Karnataka: ಜನವರಿ ಅಂತ್ಯದಲ್ಲಿ ಸರಕಾರದಿಂದಲೇ ಉದ್ಯೋಗ ಮೇಳ

ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸಲು ಮುಂದಾದ ರಾಜ್ಯ ಸರಕಾರ

Team Udayavani, Dec 29, 2023, 10:51 PM IST

VIDHANA SOUDHA 1

ಬೆಂಗಳೂರು: ನಿರುದ್ಯೋಗ ಭತ್ತೆ ನೀಡುವ “ಯುವನಿಧಿ” ಯೋಜನೆ ಅಡಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಬೆನ್ನಲ್ಲೇ, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಕಾರ್ಯಕ್ರಮಕ್ಕೆ ಸರಕಾರ ಮುಂದಾಗಿದೆ. ಈ ಸಂಬಂಧ ರಾಜಧಾನಿ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್‌ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಿದ್ದು, ಇದಕ್ಕಾಗಿ ಸಚಿವರ ತಂಡ ರಚಿಸಲಾಗಿದೆ.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ಉದ್ಯೋಗ ಮೇಳದ ಪೂರ್ವಭಾವಿ ಸಭೆಯಲ್ಲಿ ಮೇಳದ ಪರಿಣಾಮಕಾರಿ ಅನುಷ್ಠಾನಕ್ಕೆ ಸಚಿವರ ತಂಡ ರಚಿಸಲು ಸೂಚಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದೆ. ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲು ಸಚಿವರ ತಂಡ ರಚಿಸಲಾಗುವುದು.ಈ ತಂಡವು ವಿವಿಧ ಉದ್ದಿಮೆಗಳೊಂದಿಗೆ ಚರ್ಚಿಸಿ, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಾತರು ಮೇಳದಲ್ಲಿ ಭಾಗವಹಿಸಲು ಕ್ರಮ ಕೈಗೊಳ್ಳಲಿದೆ ಎಂದರು.
ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತೂ ಪರಿಶೀಲಿಸುವಂತೆ ಸೂಚಿಸಿದ ಮುಖ್ಯಮಂತ್ರಿ, ಇದಲ್ಲದೆ ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಉದ್ಯೋಗ ನೀತಿಯನ್ನು ಹೊಂದುವ ಅಗತ್ಯವಿದೆ. ಈ ನೀತಿಯನ್ನು ರೂಪಿಸಲು ಸಿದ್ಧತೆ ನಡೆಸುವಂತೆ ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಡಾ| ಜಿ. ಪರಮೇಶ್ವರ್‌, ಎಂ.ಬಿ. ಪಾಟೀಲ್‌, ಪ್ರಿಯಾಂಕ್‌ ಖರ್ಗೆ, ಡಾ| ಎಂ.ಸಿ. ಸುಧಾಕರ, ಸಂತೋಷ್‌ ಲಾಡ್‌, ಬಿ. ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ, ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ. ಅತೀಕ್‌, ಕಾರ್ಯದರ್ಶಿ ಡಾ| ಕೆ.ವಿ. ತ್ರಿಲೋಕಚಂದ್ರ ಮತ್ತಿತರರಿದ್ದರು.

ಸಚಿವರ ತಂಡದಲ್ಲಿ ಯಾರ್ಯಾರು?
ಚುನಾವಣೆ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಇದಕ್ಕಾಗಿ ರಚಿಸಿದ ಸಚಿವರ ತಂಡದಲ್ಲಿ ಎಂ.ಬಿ.ಪಾಟೀಲ್‌, ಪ್ರಿಯಾಂಕ್‌ ಖರ್ಗೆ, ಡಾ| ಶರಣಪ್ರಕಾಶ ಪಾಟೀಲ್‌, ಡಾ| ಎಂ.ಸಿ. ಸುಧಾಕರ್‌, ಬಿ. ನಾಗೇಂದ್ರ, ಸಂತೋಷ್‌ ಲಾಡ್‌, ದಿನೇಶ್‌ ಗುಂಡೂರಾವ್‌ ಇರಲಿದ್ದಾರೆ. ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ ಹಾಗೂ ಕೈಗಾರಿಕೆಗಳ ಅಗತ್ಯದ ನಡುವಿನ ಅಂತರವನ್ನು ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆಯೂ ಶಿಫಾರಸು ಮಾಡುವಂತೆ ಸಚಿವರ ತಂಡಕ್ಕೆ ಸಿಎಂ ನಿರ್ದೇಶನ ನೀಡಿದರು.

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.