Congress ನ ಇನ್ನೊಂದು ಹೆಸರೇ ಭ್ರಷ್ಟಾಚಾರ: ಜೋಶಿ
ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವುದರಲ್ಲಿ ಹುರುಳಿಲ್ಲ: ಜೋಶಿ
Team Udayavani, Aug 27, 2023, 11:38 PM IST
ಹುಬ್ಬಳ್ಳಿ: ನಿವೃತ್ತ ನ್ಯಾಯಮೂರ್ತಿಗಳಿಂದ ಹಗರಣಗಳ ತನಿಖೆ ಮಾಡಿಸಲು ರಾಜ್ಯ ಸರಕಾರ ಮುಂದಾಗಿದೆ. ಯಾವುದೇ ಹಗರಣ ತನಿಖೆ ಮಾಡಲು ಅಭ್ಯಂತರವಿಲ್ಲ. ನೇರವಾಗಿ ಎಫ್‌ಐಆರ್ ದಾಖಲಿಸಿ ತನಿಖೆ ಮಾಡಬಹುದು. ಆದರೆ ತನಿಖಾ ಸಮಿತಿ ಹೆಸರಲ್ಲಿ ಪಕ್ಷದ ಹೆಸರು ಕೆಡಿಸುವ ಕೆಲಸವಷ್ಟೇ ನಡೆ ದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಇನ್ನೊಂದು ಹೆಸರೇ ಭ್ರಷ್ಟಾಚಾರ. ಯುಪಿಎ ಅವ ಧಿಯಲ್ಲಿ 12 ಲಕ್ಷ ಕೋಟಿ ರೂ. ಭ್ರಷ್ಟಾಚಾರ ಆಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂ ಧಿ ಮತ್ತು ರಾಹುಲ್ ಗಾಂಧಿ ಅವರು ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಈ ಕುರಿತ ಪಾರದರ್ಶಕ ತನಿಖೆಗೆ ಅಭ್ಯಂತರವಿಲ್ಲ ಎಂದರು.
ಬ್ರಾಂಡ್ ಬದಲಾವಣೆ
ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಯುಪಿಎ ಹೆಸರನ್ನು ಬದಲಾವಣೆ ಮಾಡಿದೆ. ವ್ಯವಹಾರದಲ್ಲಿ ತಮ್ಮ ಉತ್ಪನ್ನ-ಬ್ರಾಂಡ್ ಕೆಟ್ಟು ಹೋದಾಗ ಹೆಸರು ಬದಲು ಮಾಡುವಂತೆ ಕಾಂಗ್ರೆಸ್ ಯುಪಿಎ ಇಂಡಿಯಾ ಎಂದು ಬ್ರಾಂಡ್ ಬದಲಾವಣೆ ಮಾಡಿದೆ. ಆದರೆ ಪ್ರಾಡಕ್ಟ್ ಮಾತ್ರ ಅದೇ ಇದೆ. ತಮ್ಮ ನಾಯಕರು ಭ್ರಷ್ಟಾಚಾರ ಮಾಡಿ ಬೇಲ್ ಮೇಲೆ ಹೊರಗಿದ್ದಾರೆ ಎಂಬುದನ್ನು ಕಾಂಗ್ರೆಸ್ ನಾಯಕರು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದರು.
