Andhra Pradesh: ಬಂಧನ ವಿರೋಧಿಸಿ ಸೀಟಿ ಊದಿದ ಶಾಸಕ ನಂದಮೂರಿ ಬಾಲಕೃಷ್ಣ
Team Udayavani, Sep 23, 2023, 12:36 AM IST
ಅಮರಾವತಿ/ವಿಜಯವಾಡ: ಕೌಶಲಾ ಭಿವೃದ್ಧಿ ಮಂಡಳಿ ಹಗರಣದಲ್ಲಿ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ ಖಂಡಿಸಿ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಟಿಡಿಪಿ ಶಾಸಕ ನಂದಮೂರಿ ಬಾಲಕೃಷ್ಣ ಸೀಟಿ ಊದಿ ಗದ್ದಲ ಎಬ್ಬಿಸಿದ್ದಾರೆ. ಇದರ ಜತೆಗೆ ಅವರ ಪಕ್ಷದ ನಾಯಕರು ಕಲಾಪ ನಡೆಯಲು ಅವಕಾಶ ಕೊಡದೆ ಗಲಾಟೆ ಮಾಡಿದ್ದಾರೆ. ಹೀಗಾಗಿ ಅವರನ್ನೆಲ್ಲ ಗುರುವಾರ ಒಂದು ದಿನದ ಅವಧಿಗೆ ಕಲಾಪದಿಂದ ಅಮಾನತು ಮಾಡಲಾಗಿದೆ. ಶಿಕ್ಷೆಗೆ ಗುರಿಯಾದ ಶಾಸಕರ ಪೈಕಿ ಇಬ್ಬರು ವೈಎಸ್‌ಆರ್‌ಸಿಪಿಯ ಭಿನ್ನಮತೀಯ ಶಾಸಕರೂ ಸೇರಿದ್ದಾರೆ.
ಶಾಸಕ ನಂದಮೂರಿ ಬಾಲಕೃಷ್ಣ ಶುಕ್ರವಾರ ಕೂಡ ಸದನಕ್ಕೆ ಆಗಮಿಸಿ ಸೀಟಿ ಊದಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಗದ್ದಲ ಎಬ್ಬಿಸಿದ್ದಕ್ಕೆ ಇಬ್ಬರನ್ನು ಅಮಾನತು ಮಾಡಲಾಗಿದೆ.
ಕಸ್ಟಡಿ ವಿಸ್ತರಣೆ: ಮತ್ತೂಂದೆಡೆ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿಯಿಂದ ಬಂಧಿತರಾಗಿ ರುವ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಅವರ ಕಸ್ಟಡಿಯನ್ನು ಇನ್ನೂ 2 ದಿನ ವಿಸ್ತರಿಸಲಾಗಿದೆ. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ವಜಾ ಮಾಡಬೇಕು ಎಂದು ಕೋರಿದ್ದ ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ವಜಾ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.