Bantwal: ಅಪಘಾತದ ಗಾಯಾಳು 20 ದಿನಗಳ ಬಳಿಕ ಸಾವು
Team Udayavani, Oct 30, 2024, 12:09 AM IST
ಬಂಟ್ವಾಳ: ಸುಮಾರು 20 ದಿನಗಳ ಹಿಂದೆ ಬಿ.ಸಿ. ರೋಡಿನ ತಲಪಾಡಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ವ್ಯಕ್ತಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ ಭೋಜ ಮೂಲ್ಯ (62) ಮೃತಪಟ್ಟವರು. ಅವರು ಅ. 11ರಂದು ಸಂಜೆ 7ರ ಸುಮಾರಿಗೆ ಮನೆಗೆ ಕೋಳಿ ಮಾಂಸ ಕೊಂಡುಹೋಗಲು ತಲಪಾಡಿಯಲ್ಲಿ ಹೆದ್ದಾರಿ ದಾಟುತ್ತಿದ್ದ ಸಂದರ್ಭ ಬೈಕ್ ಢಿಕ್ಕಿಯಾಗಿ ಕಾಲಿಗೆ ಗಾಯವಾಗಿತ್ತು. ಬಳಿಕ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಒಂದು ವಾರಗಳ ಕಾಲ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು.
ಆದರೆ ಅ. 28ರಂದು ಮತ್ತೆ ಅನಾರೋಗ್ಯಕ್ಕೆ ತುತ್ತಾಗಿ ತುಂಬೆ ಆಸ್ಪತ್ರೆಗೆ ದಾಖಲಾಗಿದ್ದು, ಮಂಗಳ ವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಂಗಳವಾರ ಪಿಎಸ್ಐ ಸುತೇಶ್ ಕೆ.ಪಿ. ಅವರ ಉಪಸ್ಥಿತಿಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ.
ಭೋಜ ಮೂಲ್ಯ ಅವರು ಅಂಬಾಸಿಡರ್ ಕಾರು ಚಾಲಕರಾಗಿದ್ದು, ಬಿ.ಸಿ. ರೋಡು ಪರಿಸರದಲ್ಲಿ ಎಲ್ಲರಿಗೂ ಚಿರಪರಿಚಿತರಾಗಿದ್ದರು. ಜತೆಗೆ ಕಾರು ಚಾಲಕ-ಮಾಲಕರ ಸಂಘಟನೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.