ರಾಷ್ಟ್ರಪತಿ ಚುನಾವಣೆ ಸಲೀಸು, ಮುಂದೆ ಗುಜರಾತ್ ಟಾರ್ಗೆಟ್
ತಲೆಕೆಳಗಾದ ಪ್ರತಿಪಕ್ಷಗಳ ಲೆಕ್ಕಾಚಾರ; ಆಡಳಿತ ಪಕ್ಷಕ್ಕೆ ಸಲೀಸಾದ ಆಯ್ಕೆ
Team Udayavani, Mar 11, 2022, 7:45 AM IST
ನವದೆಹಲಿ: ಪಂಚರಾಜ್ಯಗಳಲ್ಲಿ ನಾಲ್ಕನ್ನು ಗೆಲ್ಲುವ ಮೂಲಕ ತನ್ನ ಶಕ್ತಿಯನ್ನು ಹಾಗೆಯೇ ಉಳಿಸಿಕೊಂಡಿರುವ ಬಿಜೆಪಿ, ರಾಷ್ಟ್ರಪತಿ ಚುನಾವಣೆಯನ್ನು ಸಲೀಸು ಮಾಡಿಕೊಂಡಿದೆ.
ಒಂದು ವೇಳೆ, ಉತ್ತರ ಪ್ರದೇಶದಲ್ಲಿ ಹಿನ್ನಡೆಯಾಗಿದ್ದರೆ, ರಾಷ್ಟ್ರಪತಿ ಚುನಾವಣೆ ವೇಳೆ ಒಂದಷ್ಟು ಸಂಕಷ್ಟ ಎದುರಾಗುತ್ತಿತ್ತು ಎಂಬ ರಾಜಕೀಯ ವಿಶ್ಲೇಷಣೆಗಳಿದ್ದವು. ಇದಕ್ಕೆ ಕಾರಣ, ಉತ್ತರ ಪ್ರದೇಶದ ಮತಮೌಲ್ಯ ಇಡೀ ದೇಶದಲ್ಲೇ ಅತ್ಯಂತ ಹೆಚ್ಚಾಗಿದೆ ಎಂಬುದು.
ಈಗಿನ ಪರಿಸ್ಥಿತಿಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಬೇಕಾದ ಶೇ.50 ಮತಗಳಿಗಿಂತ ಕೊಂಚ ಕಡಿಮೆ ಮತಗಳು ಎನ್‌ಡಿಎ ಬುಟ್ಟಿಯಲ್ಲಿವೆ. ಇದಕ್ಕಾಗಿ ಒಡಿಶಾದ ನವೀನ್ ಪಟ್ನಾಯಕ್, ಆಂಧ್ರದ ಜಗನ್ ಮೋಹನ್ ರೆಡ್ಡಿ ಅವರ ನೆರವು ಪಡೆಯಬಹುದು. ಅಲ್ಲದೆ, ಈಗ ಮೋದಿ ಮತ್ತು ಅಮಿತ್ ಶಾ ಜೋಡಿ, ಮುಂದಿನ ರಾಷ್ಟ್ರಪತಿ ಯಾರಾಗಬಹುದು ಎಂಬುದನ್ನು ಈಗ ಸಲೀಸಾಗಿ ನಿರ್ಧರಿಸ ಬಹುದಾಗಿದೆ.
ವಿಪಕ್ಷಗಳ ಲೆಕ್ಕಾಚಾರ ಕೆಳಗೆ
ಈಗಿನ ಫಲಿತಾಂಶ ಬಿಜೆಪಿಗೆ ಲಾಭ ತಂದುಕೊಟ್ಟಿದೆ ಎಂಬುದರಲ್ಲಿ ಸಂಶಯವಿಲ್ಲ. ಆದರೆ, ಪ್ರತಿಪಕ್ಷಗಳ ಯೋಜನೆಗೆ ಶಾಕ್ ನೀಡಿದೆ. ಈಗಾಗಲೇ ಟಿಆರ್‌ಎಸ್ ನಾಯಕ ಮತ್ತು ತೆಲಂಗಾಣ ಸಿಎಂ ಕೆ.ಸಿ.ಚಂದ್ರಶೇಖರ ರಾವ್ ಅವರು, ಪ್ರತಿಪಕ್ಷ ನಾಯಕರ ಭೇಟಿ ಮಾಡಿ, ವಿಪಕ್ಷಗಳ ಕಡೆಯಿಂದ ಶರದ್ ಪವಾರ್ ಅವರನ್ನು ರಾಷ್ಟ್ರಪತಿ ಚುನಾವಣೆಯಲ್ಲಿ ಕಣಕ್ಕಿಳಿಸಲು ಪ್ಲ್ರಾನ್ ಮಾಡಿದ್ದರು. ಒಂದೊಮ್ಮೆ ಉತ್ತರ ಪ್ರದೇಶದಲ್ಲಿ ಅಖೀಲೇಶ್ ಕೈ ಮೇಲಾದರೆ, ಯತ್ನಿಸಬಹುದು ಎಂಬುದು ಅವರ ಲೆಕ್ಕಾಚಾರವಾಗಿತ್ತು. ಹಾಗೆಯೇ, ಜೆಡಿಯು ನಾಯಕ ನಿತೀಶ್ ಕುಮಾರ್ ಅವರನ್ನು ಎನ್‌ಡಿಎಯಿಂದ ಬೇರ್ಪಡಿಸಿ, ಚುನಾವಣೆಗೆ ನಿಲ್ಲಿಸುವ ಪ್ರಯತ್ನಗಳೂ ನಡೆದಿದ್ದವು. ಆದರೆ ನಿತೀಶ್ ಒಪ್ಪಿರಲಿಲ್ಲ.
