ಸರಕಾರಿ ಸಿಬ್ಬಂದಿ 14 ದಿನಗಳಿಗೊಮ್ಮೆ ಆ್ಯಂಟಿಜೆನ್ ಟೆಸ್ಟ್ ಗೆ ಒಳಗಾಗಲು ಡಿಸಿ ಆದೇಶ
Team Udayavani, Nov 12, 2020, 5:06 PM IST
ಕಾಸರಗೋಡು: ಜಿಲ್ಲೆಯ ಎಲ್ಲಾ ಸರಕಾರಿ ಸಿಬ್ಬಂದಿ 14 ದಿನಗಳಿಗೊಮ್ಮೆ ಆ್ಯಂಟಿಜೆನ್ ಟೆಸ್ಟ್ ಗೆ ಒಳಗಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್ ಬಾಬು ತಿಳಿಸಿದರು.
ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಜಿಲ್ಲಾ ಮಟ್ಟದ ಕೊರೊನಾ ಕೋರ್ ಸಮಿತಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೋವಿಡ್ ತಡೆ ಚಟುವಟಿಕೆಗಳ ಅಂಗವಾಗಿ ಈ ಆದೇಶ ನೀಡಲಾಗಿದೆ. ಜಿಲ್ಲಾ ಮೆಡಿಕಲ್ ಆಫೀಸ್(ಆರೋಗ್ಯ) ನೇತೃತ್ವದಲ್ಲಿರುವ ಮೊಬೈಲ್ ಟೆಸ್ಟಿಂಗ್ ಯೂನಿಟ್‌ನ ಸೇವೆ ಇದಕ್ಕಾಗಿ ಬಳಸಬಹುದು. ಈ ಸಂಬಂಧ ತಪಾಸಣೆ ಸೌಲಭ್ಯ ಒದಗಿಸಲು ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ) ಅವರಿಗೆ ಜಿಲ್ಲಾಧಿಕಾರಿ ಆದೇಶ ನೀಡಿದರು.
ಕೇಂದ್ರ ಹೆದ್ದಾರಿ ದೇಳಿ-ಪರವನಡ್ಕ ರಸ್ತೆಯಲ್ಲಿ ಸೋಮವಾರದಿಂದ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಪುನರಾರಂಭಗೊಳ್ಳಲಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಶಿಲ್ಪಾ, ಉಪಜಿಲ್ಲಾಧಿಕಾರಿ ಡಿ.ಆರ್. ಮೇಘಶ್ರೀ, ಹೆಚ್ಚುವರಿ ದಂಡನಾಧಿಕಾರಿ ಎನ್. ದೇವಿದಾಸ್, ಜಿಲ್ಲಾ ವೈದ್ಯಾಧಿಕಾರಿ ಡಾ| ಎ.ವಿ. ರಾಮದಾಸ್, ಜಿಲ್ಲಾ ವಾರ್ತಾಧಿಕಾರಿ ಮಧುಸೂದನನ್ ಎಂ. ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.