ಬಂಟ್ವಾಳ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಸಾವು
Team Udayavani, Feb 20, 2023, 2:47 PM IST
ಬಂಟ್ವಾಳ: ರೈಲ್ವೆ ಟ್ರಾಕ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ರೈಲು ಬಡಿದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಅಮ್ಟೂರು ಎಂಬಲ್ಲಿ ಫೆ.20 ರಂದು ಸೋಮವಾರ ಮುಂಜಾನೆ ವೇಳೆ ನಡೆದಿದೆ.
ಬಿಜಾಪುರ ಮೂಲದ ಮಲ್ಲು ಆಧಿಮಣಿ (33) ಮೃತಪಟ್ಟ ಅವಿವಾಹಿತ ಯುವಕ.
ಬಿಜಾಪುರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಈತ ಇತ್ತೀಚಿಗೆ ಮಾನಸಿಕವಾಗಿ ಖಿನ್ನತೆಯಿಂದ ಇದ್ದ ಎಂದು ಹೇಳಲಾಗಿದ್ದು, ಫೆ.17 ರಂದು ಶುಕ್ರವಾರ ಮನೆಯಲ್ಲಿ ಯಾರಿಗೂ ಹೇಳದೆ ಮನೆ ಬಿಟ್ಟು ಹೋಗಿದ್ದ ಎಂದು ಮನೆಯವರು ತಿಳಿಸಿದ್ದಾರೆ ಎಂದು ಹೇಳಲಾಗಿದೆ.
ಆನಾರೋಗ್ಯದಿಂದ ಇದ್ದ ಈತ ಔಷಧ ಪಡೆಯುತ್ತಿದ್ದನು. ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಈತ ಕೂಲಿಯನ್ನು ಅರಸಿಕೊಂಡು ದ.ಕ.ಜಿಲ್ಲೆಗೆ ಬಂದಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಮಂಗಳೂರು – ಬೆಂಗಳೂರು ರೈಲು ಹಳಿಯ ಅಮ್ಟೂರು ತಿರುವಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಧ್ಯರಾತ್ರಿ ರೈಲು ಡಿಕ್ಕಿ ಹೊಡೆದು ಈತನ ತಲೆಗೆ ಗಂಭೀರವಾಗಿ ಗಾಯವಾಗಿ ರಕ್ತಸ್ರಾವವಾಗಿ ಮೃತಪಟ್ಟಿರಬೇಕು ಎಂದು ಊಹಿಸಲಾಗಿದೆ.
ರೈಲ್ವೆ ಟ್ರಾಕ್ ಪೆಟ್ರೋಲಿಂಗ್ ಮಾಡುವ ಸಿಬ್ಬಂದಿಗಳು ಮೃತದೇಹವನ್ನು ಗಮನಿಸಿ ಇಲಾಖೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಂಗಳೂರು ರೈಲ್ವೆ ಪೊಲೀಸ್ ಇನ್ಸ್ ಪೆಕ್ಟರ್ ಮೋಹನ್ ಹಾಗೂ ಎ.ಎಸ್ ಐ.ಮದುಚಂದ್ರ ಅವರೊಂದಿಗೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿರಿಸಿ ಮನೆಯವರನ್ನು ಸಂಪರ್ಕ ಮಾಡಿದ್ದಾರೆ.
ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.