ಕಾನೂನು ಸೇವಾ ಪ್ರಾಧಿಕಾರದಿಂದ ಜಾಗೃತಿ
ಅರೆ ನ್ಯಾಯಿಕ ಸ್ವಯಂಸೇವಕರ ನಿಯೋಜನೆ ಕೈದಿಗಳಿಂದ ಅರಿವು
Team Udayavani, Apr 3, 2020, 5:27 AM IST
ಬೆಂಗಳೂರು: ಕೋವಿಡ್-19 ವೈರಸ್ ಸೋಂಕು ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು ಸರಕಾರಿ ಆಡಳಿತ ಯಂತ್ರ ಕೈಗೊಳ್ಳುತ್ತಿರುವ ಕ್ರಮಗಳಿಗೆ ಪೂರಕವಾಗಿ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಜಾಗೃತಿ ಮೂಡಿಸಲು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮುಂದಾಗಿದೆ.
ಸರಕಾರ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವುದು, ಸ್ವತ್ಛತೆ ಕಾಪಾಡುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು. ಸಾರ್ವಜನಿಕರಲ್ಲಿ ಅತ್ಮವಿಶ್ವಾಸ ತುಂಬುವುದರ ಜತೆಗೆ ಸೋಂಕು ಹರಡುವುದನ್ನು ತಡೆಗಟ್ಟಲು ಸರಕಾರ ಮತ್ತು ಸ್ಥಳೀಯ ಆಡಳಿತ ಸಂಸ್ಥೆಗಳು ಕೈಗೊಂಡಿರುವ ಕ್ರಮಗಳ ಮೇಲ್ವಿಚಾರಣೆ ನಡೆಸಿ ಸಂದರ್ಭಾನುಸಾರ ಅಗತ್ಯ ಸಲಹೆಗಳನ್ನು ನೀಡುವುದು. ಒಟ್ಟಾರೆ ಕೋವಿಡ್-19 ವೈರಸ್ ಸೋಂಕು ಹರಡುವುದನ್ನು ತಡೆಯಲು ಸರಕಾರ ಜಿಲ್ಲೆ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ನಡೆಸುತ್ತಿರುವ ಪ್ರಯತ್ನಗಳಿಗೆ ಶಕ್ತಿ ತುಂಬುವುದು ಕಾನೂನು ಸೇವಾ ಪ್ರಾಧಿಕಾರದ ಮುಖ್ಯ ಉದ್ದೇಶವಾಗಿದೆ.
ಈ ಜಾಗೃತಿ ಅಭಿಯಾನಕ್ಕಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳು ಮತ್ತು ತಾಲೂಕು ಕಾನೂನು ಸೇವಾ ಸಮಿತಿಗಳು ಅಗತ್ಯಕ್ಕೆ ತಕ್ಕಂತೆ ಒಂದೊಂದು ಜಿಲ್ಲೆಗೆ 50 ರಿಂದ 100 ಅರೆ ನ್ಯಾಯಿಕ (ಪ್ಯಾರಾ ಲೀಗಲ್) ಸ್ವಯಂಸೇವಕರನ್ನು ನಿಯೋಜಿಸಿಕೊಂಡಿವೆ. ಕಾನೂನು ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಇವರಲ್ಲಿ ಸೇರಿದ್ದಾರೆ. ಸಮಾಜದಲ್ಲಿ ಜಾಗೃತಿ ಮೂಡಿಸಲು ಇಚ್ಛಿಸುವ ಯಾರೇ ಮುಂದೆ ಬಂದರೂ ಅವರಿಗೂ ಅವಕಾಶ ನೀಡಲಾಗುವುದು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ. ಬಸವರಾಜು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವಾ ಸಮಿತಿಗಳ ವತಿಯಿಂದ ವಾಹನಗಳ ವ್ಯವಸ್ಥೆ ಮಾಡಲಾಗುತ್ತದೆ. ಅದರಲ್ಲಿ ಅರೆ ನ್ಯಾಯಿಕ ಸ್ವಯಂ ಸೇವಕರು ಜಿಲ್ಲಾ, ತಾಲೂಕು ಮತ್ತು ಗ್ರಾಮಗಳ ರಸ್ತೆಗಳು, ಬೀದಿಗಳಲ್ಲಿ ಅದರಲ್ಲೂ ಪ್ರಮುಖವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ ನಿಂತು ಧ್ವನಿವರ್ಧಕಗಳ ಮೂಲಕ ಜಾಗೃತಿ ಸಂದೇಶ ಸಾರುತ್ತಾರೆ. ಕೆಲವು ಕಡೆ ಜಿಲ್ಲಾ ವಿಪತ್ತು ನಿರ್ವಹಣ ಸಮಿತಿಗಳಿಂದ ಆ್ಯಂಬುಲೆನ್ಸ್‌ಗಳನ್ನು ಒದಗಿಸಲಾಗಿದ್ದು, ಅದರಲ್ಲಿ ಥರ್ಮಲ್ ಸ್ಕ್ಯಾನರ್‌ಗಳಿಂದ ಜನರಿಗೆ ತಪಾಸಣೆಯನ್ನು ಕೂಡಾ ಮಾಡಲಾಗುವುದು.