ಹೇಗೆ ಲೆಕ್ಕಾಚಾರ?
ಇಡೀ ದೇಶದಲ್ಲಿ ಉತ್ತರ ಪ್ರದೇಶ ಅತ್ಯಂತ ದೊಡ್ಡ ರಾಜ್ಯ. ಹೀಗಾಗಿ ಇಲ್ಲಿನ ಪ್ರತಿಯೊಬ್ಬ ಶಾಸಕನ ಮತಮೌಲ್ಯ 208 ಇದೆ. ಪಂಜಾಬ್‌ನ ಮತಮೌಲ್ಯ 116, ಉತ್ತರಾಖಂಡ 64, ಗೋವಾ 20 ಮತ್ತು ಮಣಿಪುರದ್ದು 18 ಇದೆ. ಕಳೆದ ಬಾರಿ ಉತ್ತರ ಪ್ರದೇಶದಲ್ಲಿ 300ಕ್ಕೂ ಹೆಚ್ಚು ಶಾಸಕರನ್ನು ಹೊಂದಿದ್ದ ಬಿಜೆಪಿ, ಅತ್ಯಂತ ಸಲೀಸಾಗಿ ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಹುದ್ದೆಗೆ ಆರಿಸಿತ್ತು. ಈ ಬಾರಿ ಉತ್ತರ ಪ್ರದೇಶದಲ್ಲಿ ಕೊಂಚ ಕಡಿಮೆಯಾಗಿದ್ದರೂ, ಬೇಕಾದ ಮತ ಪಡೆಯುವುದಕ್ಕೆ ತೊಂದರೆಗಳಾಗುವುದಿಲ್ಲ ಎಂದೇ ವಿಶ್ಲೇಷಿಸಲಾಗಿದೆ.
ಗುಜರಾತ್, ಹಿಮಾಚಲ ಪ್ರದೇಶ ಟಾರ್ಗೆಟ್
ಈ ವರ್ಷಾಂತ್ಯದಲ್ಲಿ ಬಿಜೆಪಿಯ ಅತ್ಯಂತ ಪ್ರಮುಖ ರಾಜ್ಯ ಹಾಗೂ ಪ್ರಧಾನಿ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಕೊಂಚ ಹಿನ್ನಡೆಯಾಗಿತ್ತು. ಈಗ ಪ್ರಧಾನಿ ಮೋದಿ ಅವರು ಈಗಿನಿಂದಲೇ ತಯಾರಿ ಶುರು ಮಾಡಲಿದ್ದಾರೆ. ಈ ವಾರವೇ ಗುಜರಾತ್‌ಗೆ ತೆರಳಲಿರುವ ಪ್ರಧಾನಿ ಮೋದಿ ಅವರು, ಎರಡು ದಿನಗಳ ವಾಸ್ತವ್ಯ ಹೂಡಲಿದ್ದು, ಗುಜರಾತ್ ಚುನಾವಣಾ ಪ್ರಚಾರ ಆರಂಭ ಮಾಡಲಿದ್ದಾರೆ ಎಂದು ಮೂಲಗಳು ಹೇಳಿವೆ. ಹಾಗೆಯೇ ಹಿಮಾಚಲ ಪ್ರದೇಶದ ಚುನಾವಣೆಗೂ ಸಿದ್ಧತೆ ಶುರುವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.