ಸರಕಾರದ ವಿರುದ್ಧ ಇಂದು ಪ್ರತಿಭಟನೆ
ಬೆಂಗಳೂರು: ಹತ್ತು ವರ್ಷಗಳ ಭ್ರಷ್ಟಾಚಾರ ಹಗರಣಗಳನ್ನೂ ತನಿಖೆಗೊಪ್ಪಿಸಿ ಎಂದರೂ ಹಿಂದೇಟು ಹಾಕಿರುವ ರಾಜ್ಯ ಸರಕಾರದ ವಿರುದ್ಧ ಸೋಮವಾರ ಬೆಂಗಳೂರಿನಲ್ಲಿ ಹೋರಾಟ ನಡೆಸುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದಲ್ಲಿ ರವಿವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರಕಾರದ ಅವಧಿಯಲ್ಲಿ ಕೇಳಿಬಂದಿದ್ದ ಆರೋಪಗಳ ತನಿಖೆಗೆ ಈಗಿನ ಸರಕಾರ ಎರಡು ವಿಚಾರಣ ಆಯೋಗಗಳನ್ನು ರಚಿಸಿದೆ. ವಿಚಾರಣೆ ಆಗಲಿ, ತನಿಖೆ ಆಗಲಿ. ಇದರಲ್ಲಿ ಆಶ್ಚರ್ಯ ಏನಿಲ್ಲ. ಈಗಾಗಲೇ ಪಿಎಸ್‌ಐ ನೇಮಕಾತಿ ಪ್ರಕರಣದ ತನಿಖೆ ನಡೆದು ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಆ ಪ್ರಕರಣದಲ್ಲಿ ಯಾರನ್ನು ರಕ್ಷಿಸುತ್ತಾರೆ? ಇನ್ನೊಂದು ಆಯಾಮದಲ್ಲಿ ತನಿಖೆ ಮಾಡುತ್ತಾರಾ? ಎಲ್ಲವನ್ನೂ ನೋಡೋಣ ಎಂದರು.
ರಾಜಕೀಯ ಸೇಡು ಬಿಟ್ಟು ಆರೋಪಗಳ ತನಿಖೆ ನಡೆಸಿ
ಇನ್ನು 40 ಪರ್ಸೆಂಟ್ ಆರೋಪದಲ್ಲಿ ನಿರ್ದಿಷ್ಟ ಪ್ರಕರಣ ಇಲ್ಲ, ದಾಖಲೆ ಇಲ್ಲ. ಎರಡು ವರ್ಷವಾದರೂ ಅವರು ದಾಖಲೆ ಕೊಟ್ಟಿಲ್ಲ. ಲೋಕಾಯುಕ್ತ ಎದುರು ಹೆಚ್ಚು ಟೆಂಡರ್ ಕೊಟ್ಟ ಹಲವು ಪ್ರಕರಣಗಳು ಇವೆ. ಇವುಗಳನ್ನು ತನಿಖೆಗೆ ಕೊಡುತ್ತಾರಾ? ಹೊಸ ದೂರು ಕೊಟ್ಟರೆ ಇವರು ಸೇರಿಸಿಕೊಳ್ಳುವರಾ? ಭ್ರಷ್ಟಾಚಾರ ಯಾವತ್ತಿದ್ದರೂ ಭ್ರಷ್ಟಾಚಾರವೇ, ಅವರ ಕಾಲದ ಆರೋಪಗಳನ್ನು ತನಿಖೆ ಮಾಡುತ್ತಾರಾ? ನಮ್ಮ ಕಾಲದ ಆರೋಪಗಳನ್ನು ತನಿಖೆ ಮಾಡಿ ಅಂತ ಮುಕ್ತವಾಗಿ ಹೇಳಿದ್ದೇವೆ. ಆದರೆ, ಅವರ ಕಾಲದ ಆರೋಪಗಳ ಬಗ್ಗೆಯೂ ತನಿಖೆ ಮಾಡಲಿ. ಅದಕ್ಯಾಕೆ ಹಿಂದೇಟು ಹಾಕುತ್ತಿದ್ದಾರೆ? ಎಂದು ಪ್ರಶ್ನಿಸಿರುವ ಬೊಮ್ಮಾಯಿ, ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ, ರಾಜಕೀಯವಾಗಿ ದುರುಪಯೋಗ ಮಾಡಿಕೊಳ್ಳುವ ಹುನ್ನಾರ ಇದರ ಹಿಂದೆ ಇದೆ. ಹೀಗಾಗಿ ಸೋಮವಾರ ರಾಜ್ಯ ಸರಕಾರದ ವಿರುದ್ಧ ಬೆಂಗಳೂರು ಬಿಜೆಪಿ ನಾಯಕರು ಹೋರಾಟ ನಡೆಸಲಿದ್ದಾರೆ ಎಂದರು ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಮತ್ತೂಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 22-25 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಮತ್ತೂಮ್ಮೆ ಅಧಿಕಾರ ಗದ್ದುಗೆ ಏರಲಿದೆ.
– ಪ್ರಹ್ಲಾದ ಜೋಶಿ, ಕೇಂದ್ರ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.