ಔರಾದ್ಕರ್‌ ವರದಿ ಜಾರಿಗೆ ಬದ್ಧ

Team Udayavani, Sep 19, 2019, 3:09 AM IST

ouradkar

ಬೆಂಗಳೂರು: “ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿ ವೇತನ ಪರಿಷ್ಕರಣೆ ಕುರಿತು ಹಿರಿಯ ಐಪಿಎಸ್‌ ಅಧಿಕಾರಿ ರಾಘವೇಂದ್ರ ಔರಾದ್ಕರ್‌ ವರದಿಯನ್ನು ಜಾರಿ ಮಾಡುವ ಬಗ್ಗೆ ಯಾವುದೇ ಗೊಂದಲಗಳಿಲ್ಲ. ಸದ್ಯದಲ್ಲೇ ಜಾರಿಗೆ ತರಲಾಗುವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಎಂಜಿನಿಯರ್ ಡೇ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಕೆಲ ಅಂಕಿ-ಅಂಶಗಳ ಲೆಕ್ಕಾಚಾರದಲ್ಲಿ ವ್ಯತ್ಯಾಸ ಉಂಟಾಗಿದ್ದರಿಂದ ತಾತ್ಕಾಲಿಕವಾಗಿ ಇದನ್ನು ತಡೆ ಹಿಡಿಯಲಾಗಿತ್ತು. ಎಲ್ಲ ಗೊಂದಲಗಳನ್ನು ಸರಿಪಡಿಸಿ ಸದ್ಯದಲ್ಲೇ ಹೊಸ ಆದೇಶ ಹೊರಡಿಸಲಾಗುವುದು. ಈ ಹಿಂದಿನ ಆದೇಶದಲ್ಲಿ ಬಿಟ್ಟು ಹೋಗಿದ್ದ ಡಿವೈಎಸ್ಪಿ, ಅನುಯಾಯಿಗಳು (ಆರ್ಡರ್ಲಿ), ಅಗ್ನಿಶಾಮಕ ದಳ ಮತ್ತು ಕಾರಾಗೃಹ ಇಲಾಖೆಯ ಸಿಬ್ಬಂದಿಯ ವೇತನದ ಬಗ್ಗೆಯೂ ಕ್ರಮ ಕೈಗೊಳ್ಳುವ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇತರರಿಗೆ ಮಾದರಿ: ಇದಕ್ಕೂ ಮೊದಲು, ಕರ್ನಾಟಕ ರಾಜ್ಯ ಪೊಲೀಸ್‌ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ಪೊಲೀಸ್‌ ಪ್ರಧಾನ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಎಂಜಿನಿ ಯರ್ ಡೇ ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು. ಪೊಲೀಸ್‌ ಇಲಾಖೆಯ ಸಮಗ್ರ ಅಭಿವೃದ್ಧಿಗಾಗಿ ಮುಂದಿನ ಮೂರು ವರ್ಷ ಗಳಲ್ಲಿ 15 ಸಾವಿರ ಕೋಟಿ ರೂ. ಮೊತ್ತದ ಯೋಜನೆಗಳನ್ನು ಕೈಗೆತ್ತಿಕೊಳ್ಳ ಲಾಗುವುದು ಎಂದು ಹೇಳಿದರು.

ಸರ್ಕಾರದ ಬಹುತೇತ ನಿಗಮಗಳು ನಷ್ಟದಲ್ಲಿವೆ. ಆದರೆ, ಪೊಲೀಸ್‌ ವಸತಿ ನಿಗಮ 2017 ರಿಂದೀಚೆಗೆ ವಾಣಿಜ್ಯ ಉದ್ದೇಶಗಳನ್ನು ಕೈಗೆತ್ತಿಕೊಂಡು 13 ಕೋಟಿ ರೂ.ಲಾಭದಲ್ಲಿ ನಡೆಯುತ್ತಿದೆ. ಅದರ ಕಾರ್ಯ ನಿರ್ವಹಣೆ ಇತರ ನಿಗಮಗಳಿಗೆ ಮಾದರಿಯಾಗಿದೆ. ಮಂದೆಯೂ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿ ಕೊಂಡು ತನ್ನ ಜವಾಬ್ದಾರಿಯನ್ನು ನಿಭಾಯಿಸಲಿದೆ ಎಂಬ ವಿಶ್ವಾಸವಿದೆ. ನಿಗಮದಲ್ಲಿ ಹೊಸ ಎಂಜಿನಿಯರ್‌ಗಳ ಹುದ್ದೆಗಳನ್ನು ಸೃಷ್ಟಿಸಬೇಕಿದೆ. ಕೇಡರ್‌ ವ್ಯವಸ್ಥೆ ಜಾರಿಗೆ ತರುವ ಅವಶ್ಯಕತೆ ಇದೆ. ಸರ್ಕಾರ ಈ ಎಲ್ಲ ಕೆಲಸಗಳಿಗೂ ಅಗತ್ಯ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.

