ಬಂಟ್ವಾಳ: ಕಾರಿನೊಳಗೆ ವ್ಯಕ್ತಿ ಅನುಮಾನಸ್ಪದ ಮೃತ್ಯು
Team Udayavani, Mar 13, 2023, 9:56 AM IST
ಬಂಟ್ವಾಳ: ಕಾರಿನೊಳಗೆ ವ್ಯಕ್ತಿಯೋರ್ವ ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಗೋಳ್ತಮಜಲು ಗ್ರಾಮದ ಹೊಸೈಮಾರ್ ನಿವಾಸಿ ಜಗದೀಶ್ ಮೃತಪಟ್ಟ ಯುವಕ.
ಜಗದೀಶ್ ವೃತ್ತಿಯಲ್ಲಿ ಚಾಲಕನಾಗಿದ್ದು, ಕಳೆದ ಕೆಲವು ವರ್ಷಗಳ ಹಿಂದೆ ವಿಡಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದ.
ಮಾ.12 ರ ಬೆಳಿಗ್ಗೆ ಜಗದೀಶ್ ತನ್ನ ಬಾವನ ಜೊತೆ ತರವಾಡು ಮನೆಯಲ್ಲಿ ದೈವದ ಕಾರ್ಯಕ್ಕೆ ಮಕ್ಕಳ ಜೊತೆ ಹೋಗಿ ವಾಪಾಸ್ ಮನೆಗೆ ಬರುವ ವೇಳೆ ಕಲ್ಲಡ್ಕ ತಲುಪಿದಾಗ ಸುಮಾರು 1.30 ಗಂಟೆ ಆಗಿತ್ತು. ಆ ಸಮಯ ಜಗದೀಶ್ ತನ್ನ ಭಾವನಲ್ಲಿ, ಕಾರು ಚಲಾಯಿಸಲು ಕಷ್ಟವಾಗುತ್ತಿದೆ, ನಾನು ಮನೆಗೆ ಮತ್ತೆ ಬರುತ್ತೇನೆ, ನೀವು ಮಕ್ಕಳ ಜೊತೆ ಮನೆಗೆ ಹೋಗಿ ಎಂದು ಹೇಳಿ ಕಳುಹಿಸಿ ಕಾರಿನ ಸೀಟಿನಲ್ಲಿಯೇ ಮಲಗಿದ್ದ ಎನ್ನಲಾಗಿದೆ.
ಆದರೆ ರಾತ್ರಿ 7 ಗಂಟೆಯಾದರೂ ಈತ ಮನೆಗೆ ಬಾರದ ಹಿನ್ನೆಲೆ ಮತ್ತೆ ಬಂದು ನೋಡಿದಾಗ ಕಾರಿನ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿರುವುದು ಹೊರಗಿನಿಂದ ಕಂಡು ಬಂತು. ಕಾರಿನ ಗ್ಲಾಸ್ ಹಾಕಿ ಮಲಗಿದ್ದರಿಂದ ಕಾರಿನ ಡೋರ್ ಓಪನ್ ಮಾಡಿದಾಗ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.
ಕಾರಿನ ಕಿಟಕಿ, ಬಾಗಿಲನ್ನು ಮುಚ್ಚಿ ಮಲಗಿದ್ದರಿಂದ ಗಾಳಿ ಇಲ್ಲದೆ ಸಾವನ್ನಪಿದ್ದಾ? ಅಥವಾ ಇನ್ಯಾವದೋ ಕಾಯಿಲೆಯಿಂದ ಮೃತಪಟ್ಟಿದ್ದಾ? ಎಂಬುದು ವೈದ್ಯಕೀಯ ವರದಿ ಹಾಗೂ ಪೊಲೀಸ್ ತನಿಖೆ ಬಳಿಕ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.