ರಾಜ್ಯದ 58 ಕೆಪಿಎಸ್‌ಗೆ ಉಪ ಪ್ರಾಂಶುಪಾಲರ ನೇಮಕ
Team Udayavani, Feb 16, 2023, 6:20 AM IST
ಬೆಂಗಳೂರು: ರಾಜ್ಯದ 58 ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಗಳಿಗೆ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ ಉಪ ಪ್ರಾಂಶುಪಾಲರ ಹುದ್ದೆಗಳನ್ನು ಸೃಷ್ಟಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.
ರಾಜ್ಯದಲ್ಲಿ ಸದ್ಯ 276 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಹೊಸದಾಗಿ ಆರಂಭಿಸಲಾಗಿದೆ. ಈ ಶಾಲೆಗಳಲ್ಲಿ ಖಾಲಿ ಇರುವ ಪ್ರಾಶುಪಾಲರು/ಉಪ ಪ್ರಾಂಶುಪಾಲರ ಹುದ್ದೆಗಳನ್ನು ಪ್ರಭಾರಿಗಳಾಗಿ ಸಹ ಶಿಕ್ಷಕರು ನಿರ್ವಹಣೆ ಮಾಡುತ್ತಿದ್ದಾರೆ.
ಹುದ್ದೆಗಳನ್ನು ಸೃಷ್ಟಿಸುವ ಸಂಬಂಧ ಈಗಾಗಲೇ ಸರ್ಕಾರವು ಅನುಮತಿ ನೀಡಿದೆ. ಹುದ್ದೆಗಳ ಪೈಕಿ ಪ್ರಸ್ತುತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ ದಾಖಲಾತಿಯನ್ನು ಸ್ಯಾಟ್ಸ್ ತಂತ್ರಾಂಶದಲ್ಲಿನ ಮಾಹಿತಿಯ ಆಧಾರದಲ್ಲಿ ಪರಿಗಣಿಸಿ ಅತಿ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿರುವ ಶಾಲೆಯಿಂದ ಆರಂಭಿಸಿ ಇಳಿಕೆ ಕ್ರಮದಲ್ಲಿ 58 ಶಾಲೆಗಳನ್ನು ಗುರುತಿಸಿ ಮಂಜೂರಾತಿ ನೀಡಲು ನಿರ್ಧರಿಸಲಾಗಿದೆ.
279 ಹುದ್ದೆ ರದ್ದು:
ಇದರ ಜತೆಗೆ ಇಲಾಖೆಯಲ್ಲಿ ಹೆಚ್ಚುವರಿ ಎಂದು ಗುರುತಿಸಿರುವ 279 ಬೋಧಕೇತರ ವೃಂದದ ವಿವಿಧ ಹುದ್ದೆಗಳನ್ನು ರದ್ದುಪಡಿಸಲು ಒಪ್ಪಿಗೆ ನೀಡಿದೆ.
105 ಎಸ್‌ಡಿಎ, 50 ಶೀಘ್ರ ಲಿಪಿಕಾರರು, 48 ಸಿಸಿಟಿ, 76 ಹಿರಿಯ ಬೆರಳಚ್ಚುಗಾರರು ಸೇರಿ 279 ಹುದ್ದೆಗಳನ್ನು ರದ್ದುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.