ಬೆಂಗಳೂರು – ಬೆಳಗಾವಿ ರೈಲಿಗೆ ಸುರೇಶ ಅಂಗಡಿ ಹೆಸರಿಡಿ: ನಿರಾಣಿ
Team Udayavani, Sep 25, 2020, 5:27 PM IST
ಬೀಳಗಿ: ರೈಲ್ವೆ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಒಂದೇ ವಾರದಲ್ಲಿ ಸುರೇಶ ಅಂಗಡಿ ಅವರು ಬೆಂಗಳೂರು-ಬೆಳಗಾವಿ ಮಧ್ಯೆ ಹೊಸ ರೈಲು ಆರಂಭಿಸಿದ್ದಾರೆ. ಈ ಹೊಸ ರೈಲು ಆರಂಭವಾದ ಮೊದಲ ದಿನ ನಾನು ಮತ್ತು ಅಂಗಡಿ ಅವರು ಕೂಡಿ ಪ್ರವಾಸ ಮಾಡಿದ್ದೆವು. ಕಾರಣ ಈ ಹೊಸ ರೈಲಿಗೆ “ಸುರೇಶ ಅಂಗಡಿ ಎಕ್ಸಪ್ರಸ್’ ನಾಮಕರಣ ಮಾಡಬೇಕೆಂದು ಸದನದಲ್ಲಿ ಒತ್ತಾಯಿಸಿರುವುದಾಗಿ ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುರುವಾರ ಸದನದಲ್ಲಿ ನಡೆದ ಸಂತಾಪ ಸೂಚಕ ಸಭೆಯಲ್ಲಿ ಈ ಕುರಿತು ಮಾತನಾಡಿದ್ದೇನೆ. ಹೊಸದಾಗಿ ಆರಂಭವಾದ ರೈಲಿನಲ್ಲಿ ಸಚಿವ ಅಂಗಡಿ ಅವರೊಂದಿಗೆ ಪ್ರವಾಸ ಮಾಡಿದ ಮತ್ತು ಚರ್ಚಿಸಿದ ವಿಷಯಗಳನ್ನು ಸ್ಮರಿಸಿಕೊಂಡಾಗ ಬದಿಗೆ ಕುಳಿತ ಗೆಳೆಯನೊಬ್ಬ ಚಟ್ಟನೆ ಎದ್ದು ಹೋದಂತೆ ನೋವಾಗುತ್ತಿದೆ. ಬೆಂಗಳೂರು- ಬೆಳಗಾವಿ ಹೊಸ ರೈಲು ಬೆಂಗಳೂರಿನಿಂದ ರಾತ್ರಿ 9 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 6ಕ್ಕೆ ಬೆಳಗಾವಿ ತಲುಪುತ್ತದೆ. ಬೆಳಗಾವಿಯಿಂದ ಬೆಳಗ್ಗೆ 6 ಗಂಟೆಗೆ ಬಿಟ್ಟ ರೈಲು ಸಂಜೆ 8ಕ್ಕೆ ಬೆಂಗಳೂರು ತಲುಪುತ್ತದೆ. ಈ ಹೊಸ ರೈಲಿಗೆ “ಸುರೇಶ ಅಂಗಡಿ ಎಕ್ಸಪ್ರಸ್’ ರೈಲು ಎಂದು ನಾಮಕರಣ ಮಾಡಲು ಸೂಚನೆ ಮಾಡಿರುವುದಕ್ಕೆ ಸದನದಲ್ಲಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬೆಳಗಾವಿಯ ಕೆಲ ಸಂಘಟನೆಗಳು ಕೂಡ ಈ ಪ್ರಸ್ತಾಪವನ್ನು ಹಾರ್ದಿಕವಾಗಿ ಸ್ವಾಗತಿಸಿವೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.