![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 7, 2020, 1:57 PM IST
ಕಲಬುರಗಿ: ಕೋವಿಡ್-19 ಸೋಂಕಿಗೆ ದೇಶದಲ್ಲೇ ಮೊದಲ ಬಲಿಯಾದ ಕಲಬುರಗಿ ಜಿಲ್ಲೆಯಲ್ಲಿ ಮತ್ತೆರಡು ಪ್ರಕರಣಗಳು ದೃಢ ಪಟ್ಟಿವೆ. ಓರ್ವ ಮಹಿಳೆ ಮತ್ತು ಪುರುಷನಿಗೆ ಕೋವಿಡ್-19 ಸೋಂಕು ಪಾಸಿಟಿವ್ ಎಂದು ಪ್ರಯೋಗಾಲಯದ ವರದಿ ಬಂದಿದೆ.
ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ತಬ್ಲಿಘಿ ಎ- ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲೆಯ ಶಹಬಾದ್ ಪಟ್ಟಣದ ವ್ಯಕ್ತಿಯ ಸೊಸೆ (28)ಗೆ ಕೋವಿಡ್-19 ಸೋಂಕು ಖಚಿತವಾಗಿದೆ.
ಕಲಬುರಗಿ ನಗರದ 57 ವರ್ಷದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದೆ. ಅಚ್ಚರಿ ಎಂದರೆ ಈ ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಈತನ ಮಾಹಿತಿ ಕಲೆ ಹಾಕಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ಅತ್ತೆ ನಂತರ ಸೊಸೆಗೆ: ಶಹಾಬಾದ್ ಪಟ್ಟಣದ ಪ್ರಕರಣವೂ ಅಚ್ಚರಿ ಮೂಡಿಸುವಂತದ್ದಾಗಿದ್ದು, ದೆಹಲಿಯಲ್ಲಿ ತಬ್ಲಿಘಿ ಎ- ಜಮಾತ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡ ವ್ಯಕ್ತಿಗೆ ಕೋವಿಡ್-19 ನೆಗೆಟಿವ್ ಇದೆ. ಆದರೆ, ಆತನ 60 ವರ್ಷದ ಪತ್ನಿಗೆ ಏ.2ರಂದು ಕೋವಿಡ್ -19 ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಈ ದಂಪತಿಯ ಸೊಸೆಗೆ ಸೋಂಕು ಹರಡಿದ್ದು, ಒಟ್ಟಾರೆ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಜನತೆಯಲ್ಲೂ ಆತಂಕ ಹೆಚ್ಚಿಸಿದೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.