Dubai: ದುಬೈನಲ್ಲಿ ಮತ್ತೂಂದು ಬೃಹತ್ ವಿಮಾನ ನಿಲ್ದಾಣ?
Team Udayavani, Nov 15, 2023, 10:48 PM IST
ದುಬೈ: ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣ ಹೊಂದಿರುವ ದುಬೈ, ಈಗ ಹೊರವಲಯದಲ್ಲಿ ಮತ್ತಷ್ಟು ವಿಶಾಲವಾದ ಹೊಸ ಏರ್ಪೋರ್ಟ್ ನಿರ್ಮಿಸಲು ಮುಂದಾಗಿದೆ. 2030ರ ವೇಳೆಗೆ ಇದರ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ಸರ್ಕಾರ ಹೇಳಿದೆ.
ದುಬೈನಲ್ಲಿ ನಡೆದ ಏರ್ ಶೋ ವೇಳೆ ಬುಧವಾರ ಈ ಮಾಹಿತಿ ನೀಡಿದ ದುಬೈ ವಿಮಾನ ನಿಲ್ದಾಣಗಳ ಸಿಇಒ ಪಾಲ್ ಗ್ರಿಫಿತ್ಸ್, “ದುಬೈನ ಹೊರವಲಯದಲ್ಲಿ ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗುವುದು. 2030ರ ವೇಳೆ ಇದು ಆರಂಭವಾಗಲಿದ್ದು, ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಲ್ಲಿಗೆ ಸ್ಥಳಾಂತರಿಸಲಾಗುವುದು’ ಎಂದು ತಿಳಿಸಿದ್ದಾರೆ.
“ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾರ್ಷಿಕ ಪ್ರಯಾಣಿಕರ ಸಂಖ್ಯೆ 12 ಕೋಟಿ ದಾಟುತ್ತಿದ್ದಂತೆ ನೂತನ ದೊಡ್ಡ ವಿಮಾನ ನಿಲ್ದಾಣಕ್ಕೆ ಸ್ಥಳಾಂತರಿಸುವ ಅಗತ್ಯವಿತ್ತು” ಎಂದು ಪಾಲ್ ಗ್ರಿಫಿತ್ಸ್ ಹೇಳಿದ್ದಾರೆ. “ಕೊರೊನಾ ನಂತರ ದುಬೈ ಪ್ರವಾಸೋದ್ಯಮ ಸಹಜ ಸ್ಥಿತಿಗೆ ಮರಳಿದ್ದು, ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆಯಾಗಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.