ಅಲ್ಲದೇ ಸ್ಥಳೀಯ ಆಡಳಿತ ಕೈಗೊಳ್ಳುತ್ತಿರುವ ಕ್ರಮಗಳು ಮೇಲ್ವಿಚಾರಣೆ, ಸ್ಯಾನಿಟೈಸರ್, ಮಾಸ್ಕ್, ಗ್ಲೌಸ್ ವಿತರಣೆ, ಕಾರ್ಮಿಕರಿಗೆ ಅನ್ನ-ಆಶ್ರಯ, ವೈದ್ಯಕೀಯ ಸೌಲಭ್ಯಗಳ ಕುರಿತು ಮೇಲ್ವಿಚಾರಣೆ ನಡೆಸಿ ಜಿಲ್ಲಾಡಳಿತದೊಂದಿಗೆ ಅಗತ್ಯ ಸಮನ್ವಯ ಸಾಧಿಸುವುದು ಮತ್ತು ಸಹಕಾರ ನೀಡುವುದು ಪ್ರಾಧಿಕಾರದ ಜಾಗೃತಿ ಅಭಿಯಾನದ ಭಾಗವಾಗಿದೆ. ಇದಕ್ಕೆ ತಗಲುವ ವೆಚ್ಚವನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಭರಿಸಲಿದೆ.
ಅಭಿಯಾನಕ್ಕೆ ಕೈಜೋಡಿಸಲಿರುವ ಕೈದಿಗಳು
ಕೋವಿಡ್-19 ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಜನರಲ್ಲಿ ಜಾಗೃತಿ ಮೂಡಿಸುವ ತನ್ನ ಅಭಿಯಾನದಲ್ಲಿ ಕಾನೂನು ಸೇವಾ ಪ್ರಾಧಿಕಾರ ಕೈದಿಗಳ ಸೇವೆಯನ್ನೂ ಪಡೆದುಕೊಳ್ಳುತ್ತಿದೆ. ಒಂದಿಷ್ಟು ತಿಳಿವಳಿಕೆ, ಸಾಮಾನ್ಯ ಜ್ಞಾನ ಇರುವ ಶಿಕ್ಷೆಗೊಳಗಾದ ಮತ್ತು ವಿಚಾರಣಾಧೀನ ಕೈದಿಗಳನ್ನು ಆವಶ್ಯಕತೆಗೆ ತಕ್ಕಂತೆ ಒಂದೊಂದು ಜೈಲಲ್ಲಿ 2, 4 ಅಥವಾ 6 ಮಂದಿ ಕೈದಿಗಳನ್ನು ಪ್ಯಾರಾ ಲೀಗಲ್ ಸ್ವಯಂಸೇವಕರನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ. ಇವರು ಇತರ ಕೈದಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದಾರೆ. ಇದಲ್ಲದೇ ಏನಾದರೂ ಆರೋಗ್ಯ ಸಮಸ್ಯೆ ಇದ್ದರೆ ಜೈಲು ಅಧಿಕಾರಿಗಳಿಗೆ ಮಾಹಿತಿ ನೀಡುತ್ತಾರೆ. ಮೇಲ್ಮನವಿ ಸಲ್ಲಿಸಲು ಆವಶ್ಯಕತೆ ಇರುವ ಕೈದಿಗಳ ವಿಚಾರವನ್ನು ಪ್ರಾಧಿಕಾರದ ಪ್ಯಾನಲ್ ವಕೀಲರ ಗಮನಕ್ಕೆ ತರುವ ಕೆಲಸವನ್ನು ಈ ಕೈದಿಗಳು ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.