Bantwala: ತಲೆಮರೆಸಿಕೊಂಡಿದ್ದ ಕಳವು ಆರೋಪಿ ಬಂಧನ
Team Udayavani, Nov 6, 2024, 11:37 PM IST
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಡಗಬೆಳ್ಳೂರಿನ ದೇವಸ್ಥಾನವೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬುಧವಾರ ಬಂಟ್ವಾಳ ಪೊಲೀಸರು ಕಾಸರ
ಗೋಡಿನಲ್ಲಿ ಬಂಧಿಸಿದ್ದಾರೆ.
ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್ ಶರೀಫ್ (44) ಬಂಧಿತ ಆರೋಪಿ.
ಈತ 2004ರ ನವೆಂಬರ್ನಲ್ಲಿ ಬಡಗಬೆಳ್ಳೂರಿನ ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ದೇವಸ್ಥಾನದ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದ.ಕರ್ನಾಟಕ ಮತ್ತು ಕೇರಳ ರಾಜ್ಯದ ಹಲವಾರು ಕಡೆ ವಿಳಾಸ ಬದಲಾವಣೆ ಮಾಡಿಕೊಂಡು ಬಂಧನಕ್ಕೆ ಸಿಗದೆ ಕಾಸರಗೋಡಿನ ಪುತ್ತಿಗೆಯಲ್ಲಿ ವಾಸವಾಗಿದ್ದ. ಪೊಲೀಸರು ಆತನ ಕುರಿತು ಬೇರೆ ಬೇರೆ ಆಯಾಮಗಳಿಂದ ಮಾಹಿತಿ ಕಲೆ ಹಾಕಿ ಕಾಸರಗೋಡಿನಿಂದ ವಶಕ್ಕೆ ಪಡೆದಿದ್ದಾರೆ.
ಈತನ ವಿರುದ್ಧ ಬಂಟ್ವಾಳ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಆರೋಪಿ ಮೊಹಮ್ಮದ್ ಶರೀಫ್ಇತ್ತೀಚಿಗೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.