ಕೆಲಸ ಸಿಗದಿದ್ದಕ್ಕೆ ವೃತ್ತಿಪರ ಕಳ್ಳನಾದ ಎಂಜಿನಿಯರ್
ಬೆಳಗ್ಗೆ ಬೀಗ ಹಾಕಿದ ಮನೆಗಳ ಗುರುತು, ರಾತ್ರಿ ಕಳ್ಳತನ
Team Udayavani, Aug 1, 2023, 11:29 PM IST
ಬೆಂಗಳೂರು: ಮನೆ ಕಳವು ಮಾಡುತ್ತಿದ್ದ ನೋಕಿಯಾ ಕಂಪೆನಿಯ ಮಾಜಿ ನೌಕರ, ಎಂಜಿನಿಯರ್ನನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಮಹಾಮನಿ (37) ಬಂಧಿತ. ಆರೋಪಿಯಿಂದ 29 ಲಕ್ಷ ರೂ. ಮೌಲ್ಯದ 512 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ತಮಿಳುನಾಡು ಮೂಲದ ಆರೋಪಿ ಎಲೆಕ್ಟ್ರಾನಿಕ್ ಎಂಜಿನಿಯರಿಂಗ್ (ಬಿಇ) ವ್ಯಾಸಂಗ ಮಾಡಿದ್ದು, ಚೆನ್ನೈನ ನೋಕಿಯಾ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ. 2019ರಲ್ಲಿ ಕಂಪೆನಿಯವರು ಕೆಲಸದಿಂದ ತೆಗೆದು ಹಾಕಿದ ಬಳಿಕ ಯಾವುದೇ ಕೆಲಸ ಸಿಗದಿದ್ದರಿಂದ ಮನೆ ಕಳವು ಮಾಡುವುದನ್ನು ರೂಢಿಗತ ಮಾಡಿಕೊಂಡಿದ್ದ. ಬೆಳಗ್ಗೆ ವೇಳೆ ಬೀಗ ಹಾಕಿದ ಮನೆಗಳನ್ನು ಗುರುತಿಸಿ ರಾತ್ರಿ ವೇಳೆ ಕಬ್ಬಿಣದ ರಾಡ್ನಿಂದ ಮನೆ ಬಾಗಿಲು ಮೀಟಿ ಕಳವು ಮಾಡುತ್ತಿದ್ದ. ಈತನ ವಿರುದ್ಧ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡಿನ ವಿವಿಧ ಠಾಣೆಗಳಲ್ಲಿ ದರೋಡೆ, ಕನ್ನ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ಹೇಳಿದರು.
2019ರಲ್ಲಿ ಠಾಣೆ ವ್ಯಾಪ್ತಿಯಲ್ಲಿ ಆರೋಪಿ ಎರಡು ಕಳವು ಕೃತ್ಯ ಎಸಗಿದ್ದ. ಬಳಿಕ ನಗರದ ವಿವಿಧೆಡೆ ಕಳವು ಮಾಡಿ 2020ರಲ್ಲಿ ಎಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದ. ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿದ್ದ. ಹಳೇ ಪ್ರಕರಣದ ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಿ ವಾರೆಂಟ್ ಪಡೆದು, ಪೊಲೀಸ್ ವಶಕ್ಕೆ ಪಡೆಯಲಾಗಿತ್ತು. ಈತನ ಮಾಹಿತಿ ಮೇರೆಗೆ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು. ಠಾಣಾಧಿಕಾರಿ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.