ಮಲಪ್ರಭಾ ನದಿಗೆ ತಡೆಗೋಡೆ ನಿರ್ಮಾಣ ಪ್ರಸ್ತಾವನೆಗೆ ಅನುಮೋದನೆ : ಗೋವಿಂದ ಕಾರಜೋಳ
Team Udayavani, Jul 22, 2021, 6:35 PM IST
ಬೆಂಗಳೂರು: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಹಂಡಿಹೋಳಿ ಗ್ರಾಮದಲ್ಲಿ ಮಲಪ್ರಭಾ ನದಿಗೆ 126 ಕೋಟಿ ರೂ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಕಳೆದ ತಿಂಗಳು ನೀಡಿದ ಆಡಳಿತಾತ್ಮಕ ಅನುಮೋದನೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ.
ಈ ಕಾಮಗಾರಿಯನ್ನು ತ್ವರಿತ ಹಾಗೂ ಗುಣಮಟ್ಟದೊಂದಿಗೆ ನಿರ್ಮಿಸಲಾಗುವುದು. ಅಧಿಕ ಪ್ರಮಾಣದಲ್ಲಿ ಸಂಭವಿಸಬಹುದಾದ ಮಳೆಯ ನೀರು ನದಿಯಿಂದ ಉಕ್ಕಿ ಸಂಭವಿಸಬಹುದಾದ ಹಾನಿ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶ ಈ ಯೋಜನೆಯದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬದಾಮಿಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ನಿರ್ಮಿಸಲು ಉದ್ದೇಶಿರುವ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ ಕರ್ನಾಟಕ ನೀರಾವರಿ ನಿಗಮದ ಅಧೀನದಲ್ಲಿರುವ 3 ಎಕರೆ ಜಮೀನನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ ಎಂದು ಡಿಸಿಎಂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.