ಮುಂಬಯಿಯಿಂದ ಬಂದವರ ಅಸಮಾಧಾನ ಅವ್ಯವಸ್ಥೆಯ ಆಗರವಾದ ತಪಾಸಣೆ ಕೇಂದ್ರ

ಶಿರೂರು ಗಡಿಯಲ್ಲಿ ಅವ್ಯವಸ್ಥೆ

Team Udayavani, May 14, 2020, 5:44 AM IST

ಮುಂಬಯಿಯಿಂದ ಬಂದವರ ಅಸಮಾಧಾನ ಅವ್ಯವಸ್ಥೆಯ ಆಗರವಾದ ತಪಾಸಣೆ ಕೇಂದ್ರ

ಬೈಂದೂರು: ಕಳೆದ ಹಲವು ದಿನಗಳಿಂದ ಲಾಕ್‌ಡೌನ್‌ ಸಂಕಷ್ಟದಲ್ಲಿದ್ದ ಮುಂಬಯಿಗರಿಗೆ ಉಡುಪಿ ಜಿಲ್ಲೆಗೆ ಆಗಮಿಸಲು ಅನುಮತಿ ನೀಡಿರುವುದು ಒಂದಿಷ್ಟು ಸಮಾಧಾನ ತಂದಿದೆ. ಆದರೆ ಜಿಲ್ಲೆಯ ಗಡಿಭಾಗವಾದ ಶಿರೂರಿನಲ್ಲಿ ತಪಾಸಣೆಯ ವಿಳಂಬ ಹಾಗೂ ಅವ್ಯವಸ್ಥೆ ಕುರಿತು ಮುಂಬಯಿ ಕನ್ನಡಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಗಂಟೆಗಟ್ಟಲೆ ಕಾಯಬೇಕು ಮುಂಬಯಿನಿಂದ ಆಗಮಿಸುವ ಪ್ರತಿಯೊಬ್ಬರಿಗೂ ಶಿರೂರು ಟೋಲ್‌ ಗೇಟ್‌ ಬಳಿ ಕಡ್ಡಾಯ ತಪಾಸಣೆ ನಡೆಯುತ್ತದೆ. ಪ್ರತಿದಿನ ನೂರಾರು ಜನರು ಆಗಮಿಸುತಿದ್ದು ಸಮರ್ಪಕ ಮಾಹಿತಿ ಕೊರತೆಯಿಂದ ಗಂಟೆಗಟ್ಟಲೆ ಕಾಯಬೇಕಿದೆ. ಮಾತ್ರವಲ್ಲದೆ ಸ್ವಯಂಘೋಷಣೆ ಅರ್ಜಿ ತುಂಬಬೇಕಾಗಿರುವ ಜತೆಗೆ ಆರೋಗ್ಯ ತಪಾಸಣೆ ಕೂಡ ನಡೆಯುತ್ತದೆ. ಇದಕ್ಕೆ ತುಂಬಾ ಸಮಯ ಬೇಕಾಗುತ್ತಿದೆ.
ಇದರ ಜತೆಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಂಡರೂ ಸಹ ಪ್ರತಿ ಎರಡು ಗಂಟೆಗೊಮ್ಮೆ ಪೊಲೀಸ್‌ ಬೆಂಗಾವಲಲ್ಲಿ ಹದಿನೈದು ವಾಹನಗಳನ್ನು ಆಯಾಯ ತಾಲೂಕು ಕೇಂದ್ರಗಳಿಗೆ ಕಳುಹಿಸಲಾಗುತ್ತಿದೆ. ಇದರಿಂದ ಕೆಲವೊಮ್ಮೆ ನಾಲ್ಕೆ çದು ಗಂಟೆ ಕಾಯಬೇಕಾಗುತ್ತಿದೆ. ಮಹಿಳೆಯರು, ಹಿರಿಯರು ಕೂಡ ಸಾಲಿನಲ್ಲಿ ಕಾಯಬೇಕಿದೆ. ಟೋಲ್‌ ಗೇಟ್‌ ಬಳಿ ಪ್ರಯಾಣಿಕರಿಗೆ ಕೆಲವು ದಾನಿಗಳು ನೀರಿನ ಬಾಟಲಿ, ಬಿಸ್ಕೆಟ್‌ ನೀಡಿದ್ದು ಹೊರತು ಪಡಿಸಿದರೆ ಇತರ ಯಾವುದೇ ವ್ಯವಸ್ಥೆಗಳಿಲ್ಲ. ಸಿಬಂದಿಗೂ ಕೂಡ ಊಟದ ವ್ಯವಸ್ಥೆಗಳಿಲ್ಲ.

