Bantwal: ಮದುವೆಯಾಗುವುದಾಗಿ ನಂಬಿಸಿದ್ದಾತನಿಂದ ಮಹಿಳೆಯ ಮೇಲೆ ಹಲ್ಲೆ
Team Udayavani, Dec 15, 2023, 10:39 PM IST
ಬಂಟ್ವಾಳ: ಎರಡು ಮಕ್ಕಳ ತಾಯಿಯನ್ನು ಮದುವೆಯಾಗುವುದಾಗಿ ನಂಬಿಸಿ ಗಂಡನಿಂದ ಬಿಡಿಸಿ ಬಳಿಕ ಆಕೆಯನ್ನು ಬಾಡಿಗೆ ಮನೆಯಲ್ಲಿಟ್ಟು ದೈಹಿಕ ಸಂಪರ್ಕ ಬೆಳೆಸಿ ಇದೀಗ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ಪಾಣೆಮಂಗಳೂರಿನಲ್ಲಿ ನಡೆದಿದೆ.
ನರಿಕೊಂಬು ನಿವಾಸಿ ತಸ್ಲಿಂ ಆರೀಫ ಪ್ರಕರಣದ ಆರೋಪಿಯಾಗಿದ್ದು, ಆತನ ವಿರುದ್ಧ ಲೊರೆಟ್ಟೊ ನಿವಾಸಿ ಅಬ್ದುಲ್ ಅಜೀಜ್ ಪತ್ನಿ ಅನೀಶಾ ಬಾನು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಆರೀಫನು ಅಬ್ದುಲ್ ಅಜೀಜ್ನ ಸ್ನೇಹಿತನಾಗಿದ್ದು, ಹೀಗಾಗಿ ಮನೆಗೆ ಬಂದು ಹೋಗುತ್ತಿದ್ದ. ಹೀಗಾಗಿ ಆರೀಫನಿಗೂ ಅಜೀಜ್ ಪತ್ನಿ ಅನೀಶಾ ಬಾನುವಿಗೂ ಸ್ನೇಹ ಬೆಳೆದಿತ್ತು.
ಬಳಿಕ ಆತ ಅಜೀಜ್ ಇಲ್ಲದ ವೇಳೆ ಮನೆಗೆ ಹೋಗಿ ಅನೀಶಾ ಬಾನು ಜತೆ ದೈಹಿಕ ಸಂಪರ್ಕ ಬೆಳೆಸುತ್ತಿರುವ ಜತೆಗೆ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಈ ವಿಚಾರ ತಿಳಿದು ಪತಿ ಆಕೆಯನ್ನು ಮನೆಯಿಂದ ಹೊರ ಹಾಕಿದ್ದನು. ಬಳಿಕ ಆರೋಪಿಯು ಆಕೆಯನ್ನು ಪಾಣೆಮಂಗಳೂರಿನ ಜೈನರಪೇಟೆಯಲ್ಲಿ ಬಾಡಿಗೆ ಮನೆಯಲ್ಲಿರಿಸಿಕೊಂಡಿದ್ದನು. ಇದೀಗ ಆರೋಪಿಯು ಆಕೆಯ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.