Award; ಅನುದಾನ ರಹಿತ ಶಾಲೆಗಳ ಸಂಘ: ಉತ್ತಮ ಆಡಳಿತಗಾರ, ಶಿಕ್ಷಕ ಪ್ರಶಸ್ತಿ ಇಂದು ಪ್ರದಾನ
ಅಶೋಕ್ ಪೈ ಸಹಿತ ಮೂವರಿಗೆ ಉತ್ತಮ ಆಡಳಿತ ಪ್ರಶಸ್ತಿ
Team Udayavani, Oct 21, 2024, 12:12 AM IST
ಮಂಗಳೂರು: ಮಾನ್ಯತೆ ಪಡೆದ ಅನುದಾನ ರಹಿತ ಶಾಲೆಗಳ ಸಂಘದ ಕೊಡ ಮಾಡುವ 2024-25 ಸಾಲಿನ ರಾಜ್ಯಮಟ್ಟದ ಉತ್ತಮ ಆಡಳಿತ ಮಂಡಳಿ (ಆಡಳಿತಗಾರ) ಪ್ರಶಸ್ತಿ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಘೋಷಿಸಿದೆ.
ಉತ್ತಮ ಆಡಳಿತ ಮಂಡಳಿ ಪ್ರಶಸ್ತಿ: ಮಂಗಳೂರು ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಸ್ಕೂಲ್‌ನ ಅಧ್ಯಕ್ಷ ಡಾ| ಕೆ.ಸಿ.ನಾೖಕ್, ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ, ಬಂಟ್ವಾಳ ತಾಲೂಕಿನ ವಿಶಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಂಚಾಲಕರಾಗಿದ್ದ ದಿ| ಎಲ್.ಎನ್.ಕುಡೂರು, ಕಣಚೂರು ಪಬ್ಲಿಕ್ ಸ್ಕೂಲ್‌ನ ಚೇರ್ಮನ್ ಯು.ಕೆ.ಮೋನು ಅವರು ಉತ್ತಮ ಆಡಳಿತಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಉತ್ತಮ ಶಿಕ್ಷಕ ಪ್ರಶಸ್ತಿ: ಪುತ್ತೂರಿನ ಮಂಜಲ್ಪಡ್ಡು ಸುದಾನ ವಸತಿಯುತ ಶಾಲೆಯ ಶಿಕ್ಷಕಿ ಕವಿತಾ ಅಡೂರು, ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ, ಕಡಬ ತಾಲೂಕಿನ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸರಿತಾ ಜನಾರ್ದನ ಆಲಂಕಾರು, ಕಡಬ ತಾಲೂಕು ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕಿ ವಿದ್ಯಾರತ್ನ ಎಚ್. ಹಾಗೂ ಬಂಟ್ವಾಳ ತಾಲೂಕು ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿ ಸುಪ್ರಿಯಾ ಡಿ. ಅವರು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅ.21ರಂದು ಬೆಂಗಳೂರಿನ ಜುದ್ದಿ ಅಂತಾ ರಾಷ್ಟ್ರೀಯ ಶಾಲಾ ಆಡಿಟೋರಿಯಂನಲ್ಲಿ ಜರಗುವ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಉಡುಪಿ: ಅಶೋಕ್ ಪೈ ಸಹಿತ ಮೂವರಿಗೆ ಉತ್ತಮ ಆಡಳಿತ ಪ್ರಶಸ್ತಿ
