ಎಲ್ಲ ಒಕ್ಕೂಟಗಳಲ್ಲೂ ಹಾಲು ಖರೀದಿ : ಬಾಲಚಂದ್ರ ಜಾರಕಿಹೊಳಿ ಸೂಚನೆ
Team Udayavani, Apr 2, 2020, 7:49 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ರಾಜ್ಯದ ಹಾಲು ಉತ್ಪಾದಕರಿಂದ ಎಲ್ಲ 14 ಒಕ್ಕೂಟಗಳ ವ್ಯಾಪ್ತಿಯಲ್ಲಿ ದಿನಕ್ಕೆ ಎರಡು ಬಾರಿ ತಪ್ಪದೆ ಗುಣಮಟ್ಟದ ಹಾಲು ಖರೀದಿಸಬೇಕು ಎಂದು ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚಿಸಿದ್ದಾರೆ.
ಕೋವಿಡ್-19 ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಕೆಎಂಎಫ್ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ನಡೆದ ಚರ್ಚೆಯಲ್ಲಿ ಈ ಸೂಚನೆ ನೀಡಿ, ಕೋವಿಡ್-19 ವೈರಸ್ ಹಾವಳಿಯಿಂದ ಉಂಟಾದ ಕ್ಲಿಷ್ಟಕರ ಸಂದರ್ಭದಲ್ಲಿ ಪಶು ಆಹಾರಕ್ಕೆ ತೊಂದರೆ ಆಗಬಾರದು. ಈ ಹಿನ್ನೆಲೆಯಲ್ಲಿ ಎಪ್ರಿಲ್ ಅಂತ್ಯದವರೆಗೂ ಪ್ರತಿ ಟನ್ ಪಶು ಆಹಾರಕ್ಕೆ 500 ರೂ. ರಿಯಾಯಿತಿ ನೀಡಬೇಕು ಎಂದರು.
ಲಾಕ್‌ಡೌನ್ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಸಿಬಂದಿಗೆ ನಿತ್ಯ ಒಂದು ದಿನದ ಹೆಚ್ಚುವರಿ ವೇತನ ನೀಡಲು ಅಥವಾ ಪರಿಹಾರ ರಜೆಗೂ ಅವಕಾಶ, ಗುತ್ತಿಗೆ ನೌಕರರು ಪ್ರತಿ ದಿನ 500 ರೂ. ಹೆಚ್ಚುವರಿಯಾಗಿ ಹಾಗೂ ಹಾಲು ಮತ್ತದರ ಉತ್ಪನ್ನಗಳ ಸಾಗಣೆ ಮಾಡುವ ವಾಹನ ಚಾಲನಾ ಸಿಬಂದಿಗೆ ಪ್ರೋತ್ಸಾಹಧನ ರೂಪದಲ್ಲಿ ನೀಡುವುದು, ಈ ಪ್ರೋತ್ಸಾಹಧನವನ್ನು ಸಿದ್ಧ ಪಶು ಆಹಾರ ಮತ್ತು ಕಚ್ಚಾ ಆಹಾರ ಪೂರೈಸುವ ವಾಹನ ಚಾಲಕರು, ಹಾಲು ಮತ್ತದರ ಉತ್ಪನ್ನಗಳನ್ನು ಸಾಗಿಸುವ ಚಾಲನಾ ಸಿಬಂದಿಗೂ ನೀಡಲು ತೀರ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.