ಬ್ಯಾಂಕಿಂಗ್ ನೇಮಕಾತಿ: ಅರ್ಜಿ ಆಹ್ವಾನ
Team Udayavani, Oct 26, 2021, 6:33 AM IST
ಬ್ಯಾಂಕ್‌ನಲ್ಲಿ ಅಧಿಕಾರಿಯಾಗಬೇಕೆಂದು ಕನಸು ಹೊತ್ತವರಿಗೆ ಇಲ್ಲಿದೆ ಮತ್ತೊಂದು ಸಿಹಿ ಸುದ್ದಿ, ಬ್ಯಾಂಕ್ ಸಿಬಂದಿ ನೇಮಕಾತಿ ಸಂಸ್ಥೆ ದೇಶದ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಸರಿಸುಮಾರು 4,135 ಹುದ್ದೆಗಳಿಗೆ ಪೂರ್ವ ಭಾವಿ ಹಾಗೂ ಮುಖ್ಯ ಪರೀಕ್ಷೆ, ಸಂದರ್ಶನ ನಡೆಸಲು ತೀರ್ಮಾನಿಸಿದೆ. ಪರಿಶಿಷ್ಟ ಜಾತಿಯವರಿಗೆ 679, ಪರಿಶಿಷ್ಟ ಪಂಗಡದವರಿಗೆ 350, ಹಿಂದುಳಿದ ವರ್ಗ ದವರಿಗೆ 1102, ಸಾಮಾನ್ಯ ವರ್ಗದವರಿಗೆ 1,600, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 404 ಹುದ್ದೆ ಗಳು ದೇಶಾದ್ಯಂತ ಮೀಸಲಾಗಿವೆ. ರಾಜ್ಯದ 12 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು 3 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆ ಆನ್‌ಲೈನ್‌ನಲ್ಲಿ ನಡೆಯಲಿದೆ.
ಯಾವ ಬ್ಯಾಂಕ್‌ನಲ್ಲಿ ಎಷ್ಟು ಹುದ್ದೆ?
ಕೆನರಾ ಬ್ಯಾಂಕ್ 650, ಯೂನಿಯನ್ ಬ್ಯಾಂಕ್‌ಆಫ್ ಇಂಡಿಯಾ 912, ಯೂಕೋ ಬ್ಯಾಂಕ್ 440, ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್ 427,ಇಂಡಿಯನ್ ಓವರ್‌ಸೀಸ್ ಬ್ಯಾಂಕ್ 98, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 620, ಬ್ಯಾಂಕ್ ಆಫ್ ಮಹಾರಾಷ್ಟ್ರ 400, ಬ್ಯಾಂಕ್ ಆಫ್ ಇಂಡಿಯಾ 588 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಾಗಿ ಪ್ರಕಟಿಸಿವೆ.
ಶೈಕ್ಷಣಿಕ ಅರ್ಹತೆ
ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಕೇಂದ್ರ ಸರಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆ.
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್.
ಅರ್ಜಿ ಸಲ್ಲಿಕೆ ದಿನಾಂಕ: ಅ.20ರಿಂದ ನ.10 ರವರೆಗೆ.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಿಮ್ಮ ಆಯ್ಕೆಯ ಬ್ಯಾಂಕ್‌ನ ಆದ್ಯತೆಯ ಆದೇಶವನ್ನು ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಳವಡಿಸಲಾಗಿದೆ. ಅಭ್ಯರ್ಥಿಗಳು ಈ ಹಂತದಲ್ಲಿ ಅವರ ಬ್ಯಾಂಕ್‌ಗಳ ಆದ್ಯತೆಯ ಕ್ರಮವನ್ನು ಅಗತ್ಯವಾಗಿ ಸೂಚಿಸಬೇಕು.
