ಉಚಿತ ಸಾಮೂಹಿಕ ವಿವಾಹಕ್ಕೆ ಸಿದ್ದರಬೆಟ್ಟ ಶ್ರೀಗಳಿಂದ ಅರ್ಜಿ ಆಹ್ವಾನ
Team Udayavani, Mar 28, 2023, 6:00 PM IST
ಕೊರಟಗೆರೆ : ತಾಲೂಕಿನ ಸಿದ್ದರಬೆಟ್ಟ ಶ್ರೀ ರಂಭಾಪುರಿ ಶಾಸಾ ಶಾಖಾ ಮಠದ 17ನೇ ವಾರ್ಷಿಕೋತ್ಸವ ಅಂಗವಾಗಿ ಉಚಿತ ಸಾಮೂಹಿಕ ಆದರ್ಶ ವಿವಾಹ ಹಾಗೂ ಜನ ಜಾಗೃತಿ ಧರ್ಮ ಸಮಾವೇಶವನ್ನು ಹಮ್ಮಿಕೊಂಡಿದ್ದು ವಿವಾಹವಾಗಲು ಬಯಸುವ ವಧು-ವರರು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಅವರು ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಏರ್ಪಡಿಸಿದ್ದ ಪತ್ರಿಕಾ ಗೋಷ್ಟಿಯಲ್ಲಿ ಮಾಹಿತಿ ನೀಡಿ ರಂಭಾಪುರಿ ವೀರ ಸಿಂಹಾಸನದ ಪೀಠಾಧ್ಯಕ್ಷರಾದ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ವೀರ ಸೋಮೇಶ್ವರ ರಾಜ ದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾನಿಧ್ಯದಲ್ಲಿ ಸಿದ್ದರಬೆಟ್ಟದ ಶ್ರೀ ರಂಭಾಪುರಿ ಶಾಸಾ ಶಾಖಾ ಮಠದ 17ನೇ ವಾರ್ಷಿಕೋತ್ಸವ ಅಂಗವಾಗಿ ಏರ್ಪಡಿಸಿರುವ ಉಚಿತ ಸಾಮೂಹಿಕ ಆದರ್ಶ ವಿವಾಹ ಹಾಗೂ ಜನಜಾಗೃತಿ ಧರ್ಮ ಸಮಾವೇಶದಲ್ಲಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದ್ದು ,ಈ ಉಚಿತ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಳ್ಳಲು ಬಯಸುವ ಪ್ರಾಯಸ್ತ ನೂತನ ವಧು-ವರರು ಅಥವಾ ಸಂಬಂಧಿಸಿದ ಪೋಷಕರುಗಳು ಮಾತಾ-ಪಿತರು ಮೇ.31 ರೊಳಗೆ ಅಗತ್ಯ ದಾಖಲಾತಿಗಳನ್ನು ಶ್ರೀಮಠದಲ್ಲಿ ಸಲ್ಲಿಸಿ ನೊಂದಾಯಿಸಿಕೊಳ್ಳುವುದು, ನಂತರದಲ್ಲಿ ಬರುವ ದಾಖಲಾತಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದರು.
ಇದನ್ನೂ ಓದಿ: ಅನುಮತಿ ಇಲ್ಲದೆ ದರ್ಗಾ ನವೀಕರಣಕ್ಕೆ ಮುಂದಾದ ಮುಸ್ಲಿಮರು : ವಾಗ್ವಾದ
ನೀಡಬೇಕಾದ ದಾಖಲಾತಿಗಳು:
ವಧು-ವರರ ಪ್ರತ್ಯೇಕ ತಲಾ 3 ಭಾವಚಿತ್ರಗಳು, ಜನ್ಮದಿನಾಂಕದ ಬಗ್ಗೆ ಜನನ ಪ್ರಮಾಣಪತ್ರ ಅಥವಾ ಶಾಲಾ ದಾಖಲಾತಿ ಸರ್ಟಿಫೀಕೆಟ್, ವಾಸಸ್ಥಳದ ಬಗ್ಗೆ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ, ವಧು-ವರನದು ಪ್ರಥಮ ವಿವಾಹ ಎಂಬ ಬಗ್ಗೆ ಮಾತಾ-ಪಿತರಿಂದ ದೃಡೀಕರಣ ಪತ್ರ ನೀಡುವುದು ಖಡ್ಡಾಯವಾಗಿದೆ, ಹೆಚ್ಚಿನ ಮಾಹಿತಿಗಾಗಿ ಸಿದ್ದಗಿರಿ ನಂಜುಂಡ ಸ್ವಾಮಿ 9449698466 , ಸಂಪರ್ಕಿಸುವಂತೆ ಹಾಗೂ ಖುದ್ದಾಗಿ ಸಿದ್ದರಬೆಟ್ಟದ ಶ್ರೀಮಠದಲ್ಲಿ ಸಂಪರ್ಕಿಸುವುದು ಎಂದು ತಿಳಿಸಿದ್ದಾರೆ.
ಪತ್ರಿಕಾ ಗೋಷ್ಠಿಯಲ್ಲಿ ಪ.ಪಂ.ಸದಸ್ಯ ಎ.ಡಿ.ಬಲರಾಮಯ್ಯ, ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಸಿದ್ದಮಲ್ಲಪ್ಪ, ಜಿ.ಪಂ.ಮಾಜಿ ಸದಸ್ಯೆ ಕುಸುಮಾ ಜಗನ್ನಾಥ್, ಪ.ಪಂ.ಮಾಜಿ ಸದಸ್ಯ ಲಕ್ಷ್ಮೀದೇವಮ್ಮ, ಜಿ.ಎಸ್.ಎಂ.ರಘು, ಚಿನ್ನವೆಂಕಟಶೆಟ್ಟಿ, ನಟರಾಜು, ಸಿದ್ದಗಿರಿ ನಂಜುಂಡ ಸ್ವಾಮಿ, ಮಂಜುನಾಥ್, ಶಿವಕುಮಾರ್, ಜಗನ್ನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.