ಗ್ರಾಮದೇವತೆ ಜಾತ್ರೆಗೆ ಪೂರ್ಣಕುಂಭ ಮೆರಗು : ಗ್ರಾಮ ದೇವಿಯರ ಭವ್ಯ ಮೆರವಣಿಗೆ

Team Udayavani, Dec 21, 2021, 2:49 PM IST

ಗ್ರಾಮದೇವತೆ ಜಾತ್ರೆಗೆ ಪೂರ್ಣಕುಂಭ ಮೆರಗು : ಗ್ರಾಮ ದೇವಿಯರ ಭವ್ಯ ಮೆರವಣಿಗೆ

ಬಾಗಲಕೋಟೆ: ಸುಮಾರು 30 ವರ್ಷಗಳ ಬಳಿಕ ನಗರದಲ್ಲಿ ನಡೆಯುತ್ತಿರುವ ಗ್ರಾಮ ದೇವತೆಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ಆರಂಭಗೊಂಡಿದ್ದು, ಇಳಕಲ್ಲ ಸೀರೆಯುಟ್ಟ
ಮಹಿಳೆಯರು, ಡೊಳ್ಳು ಕುಣಿತ, ಹಲವು ವಾದ್ಯಗಳ ಸಂಗೀತ ಗಮನ ಸೆಳೆಯಿತು. ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವಕ್ಕೆ ಈ ಬಾರಿಯ ಅದ್ಧೂರಿ ಚಾಲನೆ ದೊರೆತಿದೆ. ಬೆಳಿಗ್ಗೆ ಕಿಲ್ಲೆಯ ಶ್ರೀ ದ್ಯಾಮವ್ವ -ದುರ್ಗವ್ವ ದೇವಿ ದೇವಸ್ಥಾನದಿಂದ ಗ್ರಾಮ ದೇವಿಯರ ಭವ್ಯ ಪೂರ್ಣಕುಂಭದ ಮೆರವಣಿಗೆಗೆ ಶಾಸಕ ಡಾ| ವೀರಣ್ಣ ಚರಂತಿಮಠ, ವಿಧಾನ ಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ, ಜಾತ್ರಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಬಸವಪ್ರಭು ಸರನಾಡಗೌಡ ಮತ್ತಿತರರು ಚಾಲನೆ ನೀಡುತ್ತಿದ್ದಂತೆ ಜೈಕಾರದ ಘೋಷಣೆಗಳು ಮುಗಿಲು ಮುಟ್ಟಿದ್ದವು. ಹೂವಿನಿಂದ
ಅಲಂಕೃತಗೊಂಡ ಟ್ರಾಕ್ಟರ್‌ನಲ್ಲಿ ದೇವಿಯು ವಿರಾಜಮಾನಗಳಾಗಿ ಕಂಗೊಳಿಸಿದಳು. ನಾಲ್ಕು ಗಂಟೆಗಳ ಕಾಲ ನಡೆದ ಮೆರವಣಿಗೆಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರು.

ಸಾಂಪ್ರದಾಯಿಕ ಇಳಕಲ್ಲ ಸೀರೆ ತೊಟ್ಟಿದ್ದ ಸುಮಂಗಲಿಯರು ಕುಂಭ ಹೊತ್ತು ಶ್ರೀ ಗ್ರಾಮದೇವಿಯರ ಭವ್ಯ ಮೆರವಣಿಗೆ ಸಾಗಿದಾಗ ಜೈ ಕಾರಗಳು ಮೊಳಗಿದವು. ಮೆರವಣಿಗೆಯುದ್ದಕ್ಕೂ ಆಂಜನೇಯ, ಶ್ರೀರಾಮ, ಸೀತಾಮಾತೆ ವೇಷಧಾರಿಗಳ ಗೊಂಬೆ ಕಲಾವಿದರು ಹೆಜ್ಜೆ ಹಾಕಿದರು. ಮಹಿಳಾ ಕಲಾವಿದರ ಡೊಳ್ಳು ಕುಣಿತ, ಜಾಂಜ್‌ ಪಾತಾಕ, ಕರಡಿ ಮಜಲು, ವೀರಗಾಸೆ,
ಬ್ಯಾಂಡ್‌ ನಾದ ಜಾತ್ರಾ ಮಹೋತ್ಸವ ಸಂಭ್ರಮ ಇಮ್ಮಡಿಗೊಳಿಸಿತು. ಮೆರವಣಿಗೆಯು ನಗರದ ಪಂಕಾ ಮಸೀದಿ, ಹಳಪೇಟ, ಶಾರದಾ ಪ್ರಿಟಿಂಗ್‌ ಪ್ರಸ್‌, ಟೆಂಗಿನಮಠ, ಬಿವಿವಿ ಸಂಘದ ಮುಖ್ಯದ್ವಾರ, ಕಾಲೇಜು ರಸ್ತೆ ಮೂಲಕದ ಬಸವೇಶ್ವರ ವೃತ್ತ ತಲುಪುತ್ತಿದ್ದಂತೆ ಜಯ-ಘೋಷಣೆಗಳು ಮುಗಿಲು ಮುಟ್ಟಿದವು.

ನಂತರ ಎಂ.ಜಿ ರಸ್ತೆ, ವಲ್ಲಭಾಯಿ ಚೌಕ, ದುರ್ಗಾದೇವಿ ದೇವಸ್ಥಾನ, ಪಾದಗಟ್ಟಿ ಮೂಲಕ ಮರಳಿ ದೇವಸ್ಥಾನಕ್ಕೆ ತಲುಪಿತು.

ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಬಂಡೇರಾವ್‌ ಸರದೇಸಾಯಿ, ಉಪಾಧ್ಯಕ್ಷ ಅಶೋಕ ಲಿಂಬಾವಳಿ, ಪ್ರಮುಖರಾದ ಸಂಗಯ್ಯ ಸರಗಣಾಚಾರಿ, ಸುರೇಶ ಕುದರಿಕಾರ, ಸದಾನಂದ ನಾರಾ, ಕಾಂತು ಪತ್ತಾರ, ಶ್ರೀನಾಥ ಸಜ್ಜನ, ಸಂಗಪ್ಪ ಸಜ್ಜನ, ರಮೇಶ ಕೋಟಿ, ನಾಗರಾಜ ಹದ್ಲಿ, ಗುಂಡುರಾವ್‌ ಶಿಂಧೆ, ಶ್ರೀಶೈಲ ಗಿರಗಾಂವಿ, ಪರಶುರಾಮ ದಾವಣಗೇರಿ, ಮಲ್ಲಿಕಾರ್ಜುನ ಶಹಾಪುರ, ತಾನಾಜಿ ಜಮಖಂಡಿ, ಮಂಜುನಾಥ ಬಡಿಗೇರ, ಅಶೋಕ ಪವಾರ, ಸುರೇಶ ಮಜ್ಜಗಿ, ಸುಧಾ ದೇಸಾಯಿ, ಶಶಿಕಲಾ ಮಜ್ಜಗಿ, ಪಾರ್ವತಿ ಬಡಿಗೇರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.