ಅಂಕೋಲಾ : ಮದುವೆಯಾದ ಮೂರು ತಿಂಗಳಲ್ಲೇ ನವವಿವಾಹಿತ ನೇಣಿಗೆ ಶರಣು
Team Udayavani, Feb 18, 2023, 6:11 PM IST
ಅಂಕೋಲಾ : ನವ ವಿವಾಹಿತನೋರ್ವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಪಟ್ಟಣದ ಕಾರವಾರ – ಅಂಕೋಲಾ ಮುಖ್ಯ ರಸ್ತೆಯ ಅಜ್ಜಿಕಟ್ಟಾ ಬಳಿಯ ಮನೆಯೊಂದರಲ್ಲಿ ನಡೆದಿದೆ.
ಮನೋಜ್ ಶಿವಾನಂದ ಶೆಟ್ಟಿ (40) ಎನ್ನುವ ವ್ಯಕ್ತಿ ಪಟ್ಟಣದಲ್ಲಿ ಮೂರು ಕಡೆ ಬಟ್ಟೆ ಅಂಗಡಿಗಳನ್ನು ನಡೆಸುತ್ತಾ ಪ್ರತಿಷ್ಠಿತ ಕುಟುಂಬವಾಗಿ ಗುರುತಿಸಿಕೊಂಡಿದ್ದ ಶಿವಾನಂದ ಶೆಟ್ಟಿ ಅವರ ಐವರು ಮಕ್ಕಳಲ್ಲಿ ಕಿರಿಯವನಾಗಿದ್ದ. ಕಳೆದ ಮೂರು ತಿಂಗಳ ಹಿಂದಷ್ಟೇ ಕುಮಟಾದ ಬಾಡದ ಯುವತಿಯೊಂದಿಗೆ ಮದುವೆಯಾಗಿದ್ದ. ಶನಿವಾರ ಹೆಂಡತಿ ಮನೆಯಿಂದ ಹೊರ ಹೋದಾಗ ಮನೆಯ ಅಡಿಗೆ ಕೋಣೆಯ ಬಾಗಿಲು ಹಾಕಿಕೊಂಡು, ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಅದಾವುದೋ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಸಾವಿಗೆ ಶರಣಾಗುವ ಮುನ್ನ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾನೆ ಎನ್ನಲಾಗಿದ್ದು, ಪೋಲಿಸ್ ತನಿಖೆಯಿಂದ ಹೆಚ್ಚಿನ ಮತ್ತು ನಿಖರ ಮಾಹಿತಿ ತಿಳಿದು ಬರಬೇಕಿದೆ.
ಪಿಎಸೈ ಮಹಾಂತೇಶ್ ವಾಲ್ಮೀಕಿ ಮತ್ತು ಸಿಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.