![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 26, 2023, 11:50 PM IST
ಸೊರಬ: ಮಾಜಿ ಮುಖ್ಯಮಂತ್ರಿ ದಿ| ಬಂಗಾರಪ್ಪನವರ ಆದರ್ಶವಾದ ಚಿಂತನೆಗಳು ಎಂದಿಗೂ ಜೀವಂತವಾಗಿರುತ್ತವೆ. ಅವರ ಒಡನಾಟ, ಮಾರ್ಗದರ್ಶನ ನಮಗೆ ಆದರ್ಶಪ್ರಾಯ. ಅವರು ಹಾಕಿಕೊಟ್ಟ ಮಾರ್ಗದಲ್ಲೇ ನಾವು ನಡೆಯುತ್ತಿದ್ದೇವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಸೊರಬದ “ಬಂಗಾರಧಾಮ’ದಲ್ಲಿ ಮಂಗಳವಾರ ಮಾಜಿ ಮುಖ್ಯಮಂತ್ರಿ ದಿ| ಎಸ್.ಬಂಗಾರಪ್ಪ ಅವರ 12ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ವಿಚಾರ ವೇದಿಕೆ, ಬಂಗಾರಪ್ಪ ಅಭಿಮಾನಿ ಬಳಗ ಹಾಗೂ ಬಂಗಾರಪ್ಪ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ “ಬಂಗಾರಪ್ಪ ಸವಿನೆನಪು” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಂದೆ-ತಾಯಿಯವರ ಬಗ್ಗೆ ಅಪಾರ ಕಾಳಜಿ ಹೊಂದಿ ಸ್ಮಾರಕ ನಿರ್ಮಿಸಿರುವ ಸಚಿವ ಮಧು ಬಂಗಾರಪ್ಪನವರ ಕಾರ್ಯ ಅತ್ಯಂತ ಶ್ಲಾಘನೀಯ ಎಂದರು.
ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ಬಂಗಾರಪ್ಪನವರು ಸಮಾಜವಾದಿ ಹೋರಾಟಗಳಲ್ಲಿ ರೈತರಿಗೆ ನ್ಯಾಯ ದೊರಕಿಸಿಕೊಡಲು ದುಡಿದು ರಾಜಕೀಯವಾಗಿ ಎತ್ತರಕ್ಕೆ ಬೆಳೆದವರು. ಈ ಬಂಗಾರಧಾಮ ಅಧ್ಯಯನ ಪೀಠವಾಗಬೇಕು ಎಂದರು.
ಮಾಜಿ ಸಚಿವ ಅರವಿಂದ ಲಿಂಬಾವಳಿ ಮಾತನಾಡಿ, ಭಾವನೆಗಳಿಗೆ ಸ್ಪಂದಿಸುವ ಗುಣ ಅವರಲ್ಲಿತ್ತು. ಕೆಳವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಗುಣ ಹೊಂದಿದ್ದರು ಎಂದರು.
ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಬಂಗಾರಪ್ಪನವರ ಚಿಂತನೆ-ವಿಚಾರಗಳು ನಾಡಿನ ಜನತೆಗೆ ತಲುಪಬೇಕು. ಈ ಬಂಗಾರಧಾಮವು ಸ್ಫೂ ರ್ತಿಯ ನೆಲೆಯಾಗಬೇಕು. ಬಂಗಾರಪ್ಪನವರ ಹೆಸರನ್ನು ಉಳಿಸಿ-ಬೆಳೆಸಿಕೊಂಡು ಹೋಗುವ ಕಾರ್ಯ ಮಾಡುತ್ತೇನೆ. ಬಂಗಾರಪ್ಪನವರ ಚಿಂತನೆ ಅಧ್ಯಯನ ವಿಷಯವಾಗಬೇಕು ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.