ಏಷ್ಯಾ ಬ್ಯಾಡ್ಮಿಂಟನ್‌ : ಸೈನಾ ನೆಹ್ವಾಲ್‌, ಪಿ.ವಿ. ಸಿಂಧು ಗೆಲುವು


Team Udayavani, Apr 27, 2022, 11:07 PM IST

ಏಷ್ಯಾ ಬ್ಯಾಡ್ಮಿಂಟನ್‌ : ಸೈನಾ ನೆಹ್ವಾಲ್‌, ಪಿ.ವಿ. ಸಿಂಧು ಗೆಲುವು

ಮನಿಲಾ: ಒಲಿಂಪಿಕ್‌ ಪದಕ ವಿಜೇತೆ ಪಿ.ವಿ. ಸಿಂಧು ಮತ್ತು ಸೈನಾ ನೆಹ್ವಾಲ್‌ ಅವರು ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲಿ ಪ್ರಬಲವಾಗಿ ಹೋರಾಡಿ ಗೆಲುವು ಸಾಧಿಸಿದ್ದಾರೆ. ಆದರೆ ಲಕ್ಷ್ಯ ಸೇನ್‌ ಮತ್ತು ಬಿ. ಸಾಯಿ ಪ್ರಣೀತ್‌ ಆಘಾತಕಾರಿ ಸೋಲನ್ನು ಕಂಡು ಹೊರಬಿದ್ದಿದ್ದಾರೆ.

ಎರಡು ಬಾರಿಯ ಒಲಿಂಪಿಕ್‌ ಪದಕ ವಿಜೇತೆ ಸಿಂಧು ಚೈನೀಸ್‌ ತೈಪೆಯ ಪೈ ಯು ಪೊ ಅವರನ್ನು 18-21, 27-25, 21-9 ಗೇಮ್‌ಗಳಿಂದ ಉರುಳಿಸುವಲ್ಲಿ ಯಶಸ್ವಿಯಾದರು. ಸುದೀರ್ಘ‌ ಅವಧಿಯವರೆಗೆ ಸಾಗಿದ ಈ ಪಂದ್ಯದ ದ್ವಿತೀಯ ಗೇಮ್‌ನಲ್ಲಿ ಸಿಂಧು ಗೆಲ್ಲಲು ತೀವ್ರ ಹೋರಾಟ ನಡೆಸಿದರು. ಈ ಹೋರಾಟ ಒಂದು ಗಂಟೆ, 17 ನಿಮಿಷಗಳವರೆಗೆ ಸಾಗಿತ್ತು. ಸಿಂಧು ಮುಂದಿನ ಪಂದ್ಯದಲ್ಲಿ ಸಿಂಗಾಪುರದ ಯೂಯಿ ಯಾನ್‌ ಜಾಸ್ಲಿನ್‌ ಹೂಯಿ ಅವರನ್ನು ಎದುರಿಸಲಿದ್ದಾರೆ.

ಸೈನಾ ಮುನ್ನಡೆ
ಗಾಯದ ಸಮಸ್ಯೆಯಿಂದ ಚೇತರಿಸಿ ಸ್ಪರ್ಧೆಗೆ ಮರಳಿರುವ ಸೈನಾ ಅವರು ಆರಂಭಿಕ ಪಂದ್ಯದಲ್ಲಿ ದಕ್ಷಿಣ ಕೊರಿಯದ ಸಿಮ್‌ ಯೂಜಿನ್‌ ಅವರನ್ನು 21-15, 17-21, 21-13 ಗೇಮ್‌ಗಳಿಂದ ಮಣಿಸಿದರು. ಅವರು ಮುಂದಿನ ಪಂದ್ಯದಲ್ಲಿ ಚೀನದ ಝೀ ಯಿ ವಾಂಗ್‌ ಅವರ ಸವಾಲನ್ನು ಎದುರಿಸಲಿದ್ದಾರೆ.

ಸೇನ್‌ಗೆ ಸೋಲು
ವಿಶ್ವ ಚಾಂಪಿಯನ್‌ಶಿಪ್‌ನ ಬೆಳ್ಳಿ ವಿಜೇತ ಲಕ್ಷ್ಯ ಸೇನ್‌ ಅವರು ಚೀನದ ಶ್ರೇಯಾಂಕರಹಿತ ಆಟಗಾರ ಲಿ ಶಿ ಫೆಂಗ್‌ ಅವರೆದುರು ಸೋತು ಆಘಾತಕ್ಕೆ ಒಳಗಾದರು. 5ನೇ ಶ್ರೇಯಾಂಕದ ಸೇನ್‌ 21-12, 10-21, 19-21 ಗೇಮ್‌ಗಳಿಂದ ಶರಣಾದರು. ಈ ಹೋರಾಟ 56 ನಿಮಿಷಗಳವರೆಗೆ ಸಾಗಿತ್ತು. ವಿಶ್ವದ 19ನೇ ರ್‍ಯಾಂಕಿನ ಪ್ರಣೀತ್‌ ಇಂಡೋನೇಶ್ಯದ ಜೊನಾಥನ್‌ ಕ್ರಿಸ್ಟಿ ಕೈಯಲ್ಲಿ 17-21, 13-21 ಗೇಮ್‌ಗಳಿಂದ ಸೋತು ಹೊರಬಿದ್ದರು.

ವನಿತೆಯರ ಸಿಂಗಲ್ಸ್‌ನಲ್ಲಿ ಆಕರ್ಷಿ ಕಶ್ಯಪ್‌ ಜಪಾನಿಯ ಅಗ್ರ ಶ್ರೇಯಾಂಕದ ಆಕಾನೆ ಯಮಾಗುಚಿ ಕೈಯಲ್ಲಿ 15-21, 9-21 ಗೇಮ್‌ಗಳಿಂದ ಸೋತಿದ್ದಾರೆ.

ಶ್ರೀಕಾಂತ್‌ಗೆ ಗೆಲುವು
ಕೆ. ಶ್ರೀಕಾಂತ್‌ ಕಠಿನ ಹೋರಾಟದಲ್ಲಿ ಮಲೇಶ್ಯದ ಟಿಝಿ ಯಾಂಗ್‌ ಎನ್‌ಜಿ ಅವರನ್ನು 22-20, 21-15 ಗೇಮ್‌ಗಳಿಂದ ಉರುಳಿಸಿ ಮುನ್ನಡೆದರು. ಮುಂದಿನ ಹೋರಾಟದಲ್ಲಿ ಅವರು ಚೀನದ ಅರ್ಹತಾ ಆಟಗಾರ ವೆಂಗ್‌ ಹಾಂಗ್‌ ಯಾಂಗ್‌ ಅವರನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.