ಚಿಗರಿಗೆ ಗುಂಡು ಹಾರಿಸಿದ ಇಬ್ಬರ ಸೆರೆ : ಬಂಧಿತರಿಂದ 28 ಜೀವಂತ ಗುಂಡುಗಳು ವಶಕ್ಕೆ
Team Udayavani, Dec 29, 2020, 3:16 PM IST
ಚನ್ನಮ್ಮ ಕಿತ್ತೂರು: ಸಮೀಪದ ಕುಲವಳ್ಳಿ ಗ್ರಾಮದ ಅರಣ್ಯದಲ್ಲಿ ಅಕ್ರಮವಾಗಿ ನುಗ್ಗಿ ಚಿಗರಿಗೆ ಗುಂಡು ಹಾರಿಸಿದ ಇಬ್ಬರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಬೆಳಗಾವಿಯ ವಿನಾಯಕ ನಗರದ ಉದ್ದವ ರಾಜೇಂದ್ರ ನಾಯಕ (30), ಕಾಕತಿ ದೇಸಾಯಿ ಗಲ್ಲಿಯ ಸಾಗರ ಯಲ್ಲೋಜಿ ಪಿಂಗಟೆ(31) ಇಬ್ಬರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನಿಬ್ಬರಾದ ಬೆಳಗಾವಿ ನೆಹರೂ ನಗರದ ಮಹಮ್ಮದ ಅಲಿ ಖಾನ್, ಕಿತ್ತೂರಿನ ಅತಾವುಲ್ಲಾ ಶೀಗಿಹಳ್ಳಿ ಎಂಬು ಆರೋಪಿಗಳು ಪರಾರಿಯಾಗಿದ್ದಾರೆ. ಅರಣ್ಯದಲ್ಲಿ ಗುಂಡು ಹಾರಿಸಿದ ಖದೀಮರಿಂದ ಜಿಂಕೆ ತಪ್ಪಿಸಿಕೊಂಡಿದೆ.
ಬಂಧಿತ ಆರೋಪಿಗಳಿಂದ ಒಂದು ಡಿಬಿಬಿಎಲ್ ಬಂದೂಕು, 28 ಜೀವಂತ ಗುಂಡುಗಳು, ಹೆಡ್ ಟಾರ್ಚ್ 2, ಚಾಕು 1, ವಾಕಿಟಾಕಿ 1,
ಸ್ಯಾಂಪಲ್ ಏರಗನ್ ಗುಂಡುಗಳು ನಾಲ್ಕು ಬಾಕ್ಸ್ ಹಾಗೂ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಶ್ರೀನಾಥ ಕಡೋಲಕರ ತಿಳಿಸಿದ್ದಾರೆ.
ಇದನ್ನೂ ಓದಿ:ಧರ್ಮೇಗೌಡ ಆತ್ಮಹತ್ಯೆ ಪ್ರಕರಣ: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಸಿಸಿಎಫ್ ಬಿ.ವಿ. ಪಾಟೀಲ, ಡಿಸಿಎಫ್ ಎಂ.ವಿ. ಅಮರನಾಥ, ಎಸಿಪಿ ಸಿ.ಬಿ. ಮಿರ್ಜಿ ಮಾರ್ಗದರ್ಶನ ನೀಡಿದ್ದರು. ಡಿಆರ್‌ಎಫ್‌ಒ
ಸಂಜಯ ಮಗದುಮ, ಗಾರ್ಡ್ ಅಜೀಜ್ ಮುಲ್ಲಾ, ಪ್ರವೀಣ ದೂಳಪ್ಪಗೋಳ, ಗಿರೀಶ ಮೆಕ್ಕೇದ , ರಾಜು ಹುಬ್ಬಳ್ಳಿ, ಮಹಮ್ಮದ್ ರಫೀಕ್ ತಹಶೀಲ್ದಾರ್, ಪ್ರಕಾಶ ಕಿರಬನವರ, ನವೀನ ಹಂಚಿನಮನಿ, ಪ್ರಕಾಶ ಕಳಗಡೆ ಕಾರ್ಯಾಚರಣೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.