Khalistani: ಕ್ಯಾಲಿಫೋರ್ನಿಯಾ ದೂತಾವಾಸಕ್ಕೆ ದಾಳಿ- ಖಲಿಸ್ತಾನಿ ಉಗ್ರರ ಮಾಹಿತಿ ರಿಲೀಸ್
Team Udayavani, Sep 21, 2023, 9:15 PM IST
ನವದೆಹಲಿ: ಖಲಿಸ್ತಾನಿ ಭಯೋತ್ಪಾದಕರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕಠಿಣ ಕ್ರಮಗಳನ್ನು ಆರಂಭಿಸಿದೆ. ಮಾ.18, 19ರಂದು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಇರುವ ಭಾರತದ ಹೈಕಮಿಷನ್ ಕಚೇರಿ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಲು ಯತ್ನಿಸಿದ್ದ ಹತ್ತು ಮಂದಿ ಉಗ್ರರ ವಿವರಗಳನ್ನು ತನಿಖಾ ಸಂಸ್ಥೆ ಬಿಡುಗಡೆ ಮಾಡಿದೆ. ಅವರ ಬಗ್ಗೆ ಮಾಹಿತಿ ನೀಡಬೇಕು ಎಂದು ಸಾರ್ವಜನಿಕರಿಗೆ ಎನ್ಐಎ ಮನವಿ ಮಾಡಿದೆ. ಮಾಹಿತಿ ನೀಡಿದವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ವಾಗ್ಧಾನವನ್ನೂ ಮಾಡಿದೆ.
ಜೂನ್ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಎಫ್ಐಆರ್ ದಾಖಲಿಸಿತ್ತು. ಹತ್ತು ಮಂದಿಯ ವಿರುದ್ಧ ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ ಮತ್ತು ಸಾರ್ವಜನಿಕ ಆಸ್ತಿಗೆ ಹಾನಿ ತಡೆ ಕಾಯ್ದೆಗಳ ಅನ್ವಯ ದಾಳಿ ನಡೆಸಿದವರ ವಿರುದ್ಧ ಕೇಸು ದಾಖಲಿಸಲಾಗಿದೆ.
ಬುಧವಾರ ನಡೆದಿದ್ದ ಬೆಳವಣಿಗೆಯಲ್ಲಿ ಐವರು ಉಗ್ರರ ವಿರುದ್ಧ ಮಾಹಿತಿ ನೀಡಿದರೆ ಹತ್ತು ಲಕ್ಷ ರೂ. ಬಹುಮಾನ ನೀಡುವ ವಾಗ್ಧಾನ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.