ವಿಶ್ವೇಶ್ವರಯ್ಯ ಯುಗಪುರುಷ: ಪೊಲೀಸ್‌ ಇಲಾಖೆ ಎಂದರೆ ಕೈದಿಗಳು, ಆರೋಪಿಗಳು, ಪೊಲೀಸ್‌ ಅಧಿಕಾರಿಗಳು ಮಾತ್ರ ಇರುತ್ತಾರೆ ಎಂದು ಭಾವಿಸಿದ್ದೆ. ಆದರೆ, ಇಲ್ಲಿಯೂ ಎಂಜಿನಿಯರ್‌ಗಳಿದ್ದಾರೆ ಎಂದ ಅವರು, ಸರ್‌ ಎಂ.ವಿಶ್ವೇಶ್ವರಯ್ಯ ಯುಗ ಪುರುಷ. ಅವರ ನಂತರ ಬಹಳಷ್ಟು ಎಂಜಿನಿಯರ್‌ಗಳು ಬಂದಿದ್ದಾರೆ. ಆದರೆ, ಅವರಷ್ಟು ಕೆಲಸವನ್ನು ಯಾರೂ ಮಾಡಲಿಲ್ಲ. ಅವರ ಸಾಧನೆಗಳೇ ಮುಂದಿನ ಪೀಳಿಗೆಗೆ ಕೊಡುಗೆ ಇದ್ದಂತೆ ಎಂದು ಸ್ಮರಿಸಿದರು.

ನೇಷನ್‌ ಬಿಲ್ಡರ್‌: ಪ್ರಧಾನಿ ನರೇಂದ್ರ ಮೋದಿ ಅವರೂ ಒಳ್ಳೆಯ ಎಂಜಿನಿಯರ್‌. ದೇಶವನ್ನು ಸದೃಢವಾಗಿ ನಿರ್ಮಾಣ ಮಾಡುತ್ತಿದ್ದು, “ನೇಷನ್‌ ಬಿಲ್ಡರ್‌’ ಇದ್ದಂತೆ. ಅವರ ಬದ್ಧತೆ, ಕಾರ್ಯವೈಖರಿ ಇಡೀ ದೇಶವನ್ನು ಪ್ರಗತಿಯ ಪಥದ ಕಡೆ ಕೊಂಡೊಯ್ಯುತ್ತಿದೆ. ಅದು ನಮಗೆ ಹೆಮ್ಮೆ ತರುವ ವಿಷಯ ಎಂದರು. ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾದ ನೀಲಮಣಿ ಎನ್‌.ರಾಜು ಮಾತನಾಡಿ, ಈಗಾಗಲೇ ಪೊಲೀಸ್‌ ವಸತಿ ನಿಗಮದಿಂದ 11 ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ. ಹೀಗಾಗಿ 2020-25ರ ಯೋಜನೆಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ ಎಂದು ತಿಳಿಸಿದರು.

ಇದೇ ವೇಳೆ ನಿಗಮದ ಎಂಜಿನಿಯರ್‌ಗಳನ್ನು ಸನ್ಮಾನಿಸಲಾಯಿತು. ಕಾರ್ಯ ಕ್ರಮದಲ್ಲಿ ನಿಗಮದ ಅಧ್ಯಕ್ಷರಾದ ರಾಘವೇಂದ್ರ ಔರಾದ್ಕರ್‌, ಸಿಐಡಿ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌, ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ಮಹಾನಿರ್ದೇಶಕ ಎ.ಎಂ.ಪ್ರಸಾದ್‌, ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌, ಎಡಿಜಿಪಿ ಸುನೀಲ್‌ ಕುಮಾರ್‌, ಚರಣ್‌ ರೆಡ್ಡಿ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.