ಕ್ವಾರಂಟೈನ್‌ ಅವ್ಯವಸ್ಥೆ
ಹೊರರಾಜ್ಯದಿಂದ ಬರುವ ಪ್ರತಿ ಯೊಬ್ಬರಿಗೂ ಕಡ್ಡಾಯ ಕ್ವಾರಂಟೈನ್‌ಗೆ ತೆರಳಬೇಕು. ಖಾಸಗಿ ಹೋಟೆಲ್‌ಗ‌ಳು ಏಕರೂಪದ ದರಗಳಿಲ್ಲ. ಮಾತ್ರವಲ್ಲದೆ ಅತ್ಯಧಿಕ ದರ ನಿಗದಿ ಪಡಿಸಿದೆ. ಸರಕಾರಿ ಕ್ವಾರಂಟೈನ್‌ಗಳಲ್ಲಿ ಸರಿಯಾದ ಸಮಯಕ್ಕೆ ಊಟ ಉಪಹಾರ ಸಿಗುತ್ತಿಲ್ಲ. ಸರಿಯಾದ ವ್ಯವಸ್ಥೆಗಳಿಲ್ಲ ಎಂದು ಮುಂಬಯಿಗರು ದೂರುತಿ¨ªಾರೆ. ಮುಂಬಯಿಯಿಂದ ಕಾರ್ಕಳಕ್ಕೆ ಆಗಮಿಸಿದ ವ್ಯಕ್ತಿಯೋರ್ವರು ಶಿರೂರಿನಿಂದ ಕಾರ್ಕಳ ತಾಣ ಬರಲು 4 ಗಂಟೆ ತಗುಲಿರುವುದಾಗಿ ದೂರಿದ್ದಾರೆ.

ತತ್‌ಕ್ಷಣ ವ್ಯವಸ್ಥೆ
ಈಗಾಗಲೇ ಮುಂಬಯಿ ಕನ್ನಡಿಗರಿಗೆ ಸರಿಯಾದ ವ್ಯವಸ್ಥೆ ಇಲ್ಲದಿರುವ ಕುರಿತು ಜಿಲ್ಲಾಧಿಕಾರಿ ಜತೆಗೆ ಮಾತನಾಡಿದ್ದೇನೆ ಹಾಗೂ ಅಸಂತ್ರಪ್ತಿ ವ್ಯಕ್ತಪಡಿಸಿದ್ದೇನೆ. ಇಲಾಖೆ ಕ್ರಮಗಳು ಸಮಾಧಾನ ತಂದಿಲ್ಲ. ಮುಂಬಯಿನವರಿಗೆ ಏನು ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ. ಇದಕ್ಕಾಗಿ ಸ್ವತಃ ನಾನೇ ಟೋಲ್‌ ಗೇಟ್‌ ಬಳಿ ತೆರಳಿ ತತ್‌ಕ್ಷಣದಿಂದ ಸಮರ್ಪಕ ವ್ಯವಸ್ಥೆ ಕಲ್ಪಿಸುವ ಕ್ರಮ ತೆಗೆದುಕೊಳ್ಳುತ್ತೇನೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಹೆಚ್ಚುವರಿ ವ್ಯವಸ್ಥೆ ಮಾಡುತ್ತೇನೆ ಎಂದರು.
 -ಬಿ.ಎಂ. ಸುಕುಮಾರ ಶೆಟ್ಟಿ , ಶಾಸಕ

ಟಾಪ್ ನ್ಯೂಸ್

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.