ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ : ಲಿಂಬಾವಳಿ ವಿಶ್ವಾಸ
Team Udayavani, Dec 20, 2020, 4:45 PM IST
ಬೆಂಗಳೂರು : ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದು ಶಾಸಕ ಅರವಿಂದ ಲಿಂಬಾವಳಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಮತ್ತು ಕೃಷಿ ಪರವಾದ ಆಡಳಿತವನ್ನು ಗಮನಿಸಿ ಜನರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಪಂಚಾಯತ್‌ಗಳಿಗೆ ಇದೀಗ ನೇರವಾಗಿ ಗರಿಷ್ಠ ಅನುದಾನ ಲಭಿಸುತ್ತಿದೆ. ಇದರ ಸದ್ಬಳಕೆಗಾಗಿ ಜನರು ಬಿಜೆಪಿಯ ಬೆಂಬಲಿತರನ್ನೇ ಆಯ್ಕೆ ಮಾಡಲಿದ್ದಾರೆ ಎಂದರು.
ಇದನ್ನೂ ಓದಿ:ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ? ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ
ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾದ ಡಿಸೆಂಬರ್ 25ನ್ನು ಬಿಜೆಪಿ, ರೈತರ ದಿನವಾಗಿ ಆಚರಿಸಲಿದೆ. ಪ್ರತಿ ಹೋಬಳಿಗಳಲ್ಲಿ ರೈತರ ಸಮಾವೇಶಗಳನ್ನು ಆಯೋಜಿಸಲಾಗುವುದು. ಕೇಂದ್ರ ಸರಕಾರದ ಕೃಷಿ ಸುಧಾರಣಾ ಕಾಯ್ದೆಗಳ ಕುರಿತು ಜನಜಾಗೃತಿ ಮೂಡಿಸಲಾಗುವುದು. ಅದೇದಿನ ಪ್ರಧಾನಿ ನರೇಂದ್ರ ಮೋದಿ ಅವರು 9 ಕೋಟಿ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ 2,000 ರೂಪಾಯಿಯನ್ನು ಬಿಡುಗಡೆ ಮಾಡಿ, ದೇಶದ ರೈತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.