ಪರೀಕ್ಷೆ ಪ್ರಕ್ರಿಯೆ
– ಮೊದಲ ಹಂತ: ಆನ್‌ಲೈ ನ್ ಪೂರ್ವಭಾವಿ ಪರೀಕ್ಷೆ -ನ.4 ಹಾಗೂ ಡಿ.11
-ಎರಡನೇ ಹಂತ: ಆನ್‌ಲೈನ್ ಮುಖ್ಯ ಪರೀಕ್ಷೆ -ಜನವರಿ, 2022
-ಮೂರನೇ ಹಂತ: ಸಂದರ್ಶನ -ಫೆಬ್ರವರಿ /ಮಾರ್ಚ್, 2022
ವಯೋಮಿತಿ
01.10.2021ಕ್ಕೆ, 21 ವರ್ಷಕ್ಕಿಂತ ಕಡಿಮೆ ಇರಬಾರದು. ಮತ್ತು 1.10.2021ಕ್ಕೆ 30 ವರ್ಷಗಳಿಗಿಂತ ಹೆಚ್ಚಿರ ಬಾರದು. ಅಂದರೆ 21 ವರ್ಷದಿಂದ 30 ವರ್ಷದೊಳ ಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಂದ ರೆ ಅಭ್ಯರ್ಥಿಗಳು 02.10.1991ಕ್ಕಿಂತ ಮುಂಚಿತವಾಗಿ ಮತ್ತು 01.10.2001ಕ್ಕಿಂತ ಅನಂತರ ಜನಿಸಿರಬಾರದು. (ಎರಡೂ ದಿನಾಂಕಗಳು ಒಳಗೊಂಡಂತೆ) ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗ ಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ರಿಗೆ 10 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ
850 ರೂ. ಉಳಿದೆಲ್ಲ ಅಭ್ಯರ್ಥಿಗಳಿಗೆ (ಎಖಖ ಸೇರಿ) (ಎಸ್‌ಸಿ/ಎಸ್‌ಟಿ/ಕಗಆಈ/ ಉಗಿಖM ಅಭ್ಯ ರ್ಥಿ ಗಳಿಗೆ 175 ರೂ. (ಎಖಖ ಸೇರಿ) ಆನ್‌ಲೈನ್ ನಲ್ಲಿಯೇ ಅರ್ಜಿ ಶುಲ್ಕವನ್ನೂ ಪಾವತಿ ಸಬೇಕಿರುತ್ತದೆ.
ನೆನಪಿಡಿ: ಒಬಿಸಿ ವರ್ಗಕ್ಕೆ ಸೇರಿದ ಆದರೆ ಕೆನೆ ಪದರದ ಅಡಿಯಲ್ಲಿ ಬರುವ ಅಭ್ಯರ್ಥಿಗಳು ಒಬಿಸಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ. ಅವರು ಆನ್‌ಲೈನ್ ಅರ್ಜಿ ನಮೂ ನೆಯಲ್ಲಿ ತಮ್ಮ ವರ್ಗವನ್ನು ಸಾಮಾನ್ಯ ಎಂದು ಸೂಚಿಸಬೇಕು.
ಇದನ್ನೂ ಓದಿ:ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ
ಪರೀಕ್ಷೆ ಕೇಂದ್ರದಲ್ಲಿ ನೋಂದಣಿ
ಎ. ಅಭ್ಯರ್ಥಿಗಳ ನೋಂದಣಿಯನ್ನು ಫೋಟೋ ಕ್ಯಾಪcರ್ ಮೂಲಕ ಮಾಡಲಾಗುವುದು.
ಬಿ. ಅಭ್ಯರ್ಥಿಯನ್ನು ಪರೀಕ್ಷೆ ಕೇಂದ್ರದಲ್ಲಿ ನಿಲ್ಲಿಸಿ ಛಾಯಾಚಿತ್ರ ತೆಗೆಯಲಾಗುವುದು.
ಸಿ. ಅಭ್ಯರ್ಥಿಗಳಿಗೆ ಸೀಟ್ ನಂಬರ್ ನೀಡಲಾಗುತ್ತದೆ.
ಡಿ. ರಫ್ ಶೀಟ್(ಗಳನ್ನು) ಪ್ರತೀ ಕ್ಯಾಂಡಿಡೇಟ್ ಡೆಸ್ಕ್ ನಲ್ಲಿ ಇರಿಸಲಾಗಿರುತ್ತದೆ. ಪರೀಕ್ಷೆಯ ಕೊನೆಯಲ್ಲಿ ಅಭ್ಯರ್ಥಿಗಳಿಗೆ ಸೂಚಿಸಿದಂತೆ ನಿಗದಿತ ಡ್ರಾಪ್ ಬಾಕ್ಸ್‌ನಲ್ಲಿ ರಫ್‌ಶೀಟ್‌ಗಳನ್ನು ಹಿಂದಿರುಗಿಸಬೇಕು.
