Plastic: ಆರೋಗ್ಯ ಇಲಾಖೆ ಕಾರ್ಯಕ್ರಮಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಾಟಲ್ ನಿಷೇಧ
Team Udayavani, Oct 28, 2023, 9:52 PM IST
ಬೆಂಗಳೂರು: ರಾಜ್ಯಾದ್ಯಂತ ಆರೋಗ್ಯ ಇಲಾಖೆಯ ಎಲ್ಲ ಆರೋಗ್ಯ ಸಂಸ್ಥೆಗಳು ಹಾಗೂ ಸಭೆ ಸಮಾರಂಭಗಳಲ್ಲಿ “ಏಕಬಳಕೆಯ ಪ್ಲಾಸ್ಟಿಕ್ ಬಾಟಲ್’ (ಸಿಂಗಲ್ ಯೂಸ್) ಬಳಕೆಯನ್ನು ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ಸರಕಾರಿ ಹಾಗೂ ಸರಕಾರಿ ಸ್ವಾಮ್ಯದ ಮಂಡಳಿ, ನಿಗಮ ವಿಶ್ವವಿದ್ಯಾನಿಲಯಗಳು, ಸರಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ- ಸಮಾರಂಭಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲಿನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ. ಸಾಮೂಹಿಕ ಕುಡಿಯುವ ನೀರು ವಿತರಣೆ ವ್ಯವಸ್ಥೆ ಏರ್ಪಡಿಸಲು ಸೆ.19ರಂದು ಸೂಚಿಸಲಾಗಿತ್ತು. ಆದರೆ ಆದೇಶವನ್ನು ಪಾಲಿಸದಿರುವುದು ಸರಕಾರದ ಗಮನಕ್ಕೆ ಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.