![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 28, 2023, 12:07 PM IST
ಬಂಟ್ವಾಳ: ಫೆ.27 ರ ಸಂಜೆ ನಡೆದ ಕಾರು- ಸ್ಕೂಟರ್ ಅಪಘಾತದಲ್ಲಿ ಸ್ಕೂಟರ್ ಸವಾರ ಗಾಯಗೊಂಡು ಚಿಕಿತ್ಸೆ ಫಲಿಸದೆ ರಾತ್ರಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಸ್ಕೂಟರ್ ಸವಾರ ತಿಮ್ಮಪ್ಪ ಮೃತಪಟ್ಟ ವ್ಯಕ್ತಿ.
ಘಟನೆಯ ವಿವರ: ಕಾರು ಓವರ್ ಟೇಕ್ ಮಾಡಲು ಹೋಗಿ ಅದೇ ಮಾರ್ಗದಲ್ಲಿ ಬರುತ್ತಿದ್ದ ಸ್ಕೂಟರ್ ನ ಬಲ ಬದಿಯ ಹ್ಯಾಂಡಲ್ ಗೆ ಕಾರಿನ ಎಡ ಬದಿ ತಾಗಿ ಅಪಘಾತವಾದ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಗ್ರಾಮದ ರಾಮಲಕಟ್ಟೆ ಎಂಬಲ್ಲಿ ಫೆ. 27 ರಂದು ನಡೆದಿತ್ತು.
ಅಪಘಾತದ ಪರಿಣಾಮ ತಿಮ್ಮಪ್ಪ ಅವರು ರಸ್ತೆಗೆ ಎಸೆಯಲ್ಪಟ್ಟು ಬಿದ್ದು ಗಾಯಗೊಂಡಿದ್ದರು. ಆ ನಂತರ ಸಾರ್ವಜನಿಕರು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅದೇ ದಿನ ರಾತ್ರಿ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಕಾರು ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನ ಅಪಘಾತಕ್ಕೆ ಕಾರನ ಎನ್ನಲಾಗುತ್ತಿದೆ. ಈ ಬಗ್ಗೆ ಸೀತಾರಾಮ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.