ಬಾಳೆಕೋಡಿ ಶ್ರೀ ಶಶಿಕಾಂತಮಣಿ ಸ್ವಾಮೀಜಿ ಇನ್ನಿಲ್ಲ

Team Udayavani, May 19, 2020, 10:38 AM IST

ಬಾಳೆಕೋಡಿ ಶ್ರೀ ಶಶಿಕಾಂತಮಣಿ ಸ್ವಾಮೀಜಿ ಇನ್ನಿಲ್ಲ

ವಿಟ್ಲ : ಕನ್ಯಾನ ಗ್ರಾಮದ ಬಾಳೆಕೋಡಿ ಶ್ರೀ ಕಾಶೀಕಾಳಭೈರವೇಶ್ವರ ಶಿಲಾಂಜನ ಕ್ಷೇತ್ರದ ಡಾ. ಶ್ರೀ ಶಶಿಕಾಂತಮಣಿ ಸ್ವಾಮೀಜಿ (44) ಅವರು ಮೇ 18ರ ತಡರಾತ್ರಿ ಅನಾರೋಗ್ಯದಿಂದ ದೈವೈಕ್ಯರಾಗಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕೊಳ್ಳೇಗಾಲದ ಮಣಿಯನ್ ಕುಟ್ಟಿ ಸ್ವಾಮಿನಾಥನ್ ಅವರಿಂದ 49 ಭೈರವ ತಂತ್ರ ವಿದ್ಯೆಗಳಲ್ಲಿ ಪರಿಣಿತರಾಗಿರುವ ಶ್ರೀ ಸದ್ಗುರು ಶಶಿಕಾಂತಮಣಿ ಸ್ವಾಮೀಜಿಗಳು ಸದಾಶಿವಧ್ಯಾನದಿಂದ ಶ್ರೀಕ್ಷೇತ್ರವನ್ನು ಆರ್ತರಾದವರ ಸಾಂತ್ವನ ಕೇಂದ್ರವಾಗಿ ರೂಪಿಸಿ ಸುಮಾರು 18 ವರ್ಷಗಳಿಂದ ಸೇವೆಯನ್ನು ಸಲ್ಲಿಸಿ ಅತ್ಯಂತ ಕಿರಿಯ ದಲಿತ ಸ್ವಾಮೀಜಿಯೆನಿಸಿಕೊಂಡಿದ್ದರು. ದೇವಸ್ಥಾನ ನಿರ್ಮಾಣ ಮಾಡಲು ಪ್ರಯತ್ನಿಸಿದ್ದ ಅವರಿಗೆ ಪೂರ್ತಿಗೊಳಿಸುವ ಸಂಕಲ್ಪ ಈಡೇರಲಿಲ್ಲ. ಶ್ರೀ ಕಾಳಭೈರವೇಶ್ವರ ಟ್ರಸ್ಟ್ ರಚಿಸಿ, ಧನಸಹಾಯ, ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿದ್ದರು. ಕ್ಷೇತ್ರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಿ, ಅಂಬೇಡ್ಕರ್ ಜಯಂತಿಯನ್ನು ವಿಶಿಷ್ಟವಾಗಿ ಆಚರಿಸುತ್ತಿದ್ದರು.

ಧಾರ್ಮಿಕ, ಸಾಹಿತ್ಯಿಕ ಕ್ಷೇತ್ರದಲ್ಲಿ ಅವರು ವಿಶೇಷ ಸಾಧನೆ ಮಾಡಿದ್ದಾರೆ. ತುಳು ಕನ್ನಡ ಭಾಷೆಯಲ್ಲಿ ಕವಿತೆ ರಚಿಸಿದ್ದ ಅವರು ಅನೇಕ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು.

2014ರ ಪ್ರತಿಷ್ಠಿತ ನೆಲ್ಸನ್ ಮಂಡೇಲಾ ಪ್ರಶಸ್ತಿ, ಇಂಡೋನೇಪಾಲ್ ಸದ್ಭಾವನಾ ಪ್ರಶಸ್ತಿ ವನ್ನು ನೇಪಾಳದ ಪ್ರಧಾನಿ ಕಿಲ್‌ರಾಜ್ ರೆಗ್ಮಿಯವರಿಂದ ಪಡೆದುಕೊಂಡಿದ್ದಾರೆ. ಎಕಾನಾಮಿಕ್ ಗ್ರೋಥ್ ಸೊಸೈಟಿ ಆಫ್ ಇಂಡಿಯಾ ಸಂಸ್ಥೆಯು 2014-15ನೇ ಸಾಲಿನ ಪ್ರೈಡ್ ಆಫ್ ಎಷಿಯಾ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಅಜೆಕ್ಕಾರ್ ಬೆಳದಿಂಗಳ ಸಮ್ಮೇಳನದಲ್ಲಿ ಕರ್ನಾಟಕ ಧರ್ಮ ರತ್ನ ಪ್ರಶಸ್ತಿಯನ್ನು ಶ್ರೀಗಳಿಗೆ ಪ್ರದಾನ ಮಾಡಲಾಗಿದೆ. 2018ರ ಅಗಸ್ಟ್ 10ರಂದು ದೆಹಲಿಯಲ್ಲಿ ಜರ್ಮನಿಯ ಇಂಟರ್ ನ್ಯಾಷನಲ್ ಪೀಸ್ ಯುನಿವರ್ಸಿಟಿ ಇಂಡಿವಿಜಲ್ ಕಾನ್ ಸ್ಟ್ರಿಬ್ಯುಶನ್ ಫಾರ್ ಇಕನಾಮಿಕ್ ಆಂಡ್ ಸೋಷಿಯಲ್ ಡೆವಲಪ್ ಮೆಂಟ್ ಎಂಬ ನ್ಯಾಷನಲ್ ಸೆಮಿನಾರ್ ಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.

ಅವರು ಕ್ಷೇತ್ರದಲ್ಲಿ ಯಕ್ಷಗಾನ ತಾಳಮದ್ದಳೆ ಸರಣಿಯನ್ನು ಆಯೋಜಿಸಿದ್ದು, ಹವ್ಯಾಸಿ ಭಾಗವತರಾಗಿದ್ದರು.

ಟಾಪ್ ನ್ಯೂಸ್

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.