೆ
ಕರಾವಳಿ ಭಾಗಕ್ಕೆ ಒಂದು ವಾರದ ಹಿಂದೆ ಮುಂಗಾರು ಅಪ್ಪಳಿಸಿದ್ದು, ತುಸು ದುರ್ಬಲಗೊಂಡಿತ್ತು. ನಿಗರ್ಸ ಚಂಡಮಾರುತದ ಪರಿಣಾಮ ಮುಂಗಾರು ಮೇಲೆ ಬಿದ್ದಿತ್ತು. ಮಳೆ ತರುವ ಮೋಡಗಳ ಚಲನೆಯಿಂದಾಗಿ ಮಳೆ ಕಡಿಮೆಯಾಗಿತ್ತು. ಆದರೆ ಮುಂದಿನ ದಿನಗಳಲ್ಲಿ ಮುಂಗಾರು ಮತ್ತೆ ಪ್ರಬಲಗೊಳ್ಳಲಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
-ಡಾ| ರಾಜೇಗೌಡ
ಬೆಂಗಳೂರು ಕೃಷಿ ವಿ.ವಿ. ಹವಾಮಾನ ವಿಜ್ಞಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.