Education: 1-10 ತರಗತಿಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Team Udayavani, Sep 23, 2023, 10:43 PM IST
ಬೆಂಗಳೂರು: 2023-24ನೇ ಸಾಲಿನ ಒಂದರಿಂದ ಹತ್ತನೇ ತರಗತಿಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗಾಗಿ ಸಮಾಜ ಕಲ್ಯಾಣ ಇಲಾಖೆ ಕೊಡಮಾಡುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲುವ ಅವಕಾಶ ಕಲ್ಪಿಸಲಾಗಿದೆ. 2022-23ರ ಸಾಲಿನಲ್ಲಿ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳು ಈ ವರ್ಷ ಮತ್ತೆ ಅರ್ಜಿ ಸಲ್ಲಿಸುವಂತಿಲ್ಲ. 2023-24ರ ಸಾಲಿನ ಹೊಸ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವಿದ್ಯಾರ್ಥಿಗಳ ಆಧಾರ್ ಜೋಡಣೆಯನ್ನು ಕಡ್ಡಾಯವಾಗಿ ಮಾಡಬೇಕು ಎಂಬ ಷರತ್ತು ವಿಧಿಸಲಾಗಿದೆ. ಒಂದರಿಂದ 8ನೇ ತರಗತಿ ವರೆಗಿನ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ 6 ಲಕ್ಷ ರೂ. ಗಳೊಳಗೆ ಇರಬೇಕು, ಒಂಬತ್ತನೇ ತರಗತಿಯಿಂದ ಹತ್ತನೇ ತರಗತಿಯ ವಿದ್ಯಾರ್ಥಿಯ ಪೋಷಕರ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂ.ಗಳ ಒಳಗೆ ಇರಬೇಕು. ಮಾಹಿತಿಗಾಗಿ https://ssp.postmatric.karnataka.gov.in/ ಅಥವಾ https://sw.kar.nic.in/ ವೆಬ್ಸೈಟ್ ಪರಿಶೀಲಿಸಬಹುದು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.