ರಾಜಧಾನಿಯಲ್ಲಿ ಲಾಕ್ ಡೌನ್ ನಿರ್ಧಾರ ಇದು ನಿರ್ಣಾಯಕ ಸಮಯ
Team Udayavani, Jul 13, 2020, 11:44 AM IST
ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಕೆಲವು ದಿನಗಳಿಂದ ಭಾರೀ ಏರಿಕೆ ಕಾಣಿಸಿಕೊಳ್ಳಲಾರಂಭಿಸಿದೆ. ರವಿವಾರವೊಂದೇ ದಿನ ದೇಶದಲ್ಲಿ 28 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದ್ದರೆ, 24 ಗಂಟೆಗಳ ಅವಧಿಯಲ್ಲಿ 551 ಜನ ಮೃತಪಟ್ಟಿದ್ದಾರೆ. ನಿರಂತರ ಮೂರು ದಿನ ನಿತ್ಯ ಸೋಂಕಿತರ ಪ್ರಮಾಣ 26 ಸಾವಿರಕ್ಕೂ ಅಧಿಕ ದಾಖಲಾಗಿದೆ.
ರಾಜ್ಯದಲ್ಲಿ, ಅದರಲ್ಲೂ ಮುಖ್ಯವಾಗಿ ರಾಜಧಾನಿ ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 12 ಸಾವಿರ ದಾಟಿದೆ. ಬೆಂಗಳೂರಲ್ಲಿ ನಿತ್ಯ ಸೋಂಕಿತರ ಸಂಖ್ಯೆಯಲ್ಲಿ ಆಗುತ್ತಿರುವ ಈ ಹೆಚ್ಚಳವು ರಾಜ್ಯವನ್ನು ದೇಶದ ಹಾಟ್ ಸ್ಪಾಟ್ ಗಳಲ್ಲಿ ಮೂರನೇ ಸ್ಥಾನಕ್ಕೆ ಒಯ್ದಿದೆ (ಸಕ್ರಿಯ ಪ್ರಕರಣಗಳ ಆಧಾರದಲ್ಲಿ). ಈ ಹಿಂದೆ ಮಹಾರಾಷ್ಟ್ರ, ತಮಿಳುನಾಡು ಅನಂತರ ದಿಲ್ಲಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಅಧಿಕವಿತ್ತು. ಆದರೆ, ಕೆಲವು ದಿನಗಳಿಂದ ಅಲ್ಲಿ ಚೇತರಿಕೆ ಪ್ರಮಾಣವು ಗಮನಾರ್ಹವಾಗಿ ಹೆಚ್ಚಾಗಿದ್ದು, ಅತಿವೇಗವಾಗಿ ಗುಣಮುಖವಾಗುತ್ತಿರುವ ಹಾಟ್ ಸ್ಪಾಟ್ ರಾಜ್ಯಗಳಲ್ಲಿ ದಿಲ್ಲಿ ಮುಂಚೂಣಿಯಲ್ಲಿದೆ.
ರವಿವಾರ ಅಪರಾಹ್ನದ ವೇಳೆಗೆ ದಿಲ್ಲಿಯಲ್ಲಿ 19,895 ಸಕ್ರಿಯ ಪ್ರಕರಣಗಳಿದ್ದರೆ, ಕರ್ನಾಟಕದಲ್ಲಿ 20,879 ಪ್ರಕರಣಗಳು ಪತ್ತೆಯಾಗಿವೆ! ರಾಜ್ಯದ ಒಟ್ಟು ಪ್ರಕರಣಗಳಲ್ಲಿ ಬೆಂಗಳೂರು ಒಂದರಲ್ಲೇ 61 ಪ್ರತಿಶತ ಪ್ರಕರಣಗಳು ಇದುವರೆಗೆ ಪತ್ತೆಯಾಗಿವೆ. ಅನ್ ಲಾಕ್ ಪ್ರಕ್ರಿಯೆ ಆರಂಭವಾಗುವುದಕ್ಕಿಂತ ಮುಂಚೆ ಬೆಂಗಳೂರು ಕೋವಿಡ್ ನಿಯಂತ್ರಣದಲ್ಲಿ ದೇಶಕ್ಕೆ ಮಾದರಿಯಾಗಿತ್ತು. ಆದರೆ ಸರಕಾರವು ಆರ್ಥಿಕತೆಗೆ ಮರು ವೇಗ ಕೊಡಲು ನಿರ್ಬಂಧಗಳನ್ನು ತೆಗೆದುಹಾಕಿದ ನಂತರದಿಂದ ಪರಿಸ್ಥಿತಿಯು ಹದಗೆಡಲಾರಂಭಿಸಿತು.
ರಾಜಧಾನಿಯಲ್ಲಿ ಕೋವಿಡ್-19 ಎಷ್ಟು ವೇಗವಾಗಿ ಹರಡುತ್ತಿದೆಯೆಂದರೆ ಅದು ಮುಖ್ಯಮಂತ್ರಿಗಳ ಗೃಹ ಕಚೇರಿಯನ್ನೂ ತಲುಪಿದೆ. ಕೃಷ್ಣಾದ ಕೆಲವು ಸಿಬಂದಿ ಮತ್ತು ಮುಖ್ಯಮಂತ್ರಿಗಳ ಹೆಚ್ಚುವರಿ ಚಾಲಕರು ಕೊರೊನಾ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ದ್ವಿತೀಯ ಸಂಪರ್ಕಿತರು ಎಂಬ ಕಾರಣಕ್ಕೆ ಮುಖ್ಯಮಂತ್ರಿ ಬಿಎಸ್ ವೈ ತಮ್ಮ ಮನೆಯಲ್ಲೇ ಕ್ವಾರಂಟೈನ್ ಒಳಗಾಗಿದ್ದಾರೆ. ಹಠಾತ್ತನೆ ಕೋವಿಡ್ ಪ್ರಕರಣಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಆರೋಗ್ಯ ಮತ್ತು ಆಡಳಿತ ವಲಯದ ಮೇಲೆ ಒತ್ತಡ ಬಿದ್ದಿದೆ. ಹೀಗಾಗಿ ರಾಜ್ಯ ಸರಕಾರವು ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಜುಲೈ 14ರ ರಾತ್ರಿ 8:00ರಿಂದ 7 ದಿನಗಳವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಫೆಗಳಲ್ಲಿ ಲಾಕ್ ಡೌನ್ ಘೋಷಿಸಿದೆ.
ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಇದು ನಿಸ್ಸಂಶಯವಾಗಿಯೂ ನಿರ್ಣಾಯಕ ಸಮಯ. ಈಗ ಜಾರಿಯಾಗಲಿರುವ ಲಾಕ್ ಡೌನ್ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ಬರುವುದನ್ನು ಹಾಗೂ ಜನರಿಗೆ ಯಾವುದೇ ರೀತಿಯಲ್ಲೂ ಅಗತ್ಯ ವಸ್ತುಗಳ ಕೊರತೆ ಎದುರಾಗದಂತೆ ಸರಕಾರ ನೋಡಿಕೊಳ್ಳಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಜನರೂ ಸಹ, ಸರಕಾರದ ಈ ನಿರ್ಣಯವನ್ನು ಗಂಭೀರವಾಗಿ ಪರಿಗಣಿಸಿ ತಮ್ಮ ಸುರಕ್ಷತೆಯಲ್ಲಿ ತಾವಿರಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.