ಮುಖ್ಯ ಪರೀಕ್ಷೆಗೆ ಸ್ಟಾಂಪ್ ಮಾಡಿದ ಫೋಟೋ ಕಾಪಿಯನ್ನು ತರದೇ ಇರುವ ಅಭ್ಯರ್ಥಿಗಳನ್ನು ಪರೀಕ್ಷೆಗೆ ಹಾಜರಾಗಲು ಅನುಮತಿಸಲಾಗುವುದಿಲ್ಲ.
ನೇಮಕ ಹೇಗೆ?
ಮೊದಲ ಹಂತದಲ್ಲಿ ಪೂರ್ವ ಭಾವಿ ಪರೀಕ್ಷೆ (ಪ್ರಿಲಿಮ್ಸ…) ನಡೆಯಲಿದೆ. ಬೆಳಗಾವಿ, ಬೆಂಗಳೂರು, ಬೀದರ್, ದಾವಣ ಗೆರೆ, ಧಾರವಾಡ ಕಲಬುರಗಿ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವ ಮೊಗ್ಗ ಮತ್ತು ಉಡುಪಿಯಲ್ಲಿ ಪೂರ್ವಭಾವಿ ಪರೀಕ್ಷೆ ಪರೀಕ್ಷೆ ಕೇಂದ್ರಗಳಿರಲಿವೆ.
ಪೂರ್ವಭಾವಿ ಪರೀಕ್ಷೆ ಒಂದು ಗಂಟೆಗಳ ಕಾಲ ನಡೆಯಲಿದ್ದು (ಪ್ರತೀ ಪತ್ರಿಕೆಗೂ 20 ನಿಮಿಷಗಳಂತೆ ಒಟ್ಟಾರೆ 60 ನಿಮಿಷಗಳು) 100 ಅಂಕಗಳಿಗೆ ಕೇಳಲಾಗುತ್ತದೆ. (ಅಂದರೆ ಪ್ರತೀ ಪ್ರಶ್ನೆಗೆ ಒಂದೊಂದು ಅಂಕ ನಿಗದಿಯಾಗಿರುತ್ತದೆ) ಇದರಲ್ಲಿ ಇಂಗ್ಲಿಷ್ ಭಾಷೆಗೆ 30, ಕ್ವಾಂಟಿಟೇಟಿವ್ ಅಪ್ಟಿ ಟ್ಯೂಡ್‌ಗೆ 35 ಹಾಗೂ ರೀಸನಿಂಗ್ ಎಬಿಲಿಟಿಯ 35 ಪ್ರಶ್ನೆಗಳಿರಲಿವೆ. ಪ್ರತೀ ಪರೀಕ್ಷೆಯಲ್ಲೂ ಕನಿಷ್ಠ ಅಂಕ ಗಳಿಸ ಬೇಕೆಂಬ ನಿಯಮವಿದೆ. ಅದರೆ ಒಟ್ಟಾರೆ ಹೆಚ್ಚು ಅಂಕ ಗಳಿಸುವುದು ಮುಖ್ಯ.
ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತದ ಅಂದರೆ ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆ ಯುತ್ತಾರೆ. ಮುಖ್ಯ ಪರೀಕ್ಷೆಯು ಬೆಂಗಳೂರು, ಹುಬ್ಬಳ್ಳಿ ಮತ್ತು ಮಂಗಳೂರಿನಲ್ಲಿ ಮಾತ್ರ ನಡೆಯಲಿದ್ದು, ಪರೀಕ್ಷೆ ಗಳು ಎರಡು ಹಂತಗಳಲ್ಲಿ ನಡೆಯಲಿವೆ. ನಿಗದಿತ ದಿನ ದಂದು ಆನ್ ಲೈನ್‌ನಲ್ಲಿಯೇ ಎರಡೂ ಲಿಖೀತ ಪರೀಕ್ಷೆ ಗಳು ನಡೆಯಲಿವೆ. ಮುಖ್ಯ ಪರೀಕ್ಷೆಯು 3 ಗಂಟೆಗಳ ಕಾಲ ನಡೆಯಲಿದ್ದು, 155 ಪ್ರಶ್ನೆಗಳನ್ನು 200 ಅಂಕಗಳಿಗೆ ಕೇಳಲಾಗುತ್ತದೆ.
