“ಅನ್ನದಾತನ ಮನೆಯಂಗಳದಲ್ಲಿ’ ಪುನಾರಂಭ
Team Udayavani, Dec 24, 2019, 3:07 AM IST
ಶಿವಮೊಗ್ಗ: ಮುಂದಿನ ಬಜೆಟ್ ಮಂಡನೆ ನಂತರ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆಸಿಕೊಂಡು ಬಂದಿದ್ದ “ಅನ್ನದಾತನ ಮನೆಯಂಗಳದಲ್ಲಿ’ ಕಾರ್ಯಕ್ರಮವನ್ನು ಪುನಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸೋಮವಾರ ನಗರದ ಪೆಸಿಟ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುಭಿಕ್ಷಾ ಸಾವಯವ ಕೃಷಿಕರ ಬಹುರಾಜ್ಯ ಸಹಕಾರ ಸಂಘ ನಿಯಮಿತದ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿ ತಿಂಗಳಿಗೊಮ್ಮೆ ರಾಜ್ಯದ ಪ್ರತಿ ತಾಲೂಕಿನ 50 ಸಾವಿರ ರೈತರನ್ನು ಸೇರಿಸಿ ಗ್ರಾಮೀಣ ಪ್ರದೇಶದಲ್ಲಿ ಕೃಷಿ ತಜ್ಞರು, ಅಧಿ ಕಾರಿಗಳು ಹಾಗೂ ಪ್ರಗತಿಪರ ಕೃಷಿಕರೊಂದಿಗೆ ಭಾಗವಹಿಸಿ ಈ ಕಾರ್ಯಕ್ರಮ ನಡೆಸಲಾಗುವುದು.
ಇದರಲ್ಲಿ ವಿಶೇಷವಾಗಿ ಸಾವಯವ ಕೃಷಿಗೆ ಒತ್ತು ನೀಡಲಾಗುವುದು ಎಂದರು. ಪ್ರಸ್ತುತ 50,000ದಷ್ಟಿರುವ ಸಾವಯವ ಕೃಷಿ ಕುಟುಂಬಗಳ ಸಂಖ್ಯೆಯನ್ನು ಮುಂದಿನ ಒಂದು ವರ್ಷದ ಅವ ಧಿಯಲ್ಲಿ 5 ಲಕ್ಷಕ್ಕೇರಿಸಬೇಕು. ರೈತರು ತಾವಿರುವಲ್ಲಿಯೇ ಕೃಷಿಯನ್ನು ಅವಲಂಬಿಸಿಕೊಂಡು ನೆಮ್ಮದಿಯ ಹಾಗೂ ಸ್ವಾಭಿಮಾನದ ಜೀವನ ನಿರ್ವಹಣೆ ಮಾಡುವಂತಾಗಬೇಕು. ಅದಕ್ಕಾಗಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.
ಕೃಷಿ ಕ್ಷೇತ್ರದ ಸಮಸ್ಯೆಗಳನ್ನು ಅರಿತಿದ್ದು, ಅವುಗಳ ಇತ್ಯರ್ಥಕ್ಕೆ ವ್ಯವಸ್ಥಿತ ಕ್ರಮ ವಹಿಸಲಾಗಿದೆ. ಅಂತೆಯೇ ನೀರಾವರಿ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ದೊರೆಯಬೇಕೆಂಬುದು ನಮ್ಮ ಬಹುದಿನದ ಆಶಯ. ಮುಂದಿನ ಬಜೆಟ್‌ನಲ್ಲಿ ಸಾವಯವ ಕೃಷಿಗೆ ಆದ್ಯತೆ ನೀಡಲಾಗುವುದು ಎಂದರು.
ಮುಂದಿನ ವಾರ ಮುಖ್ಯಮಂತ್ರಿ ದೆಹಲಿಗೆ
ಶಿವಮೊಗ್ಗ/ಬೆಂಗಳೂರು: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಜತೆಗೆ ಚರ್ಚಿಸಲಾಗುತ್ತದೆ. ಈ ನಿಟ್ಟಿನಲ್ಲಿ ಮುಂದಿನ ವಾರ ನವದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರ ಜತೆಗೆ ಚರ್ಚೆ ನಡೆಸಿದ ಬಳಿಕ ದಿನ ನಿಗದಿ ಮಾಡಲಾಗುತ್ತದೆ ಎಂದರು. ಮಂಗಳೂರು ಗೋಲಿಬಾರ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ್ದೇವೆ.
ನ್ಯಾಯಾಂಗ ತನಿಖೆ ಅಥವಾ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸುವ ಬಗ್ಗೆ ಎಲ್ಲಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು. ಮಂಗಳೂರು ಗಲಭೆಯ ತನಿಖೆ ಸ್ವರೂಪದ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಭಾನುವಾರ ಸಂಜೆ ಸುದೀರ್ಘ ಚರ್ಚೆ ನಡೆಸಿ ಸಿಐಡಿ ತನಿಖೆ ತೀರ್ಮಾನ ಕೈಗೊಂಡಿದ್ದರು. ಸೋಮವಾರ ಬೆಳಗ್ಗೆ ಮುಖ್ಯಮಂತ್ರಿ ಅವರು ಅದನ್ನು ಪ್ರಕಟಿಸಿದರು ಎಂದು ಹೇಳಲಾಗಿದೆ. ಶಾಂತಿಯುತ ಪ್ರತಿಭಟನೆ ನಡೆಸಲು ಅಭ್ಯಂತರವಿಲ್ಲ. ಇದಕ್ಕೆ ಯಾವುದೇ ಅಡ್ಡಿ ಮಾಡುವುದಿಲ್ಲ. ಆದರೆ, ಶಾಂತಿ ಕದಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.
ಪ್ರಧಾನಿ 2 ದಿನ ಪ್ರವಾಸ
ಬೆಂಗಳೂರು: ಪ್ರಧಾನಿ ಮೋದಿಯವರು ಜ. 2ರಂದು ತುಮಕೂರಿನಲ್ಲಿ ನಡೆಯುವ ರೈತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. 3ರಂದು ಹೆಬ್ಟಾಳದ ಜಿಕೆವಿಕೆ ಆವರಣದಲ್ಲಿ ನಡೆಯಲಿರುವ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನ ದಲ್ಲಿ ಪಾಲ್ಗೊಂಡು ,ಜಿಗಣಿಯ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.