ಉಡುಪಿ: ಕರ್ನಾಟಕ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ (ರುಪ್ಸಾ) ರಾಜ್ಯ ಮಟ್ಟದ ಪ್ರಶಸ್ತಿಗೆ ಜಿಲ್ಲೆಯಲ್ಲಿ ಒಟ್ಟು ಒಂಬತ್ತು ಶಾಲೆಗಳು ಆಯ್ಕೆಯಾಗಿವೆ. ಉತ್ತಮ ಆಡಳಿತ ನಿರ್ವಹಣೆಗಾಗಿ ಉಡುಪಿಯ ಶಾರದಾ ರೆಸಿಡೆನ್ಶಿಯಲ್ ಸ್ಕೂಲ್‌ನ ಡಾ| ಟಿಎಂಎ ಪೈ ಫೌಂಡೇಶನ್ ಅಧ್ಯಕ್ಷ ಅಶೋಕ್ ಪೈ, ಕುಂಜಾರುಗಿರಿ ಪಾಜಕ ಆನಂದತೀರ್ಥ ವಿದ್ಯಾಲಯದ ಎನ್. ನಾಗರಾಜ್ ಬಲ್ಲಾಳ್, ಬ್ರಹ್ಮಾವರದ ನಿರ್ಮಲಾ ಆಂಗ್ಲ ಮಾಧ್ಯಮ ಶಾಲೆಯ ರೆ| ಫಾ| ಜಾನ್ ಫೆರ್ನಾಂಡಿಸ್ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಉತ್ತಮ ಶಿಕ್ಷಕ ಪ್ರಶಸ್ತಿ
ಉತ್ತಮ ಶಿಕ್ಷಕ – ಶಿಕ್ಷಕಿ ಪ್ರಶಸ್ತಿಗೆ ಕುಂದಾಪುರ ಹೋಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆಯ ತೆರೇಸಾ ಶಾಂತಿ ಡಿ’ಸೋಜಾ, ಅಮಾಸೆಬೈಲು ಡ್ಯುಯೆಲ್ ಸ್ಟಾರ್ ಎಜುಕೇಶನ್ ಇನ್‌ಸ್ಟಿಟ್ಯೂಟ್‌ನ ವಿಘ್ನೇಶ್ ಜಿ.ಎಲ್., ಕಾರ್ಕಳದ ಹಿರ್ಗಾನ ಕುಕ್ಕಂದೂರಿನ ಸೈಂಟ್ ಮರಿಯಾ ಗೊರೆಟ್ಟಿ ಸ್ಕೂಲ್‌ನ ಆರತಿ, ಬೆಳ್ಮಣ್ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಲೈಡ್ವಿನ್ ಅರಾನ್ಹಾ, ಸಾಸ್ತಾನ ಸೈಂಟ್ ಆ್ಯಂಟನಿ ಆಂಗ್ಲ ಮಾಧ್ಯಮ ಶಾಲೆಯ ಅನಿತಾ ಅಲ್ಮೇಡಾ, ಕೋಟ ವಿವೇಕ ಆಂಗ್ಲ ಮಾಧ್ಯಮ ಶಾಲೆಯ ವಿನೀತಾ ವಿ., ಸೈಂಟ್ ಕ್ಲೇವಿಯರ್ ಆಂಗ್ಲ ಮಾಧ್ಯಮ ಶಾಲೆಯ ಅನಿಲ್ ಕುಮಾರ್ ಮತ್ತು ಪಡುಬಿದ್ರಿ ಸಾಗರ್ ವಿದ್ಯಾ ಮಂದಿರ ಆಂಗ್ಲಮಾಧ್ಯಮ ಶಾಲೆಯ ವಿನುತಾ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕುಂಭಾಶಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ… ಇಬ್ಬರು ಗಂಭೀರ
Karkala: ರಸ್ತೆ ಬದಿ ತೋಡಿಗೆ ಜಾರಿದ ವಿಕ್ರಂ ಗೌಡ ಮೃತದೇಹ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್
Udupi: ನಮ್ಮ ಶೌಚಾಲಯ ನಮ್ಮ ಗೌರವ ತಿಂಗಳ ಆಂದೋಲನಕ್ಕೆ ಚಾಲನೆ
Udupi: 10 ತಿಂಗಳಲ್ಲಿ 228 ಕಳವು ಕೇಸ್!
History: ನಕ್ಸಲ್ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್-ನಕ್ಸಲ್ ಮುಖಾಮುಖಿ
MUST WATCH
ಹೊಸ ಸೇರ್ಪಡೆ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Kollywood: ಯೂಟ್ಯೂಬ್ ವಿಮರ್ಶೆ ಬ್ಯಾನ್ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.