VTU ನಿಂದ ಆನ್ಸರ್, ಕಿರು ಪದವಿ
Team Udayavani, Nov 15, 2023, 11:39 PM IST
ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ತನ್ನ ವಿದ್ಯಾರ್ಥಿಗಳು ಮತ್ತು ಹಳೆಯ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು ಉದ್ದಿಮೆಗಳ ಕೌಶಲ ಬೇಡಿಕೆಗೆ ಅನುಗುಣವಾದ ಆನರ್, ಕಿರು ಪದವಿ ಮತ್ತು ಪ್ರಮಾಣಪತ್ರ ಕಾರ್ಯಕ್ರಮಗಳನ್ನು ಆರಂಭಿಸಿದೆ.ಈ ಬಗ್ಗೆ ಬೆಂಗಳೂರಿನ ವಿಟಿಯು ಪ್ರಾದೇಶಿಕ ಕಚೇರಿಯಲ್ಲಿ ವಿವಿಧ ಸಂಸ್ಥೆಗಳ ಜತೆಗಿನ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಪ್ರೊ| ಎಸ್. ವಿದ್ಯಾಶಂಕರ್, ವಿಟಿಯು ವಿದ್ಯಾರ್ಥಿಗಳನ್ನು ಕೌಶಲಭರಿತರನ್ನಾಗಿಸುವುದು ಮತ್ತು ಉದ್ದಿಮೆಯ ಇಂದಿನ ಅಗತ್ಯಕ್ಕೆ ಅನುಗುಣವಾದ ಕಲಿಕೆಯನ್ನು ನೀಡುವ ದೃಷ್ಟಿಯಿಂದ ಹತ್ತು ಉದ್ದಿಮೆಗಳ ಜತೆ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ತಿಳಿಸಿದರು. ಉದ್ದಿಮೆಗಳು ನಮ್ಮ ಆನ್‌ಲೈನ್ ವೇದಿಕೆಯನ್ನು ಬಳಸಿಕೊಂಡು ತಮ್ಮ ಉದ್ಯಮದ ಅಗತ್ಯಕ್ಕೆ ಅನುಗುಣ ವಾಗಿ ಕೋರ್ಸ್‌ಗಳ ಪಠ್ಯ ರೂಪಿಸಿ ಬೋಧಕ ಸಿಬಂದಿಯನ್ನು ನೀಡಲಿವೆ.
ಆದರೆ ಪರೀಕ್ಷೆ ಮತ್ತು ಮೌಲ್ಯಮಾಪನವನ್ನು ವಿಟಿಯು ನಡೆಸಲಿದೆ. ಆಸಕ್ತರು ವಿಟಿಯು ವೆಬ್‌ಸೈಟ್ http://online.vtu.ac.in ನಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಪ್ರೊ| ವಿದ್ಯಾಶಂಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.