ಅಂಗನವಾಡಿ ನೌಕರರಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ
Team Udayavani, Mar 16, 2021, 4:55 AM IST
ಉಡುಪಿ: ಅಂಗನವಾಡಿ ನೌಕರರು ಕಡಿಮೆ ಸವಲತ್ತುಗಳಿಗೆ ದುಡಿಯುತ್ತಿದ್ದರೂ ಕೂಡ ಕೊರೊನಾ ಸಂದರ್ಭದಲ್ಲಿ ಸರಕಾರ ಸೂಚನೆ ಕೊಟ್ಟ ಕೂಡಲೇ ಯಾವುದೇ ಷರತ್ತುಗಳಿಲ್ಲದೆ ಕೆಲಸವನ್ನು ನಿರ್ವಹಿಸಿದ್ದಾರೆ. ಆದರೂ ಇದುವರೆಗೆ ಯಾವುದೇ ಸವಲತ್ತು ನೀಡಿಲ್ಲ. ಸರಕಾರ ಈ ಬಾರಿಯ ಬಜೆಟ್ ಅನ್ನು ಮಹಿಳಾ ಪರ ಬಜೆಟ್ ಎಂದು ಕರೆದರೂ ಅದರಿಂದ ಮಹಿಳೆಯರಿಗೆ ಯಾವುದೇ ಪ್ರಯೋಜನ ಇಲ್ಲವಾಗಿದೆ ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಭಾರತಿ ಹೇಳಿದರು.
2021-22ನೇ ಸಾಲಿನ ಬಜೆಟ್‌ನಲ್ಲಿ ಅಂಗನವಾಡಿ ನೌಕರರ ಬೇಡಿಕೆಗಳನ್ನು ಪರಿಶೀಲಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಶೀಲಾ ನಾಡ ಮಾತನಾಡಿ, ಕೊರೊನಾ ಸಾಂಕ್ರಾಮಿಕತೆಯ ಭೀಕರತೆ ಇದ್ದಾಗಲೂ ಮಲೆನಾಡು, ಗುಡ್ಡಗಾಡು, ಕೊಳಚೆ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ತಮ್ಮ ಕುಟುಂಬದ ವಾಹನಗಳನ್ನು ಬಳಸಿಕೊಂಡು ಆಹಾರ, ಸಾಮಗ್ರಿಗಳನ್ನು ಮನೆಮನೆಗೆ ಹಂಚಿದ್ದು, ಕ್ವಾರಂಟೈನ್ ಆದ ಸ್ಥಳಗಳಿಗೆ ಮಾಸ್ಕ್, ಸ್ಯಾನಿಟೈಸರ್, ಮಾತ್ರೆಗಳು ಇಲ್ಲದಿದ್ದರೂ ತಮ್ಮ ಕೈಯಿಂದ ಎಲ್ಲವನ್ನು ಖರ್ಚು ಮಾಡಿಕೊಂಡು ಆಹಾರ ವಿತರಣೆ ಮಾಡಿದ್ದಾರೆ ಆದರೂ ಕೂಡ ಸರಕಾರ ನಮ್ಮ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿದೆ ಎಂದರು.
ಸಿಐಟಿಯು ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಕವಿರಾಜ್, ಮೋಹನ್, ಕಾಪು ತಾಲೂಕು ಅಧ್ಯಕ್ಷೆ ಲೀಲಾ, ಉಡುಪಿ ತಾಲೂಕು ಅಧ್ಯಕ್ಷೆ ಅಂಬಿಕಾ, ಕುಂದಾಪುರ ತಾಲೂಕು ಅಧ್ಯಕ್ಷೆ ಆಶಾಲತಾ, ಬ್ರಹ್ಮಾವರ ತಾಲೂಕು ಅಧ್ಯಕ್ಷೆ ಜಯಲಕ್ಷ್ಮೀ ಸಹಿತ ಹಲವಾರು ಮಂದಿ ಅಂಗನ ವಾಡಿ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.