Mulki ಮಹಿಳೆಯರ ಸರ ಅಪಹರಣಕಾರನ ಬಂಧನ
Team Udayavani, Nov 3, 2023, 10:16 PM IST
ಮೂಲ್ಕಿ: ಇಲ್ಲಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿಯ ಪಾವಂಜೆಯ ಬಳಿ ಕಳೆದ ಅ. 14ರಂದು ಮಹಿಳೆಯೊರ್ವರ ಕುತ್ತಿಗೆಯ ಚಿನ್ನದ ಸರ ಅಪಹರಣ ಮಾಡಲು ಯತ್ನಿಸಿದ ಹಾಗೂ ಉಡುಪಿಯ ಕಟಪಾಡಿಯಲ್ಲಿ ಮಹಿಳೆಯೊರ್ವರ ಕುತ್ತಿಗೆಯ ಹವಳದ ಚಿನ್ನದ ಸರವನ್ನು ಅಪಹರಿಸಿದ ಪ್ರಕರಣದ ಆರೋಪಿಯನ್ನು ಮೂಲ್ಕಿ ಪೊಲೀಸರ ತಂಡ ಬಂಧಿಸಿದ್ದು, ಆತ ಉಪಯೋಗಿಸುತ್ತಿದ್ದ ದ್ವಿಚಕ್ರ ವಾಹನವನ್ನು ಮತ್ತು ಚಿನ್ನದ ಸರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿ ವಿನಯ ಪ್ರಸಾದ್ (30) ಬಂಧಿತ ಯುವಕ. ಈತ ಮಂಗಳೂರು ಮಾಲೆಮಾರ್ ಬಳಿಯ ಬಾಡಿಗೆ ಮನೆಯಲ್ಲಿ ವಾಸ ಇದ್ದ. ಕಳವಾದ, ಪೊಲೀಸರು ವಶಕ್ಕೆ ಪಡೆದ ಸೊತ್ತಿನ ಒಟ್ಟು ಮೌಲ್ಯ 2.53 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಮಂಗಳೂರು ಕಮಿಷನರ್ ಅನುಪಮ್ ಅಗರ್‌ವಾಲ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ದಾರ್ಥ ಗೋಯಲ್ ಮತ್ತು ದಿನೇಶ್ ಕುಮಾರ್ ಅವರ ನಿರ್ದೇಶನದಲ್ಲಿ ಎಸಿಪಿ ಮಂಗಳೂರು ಉತ್ತರ ಮನೋಜ್ ಕುಮಾರ್ ಅವರ ನೇತೃತ್ವದಲ್ಲಿ ಮೂಲ್ಕಿ ಇನ್‌ಸ್ಪೆಕ್ಟರ್ ವಿಧ್ಯಾಧರ್ ಬಾಯ್ಕೆರಿಕಾರ್ ಹಾಗೂ ಪಿಎಸ್‌ಐ ವಿನಾಯಕ ಬಾವಿಕಟ್ಟೆ ಮತ್ತು ಮಾರತಿ ಪಿ. ಹಾಗೂ ಇತರ ಸಿಬಂದಿಗಳ ತಂಡ ಆರೋಪಿಯನ್ನು ಬಂಧಿಸಿ ಕಳವಿನ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.