ನೀರು ಕೇಳಿದ ಮಹಿಳೆಯರ ಮೇಲೆ ಹಲ್ಲೆ
Team Udayavani, Jun 29, 2019, 3:09 AM IST
ಚಿಂತಾಮಣಿ: ತಾಲೂಕಿನ ಮುರಗಮಲ್ಲ ಗ್ರಾಮದಲ್ಲಿ ಕುಡಿಯುವ ನೀರು ಕೇಳಿದ ಗ್ರಾಮಸ್ಥರ ಮೇಲೆಯೇ ಗ್ರಾಮ ಪಂಚಾಯಿತಿಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿರುವ ಸಿಬ್ಬಂದಿ ತನ್ನ ಸಹಚರರ ಜತೆ ಸೇರಿ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುರುಗಮಲ್ಲ ಗ್ರಾಮದಲ್ಲಿ ಹಲವು ದಿನಗಳಿಂದ ನೀರಿನ ಸಮಸ್ಯೆ ಇದ್ದು, ಗ್ರಾಮ ಪಂಚಾಯಿತಿ ವತಿಯಿಂದ ಸಮರ್ಪಕವಾಗಿ ನೀರನ್ನು ನೀಡುತ್ತಿಲ್ಲ ಎಂಬುದು ಗ್ರಾಮಸ್ಥರ ಆರೋಪ. ಇದಕ್ಕಾಗಿ ಈ ಹಿಂದೆ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ, ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.
ಆದರೂ ನೀರಿನ ಸಮಸ್ಯೆ ನೀಗದ ಬಗ್ಗೆ ಗ್ರಾಮಸ್ಥರಲ್ಲಿ ಆಕ್ರೋಶ ಮಡುಗಟ್ಟಿತ್ತು. ಈ ಮಧ್ಯೆ, ಗುರುವಾರ ಸಂಜೆ ಗ್ರಾಪಂನಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡುವ ಶಂಕರ್ ಎಂಬಾತ, ಗ್ರಾ.ಪಂ. ಅನುಮತಿ ಇಲ್ಲದೇ ಗ್ರಾಮದ ಮನೆಯೊಂದಕ್ಕೆ ನಲ್ಲಿ ಸಂಪರ್ಕ ಕಲ್ಪಿಸುತ್ತಿದ್ದ. ಇದನ್ನು ಪ್ರಶ್ನಿಸಿದ ನೆರೆಹೊರೆಯ ಮಹಿಳೆಯರು, ನಮಗೆ ಕುಡಿಯಲು ಸಮರ್ಪಕವಾಗಿ ನೀರು ಕೊಡಿ ಎಂದು ಗಲಾಟೆ ಆರಂಭಿಸಿದರು.
ಈ ವೇಳೆ, ಗ್ರಾಮಸ್ಥರ ಮೇಲೆ ಶಂಕರ್ ಹಾಗೂ ಆತನ ಸಹಚರರು ಹಲ್ಲೆ ನಡೆಸಿದ್ದು, ಸುಜಾತಾ, ಲಲಿತಾ, ಅಮರಾವತಮ್ಮ, ಪದ್ಮಾವತಮ್ಮ, ಸುಮಾ ಸೇರಿ 18 ಮಹಿಳೆಯರು, ಪವನ್, ರಾಧಾಕಷ್ಣ, ಪ್ರಶಾಂತ್ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಂಚಾರ‌್ಲಹಳ್ಳಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಗ್ರಾಪಂ ನೌಕರನ ಮನೆ ಮುಂದೆ ಮಾತ್ರ ನಲ್ಲಿ ಹಾಕಿಸಿದ್ದಾರೆಂದು ಹೇಳಿ ಕೆಲವರು ಗಲಾಟೆ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಾವು ಯಾರ ಮನೆ ಮುಂದೆಯೂ ನಲ್ಲಿ ಅಳವಡಿಸಿಲ್ಲ. ವೈಯಕ್ತಿಕ ಕಾರಣಗಳಿಂದ ಗಲಾಟೆ ನಡೆದಿರಬಹುದು. ಕುಡಿಯುವ ನೀರಿನ ವಿಚಾರದಲ್ಲಿ ಗಲಾಟೆ ನಡೆದ ಬಗ್ಗೆ ಮಾಹಿತಿಯಿಲ್ಲ.
-ಗೀತಾ, ಮುರಗಮಲ್ಲ ಗ್ರಾಪಂ ಅಭಿವೃದ್ದಿ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
MUST WATCH
ಹೊಸ ಸೇರ್ಪಡೆ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.