I. Reasoning & Computer Aptitude 45 ಪ್ರಶ್ನೆ 60 ಅಂಕಗಳು 60 ನಿಮಿಷಗಳು,
II General/ Economy/ Banking Awareness 40 ಪ್ರಶ್ನೆ 40 ಅಂಕಗಳು 35 ನಿಮಿಷಗಳು,
III. English Language 35 ಪ್ರಶ್ನೆ 40 ಅಂಕಗಳು 40 ನಿಮಿಷಗಳು,
VI. Data Analysis & Interpretation 35 ಪ್ರಶ್ನೆ 60 ಅಂಕಗಳು 45 ನಿಮಿಷಗಳು.
ಹೀಗೆ ಒಟ್ಟಾರೆ 155 ಪ್ರಶ್ನೆಗಳಿಗೆ 200 ಅಂಕಗಳು ನಿಗದಿಯಾಗಿದ್ದು ಹಾಗೂ 180 ನಿಮಿಷಗಳು ಸಮಯ ನಿಗದಿಪಡಿಸಲಾಗಿದೆ. ಪ್ರಶ್ನೆಗಳು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಇರುತ್ತದೆ. ತಪ್ಪು ಉತ್ತರ ಗುರುತಿಸಿದಲ್ಲಿ, ಪ್ರಿಲಿಮ್ಸ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಆಯಾ ವಿಷಯಕ್ಕೆ ಪ್ರತಿ ಪ್ರಶ್ನೆಗೆ ನಿಗದಿ ಪಡಿಸಿದ ಅಂಕದ 0.25 ಅಂಕವನ್ನು ಋಣಾತ್ಮಕ ಮೌಲ್ಯಮಾಪನದ ನಿಯಮ ದಂತೆ ಗಳಿಸಿದ ಅಂಕದಿಂದ ಕಳೆಯಲಾಗುತ್ತದೆ.
ಸಂದರ್ಶನದ ಸಂದರ್ಭದಲ್ಲಿ “ಒಬಿಸಿ’ ವರ್ಗದ ಅಡಿಯಲ್ಲಿ ಹಂತ -3 ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು ಒಬಿಸಿ ಪ್ರಮಾಣಪತ್ರವನ್ನು ‘ಕೆನೆರಹಿತ ಪದರ’ (‘Nಟn-ಇrಛಿಚಞy lಚyಛಿr’) ಶರತ್ತನ್ನು ಒಳಗೊಂಡಿರು ವುದನ್ನು ಸಲ್ಲಿಸಬೇಕಾಗುತ್ತದೆ. ಉಗಖ ವರ್ಗದ ಅಡಿಯಲ್ಲಿ ಹಂತ -3ಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳು 2020-21ರ ಆರ್ಥಿಕ ವರ್ಷದ ಒಟ್ಟು ವಾರ್ಷಿಕ ಆದಾಯದ ಆಧಾರದ ಮೇಲೆ ಉಗಖ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ.
ಆಯ್ಕೆ ಪಟ್ಟಿ
ಅಂತಿಮ ಸುತ್ತಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಂತ-ಐಐ ಮತ್ತು ಹಂತ-ಐಐಐ ಎರಡರಲ್ಲೂ ಪ್ರತ್ಯೇಕವಾಗಿ ಅರ್ಹತೆ ಪಡೆದಿರಬೇಕು. ಸಂದರ್ಶನಕ್ಕೆ ನಿಗದಿಪಡಿಸಲಾದ ಒಟ್ಟು ಅಂಕಗಳು 100. ಸಂದರ್ಶನದಲ್ಲಿ ಕನಿಷ್ಠ ಅರ್ಹತಾ ಅಂಕಗಳು ಶೇ.40 (ಶೇ.35 SC/ST/OBC/PWBD ಈ ಅಭ್ಯರ್ಥಿಗಳಿಗೆ). ಆನ್‌ಲೈನ್ ಮುಖ್ಯ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳನ್ನು ಕ್ರಮವಾಗಿ 80:20 ಅನುಪಾತದ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ, ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಕೆಗೆ ಲಿಂಕ್:
Authorised Website: www.ibps.inn
-ಆರ್.ಕೆ.ಬಾಲಚಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.