ಡಿಕೆಶಿಗೆ ಜಾಮೀನು: ಹೆಬ್ಬಾಳ್ಕರ್ ಮನೆ ಎದುರು ಸಂಭ್ರಮಾಚರಣೆ
Team Udayavani, Oct 23, 2019, 5:25 PM IST
ಬೆಳಗಾವಿ: ಅಕ್ರಮ ಹಣಗಳಿಕೆ ಹಾಗೂ ಪತ್ತೆ ಪ್ರಕರಣದಲ್ಲಿ ಇಡಿ(ಜಾರಿ ನಿರ್ದೇಶನಾಲಯ) ಬಂಧನದಲ್ಲಿದ್ದು, 48 ದಿನಗಳ ಕಾಲ ಜೈಲುವಾಸ ಅನುಭವಿಸಿದ ಕನಕಪುರ ಬಂಡೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗೆ ಬುಧವಾರ ಜಾಮೀನು ಮಂಜೂರಾಗುತ್ತಿದ್ದಂತೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸದ ಎದುರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.
ಶಿವಕುಮಾರ್ ಗೆ ಜಾಮೀನು ನೀಡಿ ದೆಹಲಿ ಹೈಕೋರ್ಟ್ ಆದೇಶಿಸುತ್ತಿದ್ದಂತೆ ಡಿಕೆಶಿ ಹಾಗೂ ಹೆಬ್ಬಾಳ್ಕರ್ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೆಚ್ಚಿನ ನಾಯಕನ ಆಗಮನಕ್ಕಾಗಿ ಕಾತರದಿಂದ ಕಾಯುತ್ತಿರುವ ಇವರ ಬೆಂಬಲಿಗರಲ್ಲಿ ಸಂತಸ ಮನೆ ಮಾಡಿತ್ತು.
ಇನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮನೆಯಲ್ಲೂ ಸಂಭ್ರಮ ಜೋರಾಗಿಯೇ ಇತ್ತು. ಬೆಳಗಾವಿಯ ಕುವೆಂಪು ನಗರದಲ್ಲಿರುವ ಹೆಬ್ಬಾಳ್ಕರ್ ಮನೆ ಮುಂದೆ ಪಟಾಕಿ ಸಿಡಿಸಿದ ಬೆಂಬಲಿಗರು ಡಿಕೆ ಶಿವಕುಮಾರ್ ಗೆ ಜಯವಾಗಲಿ ಎಂದು ಘೋಷಣೆ ಕೂಗಿದರು. ಜತೆಗೆ ನಗರದ ಚನ್ನಮ್ಮ ವೃತ್ತದಲ್ಲಿಯೂ ಹೆಬ್ಬಾಳ್ಕರ್ ಬೆಂಬಲಿಗರು ಸಿಹಿ ಹಂಚಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.