ಜಾತಿ ಹೆಸರೇಳದೆ ಪ್ರಚಾರ ಮಾಡ್ತಿದ್ವಿ..
Team Udayavani, Feb 16, 2023, 6:10 AM IST
ಹಂಪನಗೌಡ ಬಾದರ್ಲಿ, ಮಾಜಿ ಶಾಸಕ-ಸಿಂಧನೂರು
ಈಗಿನ ಚುನಾವಣೆಗಳಲ್ಲಿ ಹಣ ಎಷ್ಟು ಮುಖ್ಯವೋ ಜಾತಿ ಕೂಡ ಅಷ್ಟೇ ಪ್ರಾಮುಖ್ಯ ಪಡೆದುಕೊಂಡಿದೆ. ಆದರೆ 1989ರಲ್ಲಿ ನಾನು ಮೊದಲ ಬಾರಿ ಶಾಸಕನಾಗಿ ಆಯ್ಕೆಯಾದಾಗ ಯಾವುದೇ ಜಾತಿಯ ಹೆಸರು ಕೂಡ ಉಲ್ಲೇಖೀಸದೆ ಪ್ರಚಾರ ಮಾಡುತ್ತಿದ್ದೆವು. ಆಗ ಚುನಾವಣೆ ನಂಬಿಕೆ, ವಿಶ್ವಾಸದ ಮೇಲೆಯೇ ನಡೆಯುತ್ತಿತ್ತು. ಊರಿನ ಪ್ರಮುಖರನ್ನು ಸೇರಿಸಿ ಗ್ರಾಮದಲ್ಲಿ ಮತಯಾಚಿಸಿದರೆ ಮತ್ತೆ ಆ ಕಡೆ ತಲೆ ಹಾಕುತ್ತಿರಲಿಲ್ಲ. ಆದರೆ ಈಗ ಊರಿನ ಪ್ರತೀ ಓಣಿಗೂ ಹೋಗಬೇಕು. ಎಲ್ಲ ಜಾತಿ ಮತದವರನ್ನು ಗಣನೆಗೆ ಪಡೆಯಬೇಕು. ಅಲ್ಲದೇ ಎಲ್ಲಕ್ಕಿಂತ ಮುಖ್ಯವಾಗಿ ಹಣ ಇಲ್ಲದಿದ್ದರೆ ಚುನಾವಣೆ ಮಾಡಲಾಗದ ಸನ್ನಿವೇಶ ಬಂದಾಗಿದೆ. ನಮ್ಮನ್ನು ಪಕ್ಷದ ವರಿಷ್ಠರು ಅಭ್ಯರ್ಥಿ ಎಂದು ಘೋಷಿಸಿದ ಮೇಲೆ ಕ್ಷೇತ್ರದ ಕಡೆ ಬರುತ್ತಿರಲಿಲ್ಲ. ಕೆಲವೇ ಕೆಲವು ಕ್ಷೇತ್ರಗಳಿಗೆ ಹೋಗಿ ಪ್ರಚಾರ ಮಾಡುತ್ತಿದ್ದರು. ಈಗ ಪ್ರತೀ ಕ್ಷೇತ್ರಕ್ಕೂ ವರಿಷ್ಠರನ್ನು ಕರೆಸಿ ಪ್ರಚಾರ ಮಾಡಬೇಕಾದ ಸಂಪ್ರದಾಯ ಶುರುವಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಆಗ ಟಿಕೆಟ್ ಸಿಗುತ್ತಿತ್ತು. ಈಗಿನ ರಾಜಕೀಯ ಸನ್ನಿವೇಶದಲ್ಲಿ ಯಾರು ಅಭ್ಯರ್ಥಿಯಾಗುತ್ತಾರೋ ಹೇಳದ ಸ್ಥಿತಿ ಇದೆ.
ಚುನಾವಣೆ ಕೆಲವೇ ತಿಂಗಳಿರುವಾಗ ಬಂದು ಅಭ್ಯರ್ಥಿಗಳಾಗುತ್ತಾರೆ. ಈಗಿನ ರಾಜಕೀಯ ಸನ್ನಿವೇಶ ಸಂಪೂರ್ಣ ಭಿನ್ನವಾಗಿದೆ.
ಮತದಾರರು ಸಾಕಷ್ಟು ಪ್ರಬುದ್ಧರಾಗಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಬೇಕಾದರೆ ಶೇ.50ರಷ್ಟು ವೈಯಕ್ತಿಕ ವರ್ಚಸ್ಸು ಕೂಡ ಮುಖ್ಯ. ನಾಲ್ಕು ಬಾರಿ ಶಾಸಕನಾಗಿದ್ದು, ಅಂದಿನಿಂದ ಇಂದಿನವರೆಗೂ ಎಲ್ಲ ರೀತಿಯ ರಾಜಕೀಯ ಅನುಭವಗಳಾಗಿವೆ. ಆದರೆ ಇಂದಿಗೂ ಕೆಲವೆಡೆ ಜನ ನಮ್ಮೊಂದಿಗೆ ಅದೇ ವಿಶ್ವಾಸ-ನಂಬಿಕೆ ಜತೆ ಸಾಗುತ್ತಿದ್ದಾರೆ.
ಯಮನಪ್ಪ ಪವಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.