ಬಂಟ್ವಾಳ: 12 ಪ್ರಕರಣ ಭೇದಿಸಿದ ಪೊಲೀಸರು; ವಾರಸುದಾರರಿಗೆ ಹಸ್ತಾಂತರ
Team Udayavani, Nov 22, 2021, 5:49 PM IST
ಬಂಟ್ವಾಳ: ಬಂಟ್ವಾಳ ನಗರ ಠಾಣಾ ಪೋಲೀಸ್ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಹಾಗೂ ಎಸ್.ಐ.ನೇತ್ರತ್ವದಲ್ಲಿ ಈ ವರ್ಷದಲ್ಲಿ ಒಟ್ಟು 12 ಪ್ರಕರಣಗಳನ್ನು ಭೇದಿಸಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
2021 ರಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ, ಸುಲಿಗೆ, ವಂಚನೆ ಸೇರಿದಂತೆ ಒಟ್ಟು 12 ಪ್ರಕರಣಗಳನ್ನು ಬೇಧಿಸಿ ಒಟ್ಟು 17 ಲಕ್ಷದ 33 ಸಾವಿರ ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ವಿವಿಧ ಪ್ರಕರಣಗಳಲ್ಲಿ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿರುವ ಪೋಲೀಸರು ನ್ಯಾಯಾಲಯದ ಅನುಮತಿ ಪಡೆದುಕೊಂಡು ನ.22 ರಂದು ಸಹಾಯಕ ಪೋಲೀಸ್ ಅಧೀಕ್ಷಕ ಶಿವಾಂಷು ರಜಪೂತ್ ಅವರು ವಾರಸುದಾರರಿಗೆ ಹಸ್ತಾಂತರ ಮಾಡಿದರು.
11,34,000 ರೂ ಮೌಲ್ಯದ 252.390 ಗ್ರಾಂ.ತೂಕದ ಚಿನ್ನಾಭರಣಗಳು, 5,49,000 ಮೌಲ್ಯದ ಬೋಲೇರೊ ಜೀಪ್, ಒಂದು ಆಲ್ಟೋ ಕಾರು, ಒಂದು ಮೋಟಾರ್ ಸೈಕಲ್, ರೂ.50000 ಮೌಲ್ಯದ ಲ್ಯಾಪ್ ಟಾಪ್ ಗಳನ್ನು ಸ್ವಾಧೀನಪಡಿಸಿಕೊಂಡು ಪ್ರಕರಣಗಳನ್ನು ಭೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.
ಇದನ್ನೂ ಓದಿ:ಕೊಟ್ಟಿಗೆಹಾರದಲ್ಲಿ ತೇಜಸ್ವಿ ಓದು ಕಾರ್ಯಕ್ರಮ
ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ ಅವರ ನಿರ್ದೇಶನದಂತೆ, ಹೆಚ್ಚುವರಿ ಪೋಲೀಸ್ ಅಧೀಕ್ಷಕರಾದ ಡಾ. ಶಿವಕುಮಾರ್ ಗುಣಾರೆರವರ ಮಾರ್ಗದರ್ಶನ ದಲ್ಲಿ, ಬಂಟ್ವಾಳ ಎ.ಎಸ್.ಪಿ.ಶಿವಾಂಷು ರಜಪೂತ್ ಐ.ಪಿ.ಎಸ್.ನೇತ್ರತ್ವದಲ್ಲಿ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಹಾಗೂ ಬಂಟ್ವಾಳ ನಗರ ಠಾಣಾ ಎಸ್ ಐ.ಅವಿನಾಶ್ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.